ಬೆಂ.ಗ್ರಾ.ಜಿಲ್ಲೆ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ (Mobile canteen) ನಡೆಸಲು ಸಹಾಯಧನ (Subsidy) ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 2026 ರ ಮಾರ್ಚ್. 30 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.