ನಾಳೆಯಿಂದ ಏ15 ವರೆಗೆ ಜನಗಣತಿಯಲ್ಲಿ ಸ್ವಯಂ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ: ಡಿಸಿ

Extension of deadline for applying for mobile canteen subsidy

ಬೆಂ.ಗ್ರಾ.ಜಿಲ್ಲೆ; ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ (DC Dr.K.N. Anuradha) ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ 16 ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ದಿನಾಂಕ: 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿ ಕಾರ್ಯ ನಡೆಯಲಿದೆ.

ಸಾರ್ವಜನಿಕರು ಸ್ವಯಂ ಗಣತಿ ವೆಬ್ ಪೋರ್ಟಲ್ ಆದ se.census.gov.in ಬಳಸಿಕೊಂಡು ತಮ್ಮ ಕುಟುಂಬದ ಸಾಮಾನ್ಯ ಮಾಹಿತಿಯನ್ನು ಆನ್ಲೈನ್ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ದಿನಾಂಕ 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿ ವೆಬ್ ಪೋರ್ಟಲ್ ಲಭ್ಯವಿದ್ದು ಮೊಬೈಲ್, ಡೆಸ್ಕ್ ಟಾಪ್, ಲ್ಯಾಪ್ ಟಾಪ್ ಸಾಧನಗಳ ಮೂಲಕ ನಮೂದಿಸಬಹುದು. ಇದರಿಂದ ಸಮಯದ ಉಳಿತಾಯ ಜೊತೆಗೆ ನಿಖರ ಹಾಗೂ ಸಮಗ್ರ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿ ಆಗಲಿದೆ.

ಮಾಹಿತಿ ಭರ್ತಿಯ ವೇಳೆ, ಕುಟುಂಬಗಳು ತಮ್ಮ ಸ್ಥಳದ ವಿವರಗಳನ್ನು (ರಾಜ್ಯ, ಜಿಲ್ಲೆ, ತಾಲ್ಲೂಕು, ಗ್ರಾಮ/ಪಟ್ಟಣ/ನಗರ ಇತ್ಯಾದಿ) ಕಡ್ಡಾಯವಾಗಿ ನಮೂದಿಸಬೇಕು. ಸ್ಥಳವನ್ನು ನಿಖರವಾಗಿ ಗುರುತಿಸಲು ಪಿನ್ ಕೋಡ್ ಮತ್ತು ಡಿಜಿಟಲ್ ಮ್ಯಾಪ್ ಮೂಲಕ ಮನೆಯ ಸ್ಥಳವನ್ನು ಗುರುತಿಸುವ ವ್ಯವಸ್ಥೆಯೂ ಇರುತ್ತದೆ.

ಸ್ವಯಂ-ಗಣತಿ (Self-Enumeration) ಪೋರ್ಟಲ್ನಲ್ಲಿ ಕೇಳುವ ಪ್ರಶ್ನೆಗಳು ಮನೆಪಟ್ಟಿ ಕಾರ್ಯಾಚರಣೆ ಮೊಬೈಲ್ ಆಪ್ನಲ್ಲಿರುವಂತೆಯೇ ರೂಪಿಸಲ್ಪಟ್ಟಿದ್ದು, ಕೆಲವು ಮಾಹಿತಿಗಳು ಪೂರ್ವಭರ್ತಿಯಾಗಿರಬಹುದು. ಸಾರ್ವಜನಿಕರಿಗೆ ಸಹಾಯವಾಗುವಂತೆ ಪದೇ ಪದೇ ಕೇಳುವ ಪ್ರಶ್ನೆಗಳು (FAQs) ಮತ್ತು ಮಾರ್ಗಸೂಚಿಗಳನ್ನೂ ಒದಗಿಸಲಾಗುತ್ತದೆ.

ಕುಟುಂಬವು ತಮ್ಮ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Self-Enumeration ID) ನೀಡಲಾಗುತ್ತದೆ. ಈ ಐಡಿಯನ್ನು SMS ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (Enumerator) ಈ ಐಡಿಯನ್ನು ಸಾರ್ವಜನಿಕರು ಹಂಚಿಕೊಳ್ಳಬಹುದು.

ಜನಗಣತಿ-2027 ಕ್ಕೆ ಸಂಬಂಧಿಸಿ ಸಾರ್ವಜನಿಕರು ವೈಯಕ್ತಿಕ ಮಾಹಿತಿಯ ಗೌಪ್ಯತೆಯನ್ನು ಸಂಪೂರ್ಣವಾಗಿ ಕಾಯ್ದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]