Doddaballapura: Sri Rama Navami celebrated with devotion

ದೊಡ್ಡಬಳ್ಳಾಪುರ: ಶ್ರದ್ಧಾ ಭಕ್ತಿಯಿಂದ ಶ್ರೀರಾಮನವಮಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ವಿವಿದೆಡೆಗಳಲ್ಲಿನ ಶ್ರೀ ರಾಮ ದೇವಾಲಯ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಶ್ರೀರಾಮನವಮಿಯನ್ನು (Sri RamaNavami) ಶ್ರದ್ದಾ ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.

ಶ್ರೀರಾಮನವಮಿ ದೇವಾಲಯಗಳನ್ನು ತಳಿರು ತೋರಣ ದೀಪಾಲಂಕಾರಗಳಿಂದ ಸಿಂಗರಿಸಲಾಗಿತ್ತು.

ದೇವಾಲಯಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ, ಶ್ರೀರಾಮ, ಸೀತೆ, ಲಕ್ಷ್ಮಣ, ಆಂಜನೇಯ ಮೂರ್ತಿಗಳಿಗೆ ಹಾಗೂ ಚಿತ್ರಪಟಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ, ಭಕ್ತಾದಿಗಳಿಗೆ ಪಾನಕ, ಕೋಸಂಬರಿ ಪ್ರಸಾದಗಳನ್ನು ವಿತರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ದೊಡ್ಡಬಳ್ಳಾಪುರ: ಶ್ರದ್ಧಾ ಭಕ್ತಿಯಿಂದ ಶ್ರೀರಾಮನವಮಿ ಆಚರಣೆ

ನಗರದ ನೆಲದಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆಲದಾಂಜನೇಯ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಶ್ರೀ ರಾಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ದೇವಾಲಯದಲ್ಲಿ ಆಲಿಂಗನ ಶ್ರೀ ರಾಮಾಂಜಿನೇಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಅಂಗವಾಗಿ ವಿಶೇಷ ಪೂಜಾ ಕಾರ್ಯಜಕ್ರಮ ನಡೆಯಿತು.

ಏ.4ರವರೆಗೆ ಪ್ರತಿದಿನ ಬೆಳಿಗ್ಗೆ 9.30ಕ್ಕೆ ಹಾಗೂ ಸಂಜೆ 7ಕ್ಕೆ ಸೇವಾಕರ್ತರಿಂದ ವಿಶೇಷ ಪೂಜೆ ಪ್ರಸಾದ ವಿನಿಯೋಗವಿದೆ.

ದೇವಾಲಯದ ಮುಂಭಾಗ ಬಸ್ ನಿಲ್ದಾಣದ ಮಿನಿ ಲಾರಿ, ಟೆಂಪೋ ಮಾಲೀಕರ ಮತ್ತು ಚಾಲಕರ ಸಂಘದ ವತಿಯಿಂದ ಸಾರ್ವಜನಿಕರಿಗೆ ಶ್ರೀ ರಾಮ ನವಮಿ ಅಂಗವಾಗಿ ಪಾನಕ, ಕೋಸಂಬರಿ ಪ್ರಸಾದಗಳನ್ನು ವಿತರಿಸಲಾಯಿತು.

ರಾಜಘಟ್ಟದಲ್ಲಿ ಶ್ರೀರಾಮನವಮಿ ಪ್ರಯುಕ್ತ ಶ್ರೀ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯದಲ್ಲಿ ವಿಶೇಷ ಅಲಂಕಾರ ಪೂಜಾ ಕಾರ್ಯೀಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಮಾ.28ರಂದು ಬೆಳಿಗ್ಗೆ 7.30ಕ್ಕೆ ಕಲ್ಯಾಣೋತ್ಸವ ಮಧ್ಯಾಹ್ನ 12.30ಕ್ಕೆ ಶ್ರೀ ರಾಮಾಂಜನೇಯಸ್ವಾಮಿ ರಥೋತ್ಸವ ನಡೆಯಲಿದೆ. ಮಾ.29ರಂದು ಕ್ಷೀರಾಭಿಷೇಕ, ಊರಿನ ಗ್ರಾಮ ದೇವರುಗಳಿಗೆ ಆರತಿಗಳು ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ನಗರದ ತೇರಿನ ಬೀದಿಯ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀರಾಮ ನವಮಿ ಅಂಗವಾಗಿ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ಪೂಜಾ ಕಾರ್ಯ ಕ್ರಮಗಳು ನಡೆದವು. ಸಂಜೆ ವಿವಿಧ ಕಲಾತಂಡಗಳೊಡನೆ ಸೀತಾ ರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ಉತ್ಸವ ನಡೆಯಲಿದೆ.

ಉಳಿದಂತೆ ನಗರದ ತೇರಿನ ಬೀದಿ ಕೋದಂಡರಾಮ ದೇವಾಲಯ, ಖಾಸ್‌ಬಾಗ್ನ ಶ್ರೀ ರಾಮ ಮಂದಿರ, ರೇಲ್ವೆ ನಿಲ್ದಾಣದ ಬಳಿಯ ಆಂಜನೇಯಸ್ವಾಮಿ ದೇವಾಲಯ ಶಿವಪುರ ಗೇಟ್ ಬಳಿಯ ಶ್ರೀರಾಮ ದೇವಾಲಯ, ರೋಜಿಪುರದ ಶ್ರೀ ಆಂಜನೇಯಸ್ವಾಮಿ ದೇವಾಲಯ, ಕೆರೆ ಏರಿ ಆಂಜನೇಯಸ್ವಾಮಿ ದೇವಾಲಯ, ಮೊದಲಾದೆಡೆ ವಿಶೇಷ ಪೂಜಾ ಕಾರ್ಯಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಆರೂಢಿ ಗ್ರಾಮದ ಬಲಮುರಿ ಗಣೇಶ ದೇವಾಲಯದ ಆವರಣದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಾನಕ, ಕೋಸಂಬರಿ ವಿತರಿಸಲಾಯಿತು.

ರಾಮದೇವನಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಶ್ರೀರಾಮೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಲಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು (Ganja) ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ಯಲ್ಲಿ

[ccc_my_favorite_select_button post_id="120501"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!