ದೊಡ್ಡಬಳ್ಳಾಪುರ: ನಗರದಲ್ಲಿ ನಡೆಯಲಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆಗೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್, ಬಜರಂಗಳದ ಕಾರ್ಯಕರ್ತರು ಹಾಗೂ ಹಿಂದೂ ಪರ ಕಾರ್ಯಕರ್ತರು (Hindu activists) ನಗರದ ಪೊಲೀಸ್ ಠಾಣೆ ಮುಂದೆ (Town Police Station) ಪ್ರತಿಭಟನೆ ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಲಾಗುತ್ತಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ನಡೆಯಲಿರುವ ಶ್ರೀ ರಾಮ ಶೋಭಾಯಾತ್ರೆಗೆ ಅಡ್ಡಿಪಡಿಸುತ್ತಾ, ತೊಂದರೆ ನೀಡುತ್ತಿದ್ದಾರೆಂದು ಆರೋಪಿಸುತ್ತಿರುವ ಪ್ರತಿಭಟನಾಕಾರರು, ಪೊಲೀಸ್ ಠಾಣೆಯ ಮುಂದಿನ ರಸ್ತೆಯಲ್ಲಿ ಕುಳಿತು ದಿಕ್ಕಾರ ಕೂಗುತ್ತಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಒತ್ತಾಯಿಸಿ ಪ್ರತಿಭಟನಾನಿರತರು ಪೊಲೀಸ್ ಠಾಣೆ ಮುಂದೆ ಕುಳಿತಿದ್ದಾರೆ.
ಈ ವೇಳೆ ಮಾತನಾಡಿದ ಸಂಘಟನೆಯ ಮುಖಂಡ ನರೇಶ್ ರೆಡ್ಡಿ, ಶ್ರೀರಾಮ ಶೋಭಾಯಾತ್ರೆಯಲ್ಲಿ ಭಕ್ತಿ ಗೀತೆ ಹಾಕಲು ಧ್ವನಿವರ್ಧಕ ಬಳಸುವುದನ್ನು ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು, ಹಿಂದೂ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲೆಂದು ಧ್ವನಿವರ್ಧಕ ನಿಷೇಧಿಸಿದ್ದಾರೆ, ಅಲ್ಲದೆ ಬಳಸಿದರೆ ವಶ ಪಡಿಸಿಕೊಳ್ಳುವ, ಬಂಧಿಸುವ ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.