KIADB: Farmers protest... Officials rush to the spot

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕೆಂದು ಪಟ್ಟುಹಿಡಿದಿದ್ದರು, ಅಧಿಕಾರಿಗಳು ರೈತರನ್ನು ಕಡೆಗಣಿಸುವುದನ್ನು ಸಹಿಸುವುದಿಲ್ಲ, ರೈತರು ಭೂಮಿ ಕಸೊದುಕೊಂಡರೆ ಅನ್ನ ಆಹಾರ ಹೇಗೆ ದೊರೆಯುತ್ತದೆ. ಸ್ಥಳಕ್ಕೆ ಡಿಸಿ ಬರದಿದ್ದರೆ ರೈತರೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ದೊಡ್ಡಬೆಳವಂಗಲ ಇನ್ಸ್‌ಪೆಕ್ಟರ್ ಕಲ್ಲಪ ಎಸ್ ಖರಾತ ಅವರು ತಹಶಿಲ್ದಾರರ ಮಲ್ಲಪ್ಪ ಯರಗೊಳ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು.

ವಿಷಯ ತಿಳಿದ ತಹಶಿಲ್ದಾರರ ಮಲ್ಲಪ್ಪ ಯರಗೊಳ ಹಾಗೂ ವಿಶೇಷ ಭೂ ಸ್ವಾಧೀನ ಅಧಿಕಾರಿ ಬಾಲಪ್ಪ ಅವರು ರೈತರಿಂದ ಮನವಿ ಪತ್ರ ಸ್ವೀಕರಿಸಿದರು.

ಬಳಿಕ ಮಾತನಾಡಿದ ವಿಶೇಷ ಭೂ ಸ್ವಾಧೀನ ಅಧಿಕಾರಿ ಬಾಲಪ್ಪ, ರೈತರು ಆತಂಕ ಪಡುವ ಅಗತ್ಯವಿಲ್ಲ, ಭೂ ಸ್ವಾಧೀನ ಪ್ರಕ್ರಿಯೆ ನೋಟಿಫಿಕೇಷನ್ ಆಗಿಲ್ಲ. ತಮ್ಮ ಮನವಿಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಖಾನ್ ಮಠದಿಂದ ದೊಡ್ಡಬೆಳವಂಗಲ ನಾಡ ಕಚೇರಿವರೆಗೆ ಜಾಥಾ ನಡೆಸಿದ ರೈತರು, ನಾಡ ಕಚೇರಿ ಪ್ರತಿಭಟನೆ ನಡೆಸಿದರು.

ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ರೈತ ಸಂಘದ ಪ್ರಭ ಬೆಳವಂಗಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ನಿಗಮದ ಅಧ್ಯಕ್ಷ ವಿಶ್ವನಾಥ ರೆಡ್ಡಿ ಸೇರಿದಂತೆ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ ನಾರನಹಳ್ಳಿ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="120437"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!