Candidates for by-elections selected by consensus: DCM D.K. Shivakumar

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

‘ನಾನು, ಮುಖ್ಯಮಂತ್ರಿಯವರು ಹಾಗೂ ಜಮೀರ್ ಅಹಮದ್, ನಾಸೀರ್ ಹುಸೇನ್, ಸಲೀಂ ಅಹ್ಮದ್, ಹುಸೇನ್, ಹ್ಯಾರಿಸ್, ಜಬ್ಬಾರ್ ಅವರು ಎಲ್ಲ ಅಲ್ಪಸಂಖ್ಯಾತ ನಾಯಕರು, ಎಐಸಿಸಿ ಕಾರ್ಯದರ್ಶಿಗಳ ಜತೆ ಮಾತನಾಡಿ ಒಮ್ಮತದ ತೀರ್ಮಾನಕ್ಕೆ ಬಂದು ಶಾಮನೂರು ಅವರ ಕುಟುಂಬಕ್ಕೆ ಅವಕಾಶ ಮಾಡಿಕೊಡಲಾಗಿದೆ. ಒಗ್ಗಟ್ಟಿನಿಂದ ಚುನಾವಣೆ ಮಾಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವ ತೀರ್ಮಾನ ಮಾಡಲಾಗಿದೆ” ಎಂದರು.

ಸೋಮವಾರ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಭಾಗಿ

“ಮಗನ ಬಿ ಫಾರಂ ಅನ್ನು ತಂದೆಯವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ಕೈಯಲ್ಲಿ ಕೊಡಲಾಗಿದೆ. ಸೋಮವಾರ ದಾವಣಗೆರೆ ಹಾಗೂ ಬಾಗಲಕೋಟೆಗೆ ನಾನು ಹಾಗೂ ಮುಖ್ಯಮಂತ್ರಿಯವರು ತೆರಲಿ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಭಾಗವಹಿಸುತ್ತೇವೆ. ಟಿಕೆಟ್ ವಿಚಾರವಾಗಿ ಮಾಧ್ಯಮಗಳು ಮಾಡುತ್ತಿದ್ದ ವಿಭಿನ್ನ ಚರ್ಚೆಗಳಿಗೆ ತೆರೆ ಎಳೆಯಲಾಗಿದೆ. ಹೈಕಮಾಂಡ್ ಟಿಕೆಟ್ ಹಂಚಿಕೆ ಬಗ್ಗೆ ತಡರಾತ್ರಿ ತಿಳಿಸಿತು” ಎಂದರು.

“ಬುಧವಾರ ಶಾಸಕಾಂಗ ಪಕ್ಷದ ಸಭೆಯನ್ನು ನಿಗಧಿ ಮಾಡಲಾಗಿದೆ. ಎಐಸಿಸಿ ಕಾರ್ಯದರ್ಶಿಗಳು ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ”ಎಂದರು.

ಅಲ್ಪಸಂಖ್ಯಾತರು ಟಿಕೆಟ್ ಕೇಳುವುದು ತಪ್ಪಿಲ್ಲ

ಅಲ್ಪಸಂಖ್ಯಾತರು ಸಮಾಧಾನಗೊಂಡಿದ್ದಾರೆಯೇ ಎಂದು ಕೇಳಿದಾಗ, “ಅವರುಗಳು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಜನಸಂಖ್ಯೆ ಆಧಾರದ ಮೇಲೆ ಕೇಳುತ್ತಿದ್ದಾರೆ. ಅವರದ್ದು ತಪ್ಪಿಲ್ಲ. ದಿನಾಂಕ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಕೆ ಮಾಡಿರುವುದಾಗಿ ಮಲ್ಲಿಕಾರ್ಜುನ್ ಅವರು ಹೇಳಿದರು. ನಮಗೂ ನಂಬಿಕೆ ಇದ್ದಂತೆ ಅವರಿಗೂ ಇದೆ. ಪಕ್ಷ ಹೇಳಿದರೆ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ. ಸಮರ್ಥ್ ಅವರ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರಿಗೂ ಸಂಸದ ಸ್ಥಾನಕ್ಕೆ ನಿಲ್ಲಲು ಇಷ್ಟ ಇರಲಿಲ್ಲ. ಒತ್ತಾಯದಿಂದ ನಿಲ್ಲಿಸಿದ್ದು. ಮಲ್ಲಿಕಾರ್ಜುನ್ ಅವರಿಗೂ ಇಷ್ಟ ಇರಲಿಲ್ಲ. ಈಗ ಅವರು ಪಕ್ಷದ ಆಸ್ತಿಯಾಗಿ ಬೆಳೆಯುತ್ತಿದ್ದಾರೆ” ಎಂದರು‌.

ಅಲ್ಪಸಂಖ್ಯಾತರು ಏನಾದರೂ ಬೇಡಿಕೆಗಳನ್ನು ಇಟ್ಟಿದ್ದಾರೆಯೇ ಎಂದು ಕೇಳಿದಾಗ, “ಕೇಳ್ತಾರೆ, ಪಕ್ಷ ಏನು ಹೇಳುತ್ತದೆಯೋ ಅದಕ್ಕೆ ಮಲ್ಲಿಕಾರ್ಜುನ್ ಅವರೂ ಬದ್ಧರಾಗಿದ್ದಾರೆ. ನಾನೂ ಬದ್ಧನಾಗಿದ್ದೇನೆ. ಕನಕಪುರದಲ್ಲಿ ನಿಲ್ಲಬೇಡ ಅಂದ್ರೆ ನಾನೂ ನಿಲ್ಲಲ್ಲ” ಎಂದರು‌.

ಅಲ್ಪಸಂಖ್ಯಾತ ಸಮುದಾಯದ ಗೊಂದಲ ನಿವಾರಣೆ ಆಗಿದೆಯೇ ಎಂದು ಕೇಳಿದಾಗ, “ಆಸೆ ಪಡುವುದು ತಪ್ಪಲ್ಲ. ಮೇಟಿ ಕುಟುಂಬದಲ್ಲಿ ನನಗೆ ಮಲ್ಲಿಕಾರ್ಜುನ ಅವರಿಗೆ ನೀಡುವುದಕ್ಕೆ ಆಸೆಯಿತ್ತು.‌ ಜಿಲ್ಲಾ ಪಂಚಾಯತಿ ಸದಸ್ಯೆಯಾದ ಇನ್ನೊಬ್ಬ ಮಗಳು ಟಿಕೆಟ್ ಕೇಳಿದ್ದರು. ಇನ್ನೊಬ್ಬ ಮಗಳು ಸೇರಿದಂತೆ ಒಟ್ಟು ಅವರ ಕುಟುಂಬದಲ್ಲಿಯೇ ನಾಲ್ಕು ಜನ ಕೇಳಿದ್ದರು. ಕುಟುಂಬದಲ್ಲಿಯೇ ಆಸೆ ಇರುವಾಗ ಬೇರೆಯವರಿಗೂ ಇರುತ್ತದೆ. ಬಾಗಲಕೋಟೆಗೆ ಬೇರೆ, ಬೇರೆ ಹೆಸರುಗಳೂ ಬಂದಿತ್ತು” ಎಂದರು‌.

ಬಿಜೆಪಿ ಜೆಡಿಎಸ್ ಅವರು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ನಿಲ್ಲಿಸುತ್ತಿರುವ ಬಗ್ಗೆ ಕೇಳಿದಾಗ, “ಗೊತ್ತು, ಈ ಎಲ್ಲಾ ಪ್ರಯತ್ನ ನಡೆಯುತ್ತಾ ಇದೆ. ರಾಜಕಾರಣ ಅಂದ ಮೇಲೆ ಅವರು ಡಿಫರೆನ್ಸ್ ಉಂಟು ಮಾಡುತ್ತಾರೆ, ನಾವೂ ಮಾಡುತ್ತೇವೆ. ಅವರಲ್ಲಿ ಒಮ್ಮತ ಇದೆಯೇ? ಇಬ್ಬರು ಗಲಾಟೆ ಮಾಡಿದ್ದಕ್ಕೆ ಮೂರನೆಯವರಿಗೆ ನೀಡಿದ್ದಾರೆ. ನಾನು ಏಕೆ ಅದನ್ನು ಚರ್ಚೆ ಮಾಡಲು ಹೋಗಲಿ. ಅದು ಅವರ ಪಕ್ಷದ ತೀರ್ಮಾನ, ಇದು ನಮ್ಮ ಪಕ್ಷದ ತೀರ್ಮಾನ” ಎಂದರು‌.

ಪ್ರತಿಪಕ್ಷಗಳ ಅಭ್ಯರ್ಥಿಗಳು ಸಮರ್ಥರಿದ್ದಾರೆಯೇ ಎಂದು ಕೇಳಿದಾಗ, “ನಮ್ಮದು ನಮಗೆ, ಅವರದ್ದು ಅವರಿಗೆ. ಬೇರೆ ಪಕ್ಷಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಹೋಗುವುದಿಲ್ಲ. ಯಾವ ಅಭ್ಯರ್ಥಿಗಳನ್ನು ಸಹ ಬೇಕಾದರೂ ಹಾಕಲಿ” ಎಂದರು.

“ದಾವಣಗೆರೆಗೆ ಶಿವಶಂಕರಪ್ಪ ಅವರು ಮಾಡಿರುವ ಸೇವೆ, ಅಭಿವೃದ್ಧಿ ಅತ್ಯುತ್ತಮವಾಗಿದೆ. ಬೆಂಗಳೂರು ನಗರ ಯಾವ ರೀತಿ ಇದೆಯೋ‌ ಅದಕ್ಕಿಂತ ಚೆನ್ನಾಗಿ ದಾವಣಗೆರೆಯಿದೆ. ನಾನೇ ಅದನ್ನೆಲ್ಲಾ ಕಣ್ಣಲ್ಲಿ ನೋಡಿದ್ದೇನೆ. ಕುಡಿಯುವ ನೀರು, ಬಡವರಿಗೆ ಮನೆ ನೀಡಿದ್ದಾರೆ. ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ. ಕಳೆದ 40 ವರ್ಷಗಳಿಂದ ಸೇವೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶಾಮನೂರು ಅವರ ಕುಟುಂಬ ಮೊದಲಿನಿಂದಲೂ ನಿಂತಿದೆ” ಎಂದರು‌.

ಶಿವಶಂಕರಪ್ಪ ಅವರು ನನ್ನ ನಂತರ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುತ್ತೇವೆ ಎಂದು ಹೇಳಿದ್ದರು. ಆ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಎನ್ನುವ ಅಸಮಾಧಾನದ ಬಗ್ಗೆ ಕೇಳಿದಾಗ, “ಅಸಮಾಧಾನ ನಿಮ್ಮ ಬಳಿ ಹೇಳಿರಬಹುದು. ನಮ್ಮ ಬಳಿ ಹೇಳಿಲ್ಲ. ಅದಕ್ಕೆ ನಾವು ಮೂರು ಬಾರಿ ಜಬ್ಬಾರ್ ಅವರನ್ನು ಎಂಎಲ್‌ ಸಿ ಮಾಡಿರುವುದು. ಜಬ್ಬಾರ್ ಅವರನ್ನು ಇದೇ ಶಿವಶಂಕರಪ್ಪ ಅವರು ಎಸ್.ಎಂ.ಕೃಷ್ಣ ಅವರ ಕಾಲ, ಸಿದ್ದರಾಮಯ್ಯ ಅವರ ಕಾಲದಲ್ಲೂ ಎಂಎಲ್‌ ಸಿ ಮಾಡಿದ್ದಾರೆ. ಆಗಾಗ್ಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿರುತ್ತದೆ. ಪರಿಷತ್ ‌ಸ್ಥಾನವನ್ನು ಮಾನೆ ಅವರ ಬದಲಿಗೆ ಧಾರವಾಡದಿಂದ ಸಲೀಂ ಅವರಿಗೆ ನೀಡಿದೆವು. ಬೋಸ್ ಅವರಿಗೆ ನೀಡಬೇಕಿತ್ತು. ಅದನ್ನು ಬಿಟ್ಟು ಪರ್ಯಾಯ ವ್ಯವಸ್ಥೆ ಮಾಡಲಿಲ್ಲವೇ? ಕೆಲವು ಸಂದರ್ಭಗಳಲ್ಲಿ ಈ ರೀತಿ ಮಾಡಬೇಕಾಗುತ್ತದೆ” ಎಂದರು‌.

ಪ್ರತಿಪಕ್ಷಗಳು ಯಾವ ಚುನಾವಣೆ ಗೆದ್ದಿವೆ

ಸರ್ಕಾರಕ್ಕೆ ಮೂರು ವರ್ಷಗಳು ತುಂಬಿರುವ ಸಂದರ್ಭದಲ್ಲಿ ಈ ಉಪಚುನಾವಣೆ ಭವಿಷ್ಯದ ದಿಕ್ಸೂಚಿಯೇ ಎಂದು ಕೇಳಿದಾಗ, “ಪ್ರತಿಪಕ್ಷಗಳು ಯಾವ ಚುನಾವಣೆ ಗೆದ್ದಿವೆ. ಅವರ ಸ್ಥಾನಗಳನ್ನು ನಾವು ಗೆದ್ದುಕೊಂಡು ಬಂದಿದ್ದೇವೆ. ಬಸವರಾಜ ಬೊಮ್ಮಾಯಿ ಅವರ ಸ್ಥಾನ, ಕುಮಾರಸ್ವಾಮಿ ಅವರ ಮಗನ ಸ್ಥಾನ ಗೆದ್ದಿದ್ದೇವಲ್ಲ” ಎಂದರು.

ನೀರಿ‌ನ ಬಿಲ್ ಬಡ್ಡಿ ಮನ್ನಾ

“ಯುಗಾದಿ ಹಬ್ಬದ ಕೊಡುಗೆಯಾಗಿ ಜಲಮಂಡಳಿಯಿಂದ ನೀರಿನ ಬಿಲ್ ಮೇಲಿನ ಬಡ್ಡಿಮನ್ನಾ ಮಾಡಿದ್ದೇವೆ. ಬೆಂಗಳೂರಿನ ಗ್ರಾಹಕರಿಗೆ ಬಹಳ ಅನುಕೂಲವಾಗುತ್ತದೆ. ನಾನು ಬೆಂಗಳೂರು ನಗರದ ಜವಾಬ್ದಾರಿ ತೆಗೆದುಕೊಂಡ ಮೇಲೆ ಕುಡಿಯುವ ನೀರಿನ ವಿಚಾರದಲ್ಲಿ ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿಕೊಟ್ಟಿದ್ದೇನೆ. ಕಾವೇರಿ ಐದನೇ‌ ಹಂತ ಪೂರ್ಣಗೊಳಿಸಿ ನೀರು ನೀಡುತ್ತಿದ್ದೇವೆ. ಆರನೇ ಹಂತಕ್ಕೂ ಕ್ಯಾಬಿನೆಟ್ ಅಲ್ಲಿ ಒಪ್ಪಿಗೆ ನೀಡಲಾಗಿದೆ. ಬೆಂಗಳೂರಿಗೆ ಯಾವ ರೀತಿಯಲ್ಲೂ ನೀರಿನ ಸಮಸ್ಯೆ ಇಲ್ಲ. ಆದರೆ ಬಹಳಷ್ಟು ಜನ ಹೊರಗಡೆಯಿಂದ ಬರುತ್ತಿದ್ದಾರೆ. ಅದನ್ನು ನಾವು ತಡೆಯಲು ಆಗುತ್ತಿಲ್ಲ. ಭವಿಷ್ಯದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲು ಸಿದ್ಧರಾಗಿದ್ದೇವೆ” ಎಂದರು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!