ದೊಡ್ಡಬಳ್ಳಾಪುರ: ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ನಗರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನಡೆಯಿತು. ಶೋಭಾಯಾತ್ರೆಯಲ್ಲಿ ನೆರೆದಿದ್ದ ಭಕ್ತರ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು.

ಪ್ರತಿ ವರ್ಷದಂತೆಯೇ ಈ ಬಾರಿಯೂ ಡಿ.ಜೆಗೆ ಅನುಮತಿ ನೀಡದೆ ಧ್ವನಿವ ರ್ಧಕಗಳ ಬಳಕೆಗೆ ಮಾತ್ರ ಅನುಮತಿ ನೀಡಲಾಗಿತು. ಅದರಂತೆಯೇ ಮಧ್ಯಾಹ್ನ 3 ಗಂಟೆಗೆ ಭಗತ್ಸಿಂಗ್ ಕ್ರೀಡಾಂಗಣದಿಂದ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ, ಇಮ್ಮಡಿ ಪುಲಿಕೇಶಿ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ವಿವಿಧ ದೇವತೆಗಳ ಪ್ರತಿಮೆಗಳು ಮೆರವಣಿಗೆ ನಡೆಲಾಯಿತು. ವಿವಿಧ ಕಲಾತಂಡಗಳು ಭಾಗವಹಿಸಿದ್ದವು.
ಯಾತ್ರೆಯಲ್ಲಿ ಭಾಗವಹಿಸಿದ್ದ ಭಕ್ತರು ಜೈ ಶ್ರೀರಾಮ ಘೋಷಣೆಗಳನ್ನು ಕೂಗಿದರು.
ಶೋಭಾಯಾತ್ರೆ ಸಾಗುವ ರಸ್ತೆ-ಯುದ್ದಕ್ಕೂ ಯಾವುದೇ ರೀತಿಯ ಅಹಿತಕರ ಘಟನೆ ಬಿಗಿ ಪೊಲೀಸ್ ಮಾಡಲಾಗಿತು.
ಸಂಜೆ 5 ಗಂಟೆ ಸುಮಾರಿಗೆ ನಗರದ ಹಳೇ ಬಸ್ ನಿಲ್ದಾಣಕ್ಕೆ ಶೋಭಾಯಾತ್ರೆ ಆಗಮಿಸಿದಾಗ ಇದೇ ಪ್ರಥಮ ಬಾರಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಠಿ ಮಾಡಲಾಯಿತು.
ಈ ವೇಳೆ ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದ ಭಕ್ತರು ಜೈ ಶ್ರೀರಾಮ ಘೋಷಣೆಗಳನ್ನು ಕೂಗಿದರು.
ಸಂಜೆ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ನಡೆಸಲಾಯಿತು.