Selling fruit juice using fruit pictures: Raghav Chadha exposes the dark truth

ಹಣ್ಣಿನ ಚಿತ್ರ ಬಳಸಿ ಫ್ರುಟ್ ಜ್ಯೂಸ್ ಮಾರಾಟ: ಕರಾಳ ಸತ್ಯ ಬಯಲು ಮಾಡಿದ ರಾಘವ್ ಚಡ್ಡಾ

ನವದೆಹಲಿ; ಇತ್ತೀಚೆಗಷ್ಟೇ ಟೆಲಿಕಾಂ ಸಂಸ್ಥೆಗಳ ಹಗಲು ದರೋಡೆ ಬಯಲು ಮಾಡಿದ್ದ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ (Raghav Chadha) ಅವರು, ಈಗ ಜನರ ದಾರಿತಪ್ಪಿಸುತ್ತಿರುವ ದೊಡ್ಡ ದೊಡ್ಡ ಆಹಾರ ಬ್ರಾಂಡ್‌ಗಳ ಕರಾಳ ಸತ್ಯವನ್ನು ಬಯಲು ಮಾಡುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.

ಹೌದು ಈ ಕುರಿತು ಸದನದಲ್ಲಿ ಪ್ರಶ್ನಿಸಿರುವ ಅವರು, ತಾಜಾ ಜ್ಯೂಸ್ ಎಂದು ಹಣ್ಣುಗಳ ಚಿತ್ರಗಳನ್ನು ಬಾಟಲ್ ಹಾಗೂ ಟೆಟ್ರಾ ಪ್ಯಾಕೆಟ್ ಮೇಲೆ ಮುದ್ರಿಸಿ ಮಾರಾಟ ಮಾಡುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ್ದು, ಇವುಗಳಲ್ಲಿ ಅನೇಕ ಉತ್ಪನ್ನಗಳು “ಸಕ್ಕರೆ ಸಿರಪ್‌ಗಳು” ಎಂದು ಎತ್ತಿ ತೋರಿಸಿದರು‌‌.

ಭಾರತದ ಗ್ರಾಹಕ ಮಾರುಕಟ್ಟೆಯು ಅನಾರೋಗ್ಯದಿಂದ ಕೂಡಿದ್ದು, ಜನರನ್ನು ದಾರಿತಪ್ಪಿಸುವ ಬ್ರ್ಯಾಂಡಿಂಗ್ ಮತ್ತು ಸುಳ್ಳು ಜಾಹೀರಾತು ಎಂದು ಕರೆಯಲಾಗುತ್ತದೆ.

ನಾವು ಹಣ್ಣಿನ ರಸದ ಬಾಟಲಿಯನ್ನು ಖರೀದಿಸಿದಾಗ ಮುಂಭಾಗದಲ್ಲಿ ತಾಜಾ ಹಣ್ಣಿನ ಚಿತ್ರಗಳು ಮುದ್ರಿಸಲಾಗುತ್ತಿದೆ. ಆದರೆ ಹಿಂಭಾಗದಲ್ಲಿ ಸಣ್ಣ ಅಕ್ಷರದಲ್ಲಿ ಈ ಚಿತ್ರವು ಮಾರ್ಕೆಟಿಂಗ್ ಉದ್ದೇಶಕ್ಕಾಗಿ ಮಾತ್ರ ಎಂದು ಹೇಳುತ್ತದೆ.

ಇದರಿಂದಾಗಿ ನಮ್ಮ ದೇಶದ ಗ್ರಾಹಕರು, ವಿಶೇಷವಾಗಿ ಯುವಜನರು ಈ ಪಾನೀಯಗಳು ಆರೋಗ್ಯಕರವೆಂದು, ಪೌಷ್ಟಿಕವೆಂದು ತಪ್ಪಾಗಿ ಭಾವಿಸಿ ಸೇವಿಸುತ್ತಿದ್ದಾರೆ. ಆದರೆ ಇದು ಅವರಲ್ಲಿ ಮಧುಮೇಹ, ಬೊಜ್ಜುತನ, ಇನ್ನಿತರೆ ರೋಗಗಳಿಗೆ ಒಳಪಡುತ್ತಿದ್ದಾರೆ.

ಈ ರೀತಿ ಹೆಚ್ಚಿನ ಸಕ್ಕರೆ ಅಂಶವಿರುವ ಉತ್ಪನ್ನಗಳ ವಿವರಗಳನ್ನು ಪ್ಯಾಕೆಟ್‌ನ ಮುಂಭಾಗದಲ್ಲಿ ಪ್ರಕಟಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.

ಉತ್ಪನ್ನ ವರ್ಗದ ಬಗ್ಗೆ ಸ್ಪಷ್ಟತೆ ಕೋರಿದ ಚಡ್ಡಾ, ಉತ್ಪನ್ನಗಳನ್ನು ನಿಜವಾದ ಹಣ್ಣಿನ ರಸ ಮತ್ತು ಸಕ್ಕರೆ, ಸಾಂದ್ರೀಕೃತ ಪಾನೀಯಗಳು ಮತ್ತು ಸಂರಕ್ಷಕಗಳಿಂದ ತಯಾರಿಸಿದ ಪಾನೀಯಗಳ ನಡುವೆ ವರ್ಗೀಕರಿಸಬೇಕೆಂದು ಕರೆ ನೀಡಿದರು.

ಸಂಸತ್ತಿನಲ್ಲಿ ಮಾತನಾಡಿದ ನಂತರ, “ನೀವು ಹಣ್ಣಿನ ರಸ ಕುಡಿಯುತ್ತಿದ್ದೀರಿ ಎಂದು ನೀವು ಭಾವಿಸುತ್ತೀರಾ? ಮತ್ತೊಮ್ಮೆ ಯೋಚಿಸಿ. ದೊಡ್ಡ ಆಹಾರ ಬ್ರಾಂಡ್‌ಗಳು ಮುಂಭಾಗದಲ್ಲಿ ಹೊಳೆಯುವ ‘ತಾಜಾ ಹಣ್ಣು’ ಚಿತ್ರಗಳೊಂದಿಗೆ ಸಕ್ಕರೆ ನೀರನ್ನು ಮಾರಾಟ ಮಾಡುತ್ತಿವೆ” ಎಂದು ಚಡ್ಡಾ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ದಾರಿತಪ್ಪಿಸುವ ಬ್ರ್ಯಾಂಡಿಂಗ್ ಲಕ್ಷಾಂತರ ಜನರನ್ನು, ವಿಶೇಷವಾಗಿ ಮಕ್ಕಳನ್ನು ಮಧುಮೇಹ ಮತ್ತು ಜೀವನಶೈಲಿ ಕಾಯಿಲೆಗಳಿಗೆ ತಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.

ಗ್ರಾಹಕರನ್ನು ರಕ್ಷಿಸಲು ಮತ್ತು ಬ್ರ್ಯಾಂಡಿಂಗ್ ಮತ್ತು ಜಾಹೀರಾತು ಪದ್ಧತಿಗಳು ಸತ್ಯವಾದವುಗಳಾಗಿದ್ದು, ಕಾನೂನು ಬಾಹಿರವಲ್ಲ ಎಂದು ಖಚಿತಪಡಿಸಿಕೊಳ್ಳಲು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚಡ್ಡಾ ಅವರು ಮೋದಿ ಸರ್ಕಾರವನ್ನು ಒತ್ತಾಯಿಸಿದ್ದಾರೆ‌‌.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!