Police should not compromise on justice delivery for any reason: CM Siddaramaiah

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

ಅವರು ಇಂದು ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಎಲ್ಲರಿಗೂ ವೃತ್ತಿಪರ ಯಶಸ್ಸನ್ನು ಕೋರಿ ಶುಭಹಾರೈಸಿ ಮಾತನಾಡಿದರು.

ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು

ಪೊಲೀಸ್ ಸೇವೆಯಲ್ಲಿ ಶಿಸ್ತು ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿದ್ದು,ದೀನ ದಲಿತರ, ಅಶಕ್ತರ , ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೆಡೆಯಿಂದ ಓಡಾಡುವಂತಾದಾಗ ಮಾತ್ರ, ನಿಜಅರ್ಥದಲ್ಲಿ ಸ್ವಾತಂತ್ರ್ಯ ದೊರೆತಂತೆ ಎಂದು ಮಹಾತ್ಮಾ ಗಾಂಧಿಯವರು ಹೇಳಿದ್ದರು. ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ದೊರೆಯಬೇಕು. ಆದ್ದರಿಂದ ಪೊಲೀಸರು ನ್ಯಾಯವನ್ನು ಎತ್ತಿಹಿಡಿಯುವ ಕೆಲಸದಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು. ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು. ಪೊಲೀಸರು ಸರ್ಕಾರದ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕಿಲ್ಲದೇ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದರು.

377 ಸಬ್ ಇನ್ಸ್ಪೆಕ್ಟರ್ ಗಳು ಸೇವೆಗೆ ಸೇರ್ಪಡೆ

ತರಬೇತಿಯಲ್ಲಿ ಕಲಿತಿದ್ದನ್ನು ಜ್ಞಾಪಕವಿಟ್ಟುಕೊಂಡು ಜೀವನದಲ್ಲಿ ಪಾಲಿಸಬೇಕು.

ತರಬೇತಿಗಳು ಆಗಾಗ್ಗೆ ನಡೆಯಬೇಕಲ್ಲದೆ ತರಬೇತಿ ಜೀವನದ ಅಂಗವಾಗಬೇಕು. 377 ಸಬ್ ಇನ್ಸ್ಪೆಕ್ಟರ್ ಗಳು ಸೇವೆಗೆ ಸೇರ್ಪಡೆಯಾಗುತ್ತಿದ್ದು, ಖಾಲಿಯಿದ್ದ 4911 ಹುದ್ದೆಗಳನ್ನು ಮೂರು ವರ್ಷಗಳಲ್ಲಿ ಭಾರತಿ ಮಾಡಲಾಗಿದೆ. ಖಾಲಿ ಇರುವ 8000 ಹುದ್ದೆಗಳನ್ನುಂಭರ್ತಿ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅದನ್ನು ಮಾಡಿಯೇ ತೀರುತ್ತೇವೆ. ಸರ್ಕಾರ ಸದಾ ನಿಮ್ಮೊಂದಿಗಿರುತ್ತದೆ ಎಂದು ಭರವಸೆ ನೀಡಿದರು.

ಅಭಿವೃದ್ಧಿ ಕೆಲಸಗಳಿಗೆ ಹಿಂಜರಿಕೆಯಿಲ್ಲ

ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವಾಗ ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ. ಕೆಲಸದಲ್ಲಿರುವ ಸಂದರ್ಭದಲ್ಲಿ ಕುಟುಂಬದವರ ಯೋಚನೆ ಮಾಡುವ ಅಗತ್ಯವಿಲ್ಲ. ಸತ್ಯ, ನಿಷ್ಠೆಯಿಂದ ಸೇವೆ ಸಲ್ಲಿಸುತ್ತೀರಿ ಎಂದು ನಂಬಿರುವುದಾಗಿ ಹೇಳಿದರು.

ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ

ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದ್ದು, ಆ ದಿಕ್ಕಿನಲ್ಲಿ ಆರಕ್ಷಕರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮಾದಕವಸ್ತು ತಯಾರಕರು, ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು. ಯುವ ಜನಾಂಗದ ಮೇಲೆ ಮಾದಕ ವಸ್ತುಗಳ ಪರಿಣಾಮ ಮಾರಕವಾಗುತ್ತದೆ. ಇದನ್ನು ನಿರ್ಮೂಲನೆ ಮಾಡದೆ ಹೋದರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿಲ್ಲ. ಆದ್ದರಿಂದ ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದರು.

ಮನವಿಯತೆಯಿಂದ ಕೆಲಸ ಮಾಡಬೇಕು

ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಜೊತೆಗೆ ಸ್ನೇಹದಿಂದ ಇರಬೇಕು. ಅಪರಾಧಿಗಳಿಗೆ ಕರುಣೆ ತೋರಬೇಕಿಲ್ಲ. ನಿರಪರಾಧಿಗಳಿಗೆ ಕರುಣೆ ತೋರಬೇಕು ಎಂದರು.

ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು

ಸೈಬರ್ ಅಪರಾಧಗಳನ್ನು ನಿಗ್ರಹಿಸಲು ಸೂಕ್ತ ತರಬೇತಿ ನೀಡಿದ್ದು, ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದರು. ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು.

ಧೈರ್ಯದಿಂದ ಕೆಲಸ ಮಾಡಬೇಕು

ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಶ್ರೀಮಂತರು ಹಣಬಲದಿಂದ ದುರುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಅಂಥ ಆಮಿಷಗಳಿಗೆ ಒಳಗಾಗಬಾರದು, ಧೈರ್ಯದಿಂದ ಕೆಲಸ ಮಾಡಿ ಪೋಲಿಸ್ ವೃತ್ತಿಯಲ್ಲಿ ಯಶಸ್ವಿಯಾಗಬೇಕು ಎಂದು ಕಿವಿ ಮಾತು ಹೇಳಿದರು.

ರಾಜಕೀಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="120557"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!