LPG shortage; MPs should speak in Parliament and provide justice to the people: DCM D.K. Shivakumar

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಶಿವಕುಮಾರ್ ಅವರು ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ದೆಹಲಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಿ ರಾಜ್ಯದ ಸಂಸದರ ಸಭೆ ನಡೆಸಲಾಯಿತು. 24 ಜನ ಸಂಸದರು ಬಂದಿದ್ದರು. ಜನತಾದಳ ಹೊರತು ಪಡಿಸಿ ಬಿಜೆಪಿ, ಕಾಂಗ್ರೆಸ್, ಸ್ವತಂತ್ರ ಹಾಗೂ ನಾಮನಿರ್ದೇಶಿತ ಸಂಸದರು ಸಭೆಯಲ್ಲಿ ಹಾಜರಿದ್ದರು. ರಾಜ್ಯದ ಅನೇಕ ನೀರಾವರಿ ಯೋಜನೆಗಳ ಸ್ಥಿತಿಗತಿ ಬಗ್ಗೆ ಅವರಿಗೆ ವಿವರಿಸಿದ್ದೇನೆ” ಎಂದು ತಿಳಿಸಿದರು.

“ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಪಿ.ಸಿ.ಮೋಹನ್ ಅವರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಸೋಮಣ್ಣ ಅವರು ಹಾಗೂ ಪ್ರಹ್ಲಾದ್ ಜೋಶಿ ಅವರು ‘ಸಭೆಗೆ ಬರಲು ಆಗುವುದಿಲ್ಲ. ಇನ್ನೊಂದು ದಿನ ಹಾಜರಾಗುತ್ತೇವೆ‌’ ಎಂದು ಹೇಳಿದರು. ಪ್ರಧಾನಿಯವರು ಹಾಗೂ ಜಲ ಶಕ್ತಿ ಸಚಿವರನ್ನು ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಿ ಭೇಟಿಯಾಗುವ ತೀರ್ಮಾನ ಮಾಡಲಾಗಿದೆ. ಇದಕ್ಕೆ ಒಮ್ಮತವೂ ಮೂಡಿದೆ” ಎಂದರು.

“ಈ ವಿಚಾರದಲ್ಲಿ ನಮ್ಮ ಕಾನೂನು ಸಲಹೆಗಾರರಾದ ಮೋಹನ್ ಕಾತರಕಿ, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಅಡ್ವೋಕೇಟ್ ಜನರಲ್ ಅವರು ಒಂದೆರಡು ಒಳ್ಳೆಯ ವಿಚಾರಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡುತ್ತೇವೆ” ಎಂದು ಮಾಹಿತಿ ನೀಡಿದರು.

“ನಾಗರಿಕ ವಿಮಾನಯಾನ ಸಚಿವರನ್ನು ಭೇಟಿ ಮಾಡಿ ಪ್ರೀಮಿಯಂ ಎಫ್ ಎಆರ್, ಕಟ್ಟಡಗಳ ಎತ್ತರದ ಕಾನೂನುಗಳು ನಮ್ಮ ಹಾಗೂ ಬೇರೆ, ಬೇರೆ ರಾಜ್ಯಗಳಲ್ಲಿ ಹೇಗಿದೆ ಎನ್ನುವ ವಿಚಾರಗಳನ್ನು ಅವರ ಗಮನಕ್ಕೆ ತರಲಾಗಿದೆ. ರಕ್ಷಣಾ ಸಚಿವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚೆ ನಡೆಸಬೇಕಿದೆ. ನಮ್ಮ ರಾಜ್ಯದ ಸಮಸ್ಯೆಗಳನ್ನು ತಿಳಿಸಿದ್ದೇವೆ. ಎಲ್ಲರೂ ಧನಾತ್ಮಕವಾಗಿ ಸ್ಪಂದಿಸಿದ್ದಾರೆ” ಎಂದರು.

ಎರಡನೇ ವಿಮಾನ ನಿಲ್ದಾಣದ ಬಗ್ಗೆ ಕೇಳಿದಾಗ, “ಸಚಿವರಾದ ಎಂ.ಬಿ.ಪಾಟೀಲ್ ಅವರು ಪ್ರಸ್ತಾವನೆ ಕೊಟ್ಟಿದ್ದಾರೆ. ಅದಕ್ಕೆ ಸಚಿವರು ಅಭಿಪ್ರಾಯವನ್ನೂ ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆಯ ಮುಂದಿಟ್ಟು ಸಾಧಕ ಭಾದಕಗಳನ್ನು ಚರ್ಚೆ ನಡೆಸಬೇಕು. ಭೂಸ್ವಾಧೀನ, ಹಣಕಾಸು ಮತ್ತಿತರ ಸಂಗತಿಗಳ ಬಗ್ಗೆ ಚರ್ಚೆ ನಡೆಸಬೇಕಿದೆ. ಅವರು ಸಹ ಅಧ್ಯಯನ ನಡೆಸಿ ಒಂದು ವರದಿ ನೀಡಿದ್ದಾರೆ‌. ಕಟ್ಡಡಗಳ ಎತ್ತರದ ಮಿತಿ ಕುರಿತಂತೆ ಜಾಗತಿಕ ನಗರಗಳಲ್ಲಿ ಯಾವ ರೀತಿಯ ಕಾನೂನುಗಳಿವೆ ಎಂದು ಕೇಂದ್ರ ವಿಮಾನಯಾನ ಸಂಸ್ಥೆಯವರು ವರದಿ ಮಾಡಿದ್ದಾರೆ. ಇದರಿಂದ ಪ್ರಪಂಚದ ಬೇರೆ ಕಡೆ ಇರುವ ಮಾನದಂಡಗಳ ಬಗ್ಗೆ ತಿಳಿಯಲಿದೆ‌. ಆ ವರದಿ ತರಿಸಿಕೊಂಡು ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.

ಹೈಕಮಾಂಡ್ ತೀರ್ಮಾನದಂತೆ ಬಿ ಫಾರಂ ವಿತರಣೆ

ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಎನ್ನುವ ಬಗ್ಗೆ ಕೇಳಿದಾಗ, “ನಾನು ಕಳೆದ ಎರಡು ತಿಂಗಳಿನಲ್ಲಿ ಬೂತ್ ಮಟ್ಟದಿಂದ ಹಿಡಿದು ಎಲ್ಲಾ ಹಂತಗಳಿಂದಲೂ ವರದಿ ತರಿಸಿಕೊಂಡಿದ್ದೇನೆ. ನಮ್ಮ ನಾಯಕರುಗಳ ತಂಡವು ಭೇಟಿ ನೀಡಿ ಅವರ ಅಭಿಪ್ರಾಯಗಳನ್ನು ನನಗೆ ಕೊಟ್ಟಿದ್ದಾರೆ. ನಾನು ಕೆಲವರ ಬಳಿ ಮಾತನಾಡಿದ್ದೇನೆ‌. ಎರಡು ಮೂರು ದಿನಗಳಲ್ಲಿ ಎಐಸಿಸಿ ಕಾರ್ಯದರ್ಶಿಗಳು ಬರಲಿದ್ದಾರೆ. ನಾನು ಹಾಗೂ ಮುಖ್ಯಮಂತ್ರಿಯವರು ಎರಡು ಕ್ಷೇತ್ರದಲ್ಲಿ ಏನು ಮಾಡಬೇಕು ಎಂದು ಚರ್ಚೆ ನಡೆಸಿದ್ದೇವೆ. ನಾನು ಸಾರ್ವಜನಿಕವಾಗಿ ಹೇಳಲು ಆಗುವುದಿಲ್ಲ. ಪಕ್ಷ ಗೆಲ್ಲಬೇಕು ಹಾಗೂ ಪಕ್ಷದ ಹಿತದೃಷ್ಟಿಯಿಂದ ನಾನು ಹಾಗೂ ಮುಖ್ಯಮಂತ್ರಿಯವರು ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಆ ಪ್ರಕಾರ ಬಿ ಫಾರಂ ವಿತರಣೆ ಮಾಡಲಾಗುವುದು” ಎಂದು ತಿಳಿಸಿದರು.

ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತದೆಯೇ ಎಂದು ಕೇಳಿದಾಗ, “ಇಲ್ಲಿ ಕುಟುಂಬ ಮುಖ್ಯವಾಗುವುದಿಲ್ಲ‌. ಪಕ್ಷ ಗೆಲ್ಲಬೇಕು. ಪಕ್ಷವೇ ಇಲ್ಲಿ ಮುಖ್ಯ. ಪಕ್ಷ ಏನು ಹೇಳುತ್ತದೆಯೋ ಆ ರೀತಿ ನಡೆಯಬೇಕು. ಏಕೆಂದರೆ ಎರಡೂ ಕ್ಷೇತ್ರಗಳು ಪ್ರಮುಖ ಮುಖಂಡರ ಸ್ಥಾನಗಳು. ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಮಹಾಸಭಾ ಅಧ್ಯಕ್ಷರ ಸ್ಥಾನವದು. ಜೊತೆಗೆ ಅಲ್ಲಿ ಅಲ್ಪಸಂಖ್ಯಾತರು ಮುಖ್ಯ. ಹಿಂದಿನಿಂದಲೂ ಬೆಂಬಲ ನೀಡಿಕೊಂಡು ಬಂದಿದ್ದಾರೆ. ಅವರದ್ದು ಸಹ ಪ್ರಸ್ತಾಪವಿದೆ. ಇದರ ಬಗ್ಗೆ ಎಲ್ಲರ ಜೊತೆ ಕುಳಿತು ಮಾತನಾಡಿ ಬಗೆಹರಿಸಬೇಕು. ಕಳೆದ ಚುನಾವಣೆಯಲ್ಲಿ ಟಿಕೆಟ್ ದೊರೆಯದೇ ಇದ್ದ ನಾಯಕರಿಗೆ ಸ್ಥಾನಮಾನಗಳನ್ನು ನೀಡಲಾಗಿದೆ”ಎಂದರು.

ನಿಮಗೆ ಯಾರಿಗೆ ಟಿಕೆಟ್ ನೀಡಬೇಕು, ಗೆಲುವು ಯಾರದ್ದು ಎನ್ನುವ ಸ್ಪಷ್ಟತೆಯಿದೆಯೇ ಎಂದು ಕೇಳಿದಾಗ, “ಇಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ, ಸಮೀಕ್ಷಾ ವರದಿಗಿಂತ ಪಕ್ಷ, ಕಾರ್ಯಕರ್ತರು ಏನು ಹೇಳುತ್ತಾರೆ ಎಂಬುದು ಮುಖ್ಯ” ಎಂದರು.

ಅಸ್ಸಾಂ ಚುನಾವಣೆಗೆ ‘ಕರ್ನಾಟಕವನ್ನು ಕ್ಯಾಶ್ ಕೌ’ ಮಾಡಿಕೊಳ್ಳಲಾಗಿದೆ ಎನ್ನುವ ದಿವಂಗತ ಅನಂತಕುಮಾರ್ ಅವರ ಪುತ್ರಿ ಐಶ್ವರ್ಯ ಅವರ ಟೀಕೆಯ ಬಗ್ಗೆ ಕೇಳಿದಾಗ, “ಅವರು ಯಾರು ಎಂದು ನನಗೆ ಗೊತ್ತಿಲ್ಲ.‌ ನಮ್ಮ ಮನೆಯಲ್ಲೂ ಹಸುಗಳಿವೆ, ಅವುಗಳನ್ನು ನೋಡಿದ್ದಾರಾ ಅವರು. ಕೊಡುಗೆ ಕೊಟ್ಟ ಹಸುಗಳನ್ನು ಊರಿನಲ್ಲಿ ಕಟ್ಟಿದ್ದೇವೆ” ಎಂದರು.

ಅಸ್ಸಾಂ ಚುನಾವಣೆ ಕುರಿತಂತೆ ನಾಯಕರ ಜೊತೆ ಚರ್ಚೆ ನಡೆಸಲಾಯಿತು. ಇಂದು ಸಹ ಜೂಮ್ ಮುಖಾಂತರ ಸಭೆ ನಡೆಸಲಾಗುವುದು‌. ಜೊತೆಗೆ ಪ್ರಚಾರ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುವುದು” ಎಂದು ಹೇಳಿದರು.

ಮಂತ್ರಿಯಾಗುವ ಆಸೆ ತಪ್ಪಲ್ಲ

ಸಚಿವ ಸಂಪುಟ ಪುನರ್ ರಚನೆ ಹಾಗು ಹೊಸಬರನ್ನು ಪರಿಗಣಿಸಿ ಎನ್ನುವ ಆಗ್ರಹದ ಬಗ್ಗೆ ಕೇಳಿದಾಗ, “ಮಂತ್ರಿಯಾಗಬೇಕು ಎಂದು ಆಸೆ ಪಡುವುದರಲ್ಲಿ ತಪ್ಪೇನಿದೆ. ಮುಖ್ಯಮಂತ್ರಿಯವರು ಸಂಪುಟ ಪುನರ್ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರಲ್ಲವೇ‌. ಅವರು ಹೇಳಿದ ಮೇಲೆ ಖಾಲಿಯಿದೆ ಎಂದು ತಿಳಿದು ಪ್ರಯತ್ನ ಪಡುತ್ತಿದ್ದಾರೆ” ಎಂದರು.

ಕಾಲ ನಿರ್ಣಯ ಮಾಡುತ್ತೆ

ಸಂಪುಟ ಪುನರ್ ರಚನೆಯೇ ಅಥವಾ ಅಧಿಕಾರ ಹಂಚಿಕೆಯೇ ಎಂದಾಗ, “ಕಾಲ ನಿರ್ಣಯ ಮಾಡುತ್ತದೆ” ಎಂದರು.

ಪ್ರಿಯಾಂಕಾ ಗಾಂಧಿ ಅವರೊಟ್ಟಿಗೆ ಪ್ರತ್ಯೇಕ ಸಭೆ ನಡೆಸಲಾಯಿತು ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ, “ನಾನು ಅದರ ಬಗ್ಗೆ ಚರ್ಚೆ ಮಾಡಲು ಹೋಗುವುದಿಲ್ಲ. ಯಾರ ಬಳಿ ಏನು ಚರ್ಚೆ ಮಾಡಿದ್ದೇನೆ ಎನ್ನುವ ಬಗ್ಗೆ ಹೇಳಲು ಹೋಗುವುದಿಲ್ಲ. ಕಾಲ ನಿರ್ಣಯ ಮಾಡುತ್ತದೆ” ಎಂದರು.

ಕೆ.ಸಿ.ವೇಣುಗೋಪಾಲ್ ಅವರು ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಹೌದು ಹುದ್ದೆ ಖಾಲಿಯಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಪಕ್ಷ ಹಾಗೂ ಶಾಸಕರು ತೀರ್ಮಾನ ಮಾಡಲಿದ್ದಾರೆ ಎಂದೂ ಹೇಳಿದ್ದಾರೆ” ಎಂದರು.

ರಾಜಕೀಯ

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು" ಎಂದು

[ccc_my_favorite_select_button post_id="120333"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!