Sri Rama Sobhayatre from March 27 in Doddaballapura

ದೊಡ್ಡಬಳ್ಳಾಪುರದಲ್ಲಿ ಮಾ.27 ರಿಂದ ಶ್ರೀರಾಮ ಶೋಭಾಯಾತ್ರೆ: ಹೆಲಿಕ್ಯಾಪ್ಟರ್‌ ಮೂಲಕ ಪುಷ್ಪ ವೃಷ್ಟಿ

ದೊಡ್ಡಬಳ್ಳಾಪುರ: ವಿಶ್ವ ಹಿಂದೂ ಪರಿಷತ್‌ ಬಜರಂಗ ದಳ ವತಿಯಿಂದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್‌ ಶ್ರೀರಾಮ ಶೋಭಾಯಾತ್ರೆ (Sobhayatre) ಮತ್ತು ಶ್ರೀ ರಾಮ ರಥಯಾತ್ರೆ ಕಾರ್ಯಕ್ರಮ ಮಾ.27 ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಮಾ.29 ರಂದು ಬೃಹತ್‌ ಶ್ರೀರಾಮ ಶೋಭಾಯಾತ್ರೆ ನಡೆಯಲಿದೆ.

ಕಳೆದ 11 ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್‌ ಶ್ರೀರಾಮ ಶೋಭಾಯಾತ್ರೆಯನ್ನು ಬೃಹತ್‌ ಕೇಸರಿ ಹಬ್ಬವಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ಬೃಹತ್‌ ಉತ್ಸವವಾಗಿ ನಡೆಯುತ್ತಿದೆ.

ಕಾರ್ಯಕಕ್ರಮದ ಅಂಗವಾಗಿ ಬೃಹತ್‌ ವಾಹನ ಜಾಥಾ, ಉಚಿತ ಸಂಜೀವಿನಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸೆ, ದೀಪ ಲಕ್ಷ್ಮಿ ಪೂಜೆ, ಹೋಮ ಹವನಾದಿಗಳು, ವಿವಿಧ ದೇವರುಗಳ ಬೃಹತ್‌ ಶೋಭಾ ಯಾತ್ರೆ ನಡೆಯಲಿದೆ. ಈ ಬಾರಿ ವಿಶೇಷವಾಗಿ ಶೋಭಾಯಾತ್ರೆಯಲ್ಲಿ ಹೆಲಿಕ್ಯಾಪ್ಟರ್‌ ಮೂಲಕ ಪುಷ್ಪ ವೃಷ್ಟಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶ್ರೀ ರಾಮ ರಥಯಾತ್ರೆ ಆಗಮಿಸಲಿದೆ.

ಮಾ.27 ರಂದು ಸಂಜೆ 4 ಗಂಟೆಗೆ ನಗರದ ಹೊರವಲಯದ ಪಾಲನಜೋಗಹಳ್ಳಿಯ ವಿನಾಯಕ ದೇವಾಲಯದ ಮುಂಭಾಗದಿಂದ ಬೈಕ್‌, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.

ಮಾ.28 ರಂದು ಬೆಳಿಗ್ಗೆ 9.30ಕ್ಕೆ ಗಣಪತಿ ಹೋಮ, ಉಚಿತ ಸಂಜೀವಿನಿ ಆರೋಗ್ಯ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ನಡೆಯಲಿದೆ. ಸಂಜೆ 5ಗಂಟೆಗೆ ಆನಂದ ಗುರೂಜಿ ನೇತೃತ್ವದಲ್ಲಿ ದೀಪ ಲಕ್ಷ್ಮಿ ಪೂಜೆ ನಡೆಯಲಿದ್ದು, 500ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಲಿದ್ದಾರೆ. ಸಂಜೆ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಲಿದೆ.

ಮಾ.29ರಂದು ಮಧ್ಯಾಹ್ನ 11.30ಕ್ಕೆ ಭಗತ್‌ಸಿಂಗ್‌ ಕ್ರೀಡಾಂಗಣದಿಂದ ಬೃಹತ್‌ ಶೋಭಾ ಯಾತ್ರೆ ನಡೆಯಲಿದೆ.

ಮೆರವಣಿಗೆಯಲ್ಲಿ ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಅಂಬೇಡ್ಕರ್‌, ಇಮ್ಮಡಿ ಪುಲಿಕೇಶಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ.

ನಂತರ ದಕ್ಷಿಣ ಪ್ರಾಂತ ಬಜರಂಗ ದಳ ಸಂಯೋಜಕ್‌ ಬೌದ್ದಿಕ್‌. ಪ್ರಭಂಜನ್‌ ಸೂರ್ಯ ಅವರಿಂದ ದಿಕ್ಸೂಚಿ ಭಾಷಣವಿದೆ.
ಸಂಜೆ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಲೇಸರ್‌ ಶೋ, ಬೃಹತ್‌ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ಕಾರ್ಯ್ಕ್ರಮಗಳಿವೆ.

ಹಿಂದೂ ಸಮಾಜದ ಪ್ರತೀಕವಾಗಿ ಶಕ್ತಿ ತೋರಿಸುವ ಈ ಕಾರ್ಯ್ಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಮಾ.27 ರಿಂದ ಶ್ರೀರಾಮ ಶೋಭಾಯಾತ್ರೆ: ಹೆಲಿಕ್ಯಾಪ್ಟರ್‌ ಮೂಲಕ ಪುಷ್ಪ ವೃಷ್ಟಿ

ದೊಡ್ಡಬಳ್ಳಾಪುರದಲ್ಲಿ ಮಾ.27 ರಿಂದ ಶ್ರೀರಾಮ ಶೋಭಾಯಾತ್ರೆ: ಹೆಲಿಕ್ಯಾಪ್ಟರ್‌ ಮೂಲಕ ಪುಷ್ಪ ವೃಷ್ಟಿ

ವಿಶ್ವ ಹಿಂದೂ ಪರಿಷತ್‌ ಬಜರಂಗ ದಳ ವತಿಯಿಂದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್‌ ಶ್ರೀರಾಮ ಶೋಭಾಯಾತ್ರೆ (Sobhayatre) ಮತ್ತು ಶ್ರೀ ರಾಮ ರಥಯಾತ್ರೆ ಕಾರ್ಯಕ್ರಮ ಮಾ.27 ರಿಂದ ಮೂರು ದಿನಗಳ ಕಾಲ

[ccc_my_favorite_select_button post_id="120440"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!