ಸಕಾಲ ಸೇವೆ: ಬೆಂ.ಗ್ರಾ.ಜಿಲ್ಲೆಯ ಕಳಪೆ ಸಾಧನೆ..! ಅಧಿಕಾರಿಗಳ ಪ್ರಶ್ನಿಸೋರು ಯಾರು..?

Registration for skills training

ಕೆ.ಎಂ.ಸಂತೋಷ್. ಆರೂಢಿ (ದೊಡ್ಡಬಳ್ಳಾಪುರ): ಆರ್.ಲತಾ, ರವೀಂದ್ರ, ಶ್ರೀನಿವಾಸ್, ಕರೀಗೌಡ ಅವರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ ಸತತವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಕಾಲ ಸೇವೆಯಲ್ಲಿ (Sakala scheme) ತೀವ್ರ ಕಳಪೆ ಸಾಧನೆ ಮಾಡುವ ಮೂಲಕ ಜಿಲ್ಲೆಯ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಪ್ರಶ್ನೆ ಮಾಡುವಂತೆ ಮಾಡಿದೆ.

ಹೌದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಸಕಾಲ’ ಯೋಜನೆಯ ಮಾರ್ಚ್ ತಿಂಗಳ ಜಿಲ್ಲಾವಾರು ಕಾರ್ಯಕ್ಷಮತೆಯ ವರದಿ ಬಿಡುಗಡೆಯಾಗಿದ್ದು, ಗಣಿನಾಡು ಬಳ್ಳಾರಿ ಜಿಲ್ಲೆಯು ರಾಜ್ಯದಲ್ಲೇ ಅತ್ಯುತ್ತಮ ಪ್ರಗತಿ ಸಾಧಿಸಿ ಮೊದಲ ಸ್ಥಾನ ಅಲಂಕರಿಸಿದೆ.

ಸಕಾಲದ ವಿವಿಧ ಮಾನದಂಡಗಳಾದ ಅರ್ಜಿ ವಿಲೇವಾರಿ, ವೇಗ, ನಿಗದಿತ ಅವಧಿಯೊಳಗಿನ ವಿಲೇವಾರಿ ಮತ್ತು ತಿರಸ್ಕೃತಗೊಂಡ ಅರ್ಜಿಗಳ ಪ್ರಮಾಣವನ್ನು ಆಧರಿಸಿ ಈ ಶ್ರೇಯಾಂಕ ನೀಡಲಾಗುತ್ತದೆ.

ಸಾರ್ವಜನಿಕರ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವಲ್ಲಿ ಬಳ್ಳಾರಿ ಜಿಲ್ಲೆಯು ಮೇಲುಗೈ ಸಾಧಿಸಿದೆ. ಬಳ್ಳಾರಿ ಜಿಲ್ಲೆಯು ಶೇ.97.91 ರಷ್ಟು ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.

ಸಕಾಲ ಸೇವೆಯು ರಾಜ್ಯ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ನಾಗರಿಕರಿಗೆ ನಿಗದಿತ ಅವಧಿಯೊಳಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಅಧಿನಿಯಮದಡಿ, ಜನಸಾಮಾನ್ಯರು ಸಲ್ಲಿಸುವ ಅರ್ಜಿಗಳಿಗೆ ಸರ್ಕಾರಿ ಕಚೇರಿಗಳು ವಿಳಂಬ ಮಾಡದೆ, ಕಾನೂನುಬದ್ಧವಾಗಿ ನಿಗದಿಪಡಿಸಿದ ಕಾಲಮಿತಿಯೊಳಗೆ ಸೇವೆ ನೀಡುವುದೇ ‘ಸಕಾಲ’ ಸೇವೆಯಾಗಿದೆ.

ಕಂದಾಯ ಇಲಾಖೆಯ ಜಾತಿ, ಆದಾಯ ಮತ್ತು ವಾಸಸ್ಥಳ ದೃಢೀಕರಣ ಪತ್ರ. ಸಾರಿಗೆ ಇಲಾಖೆಯ ಚಾಲನಾ ಪರವಾನಗಿ, ವಾಹನ ನೋಂದಣಿ. ನಗರ- ಸ್ಥಳೀಯ ಸಂಸ್ಥೆಗಳಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರ, ಖಾತಾ ಬದಲಾವಣೆ.

ಪೊಲೀಸ್ ಇಲಾಖೆಯಲ್ಲಿನ ಪಾಸ್‌ಪೋರ್ಟ್ ಪರಿಶೀಲನೆ ಹಾಗೂ ಇತರೆ ಸೇರಿದಂತೆ 100 ಕ್ಕೂ ಹೆಚ್ಚು ಸೇವೆಗಳನ್ನು ಸಕಾಲದಲ್ಲಿ ಪಡೆಯಬಹುದಾಗಿದೆ.

ಟಾಪ್ 5 ಜಿಲ್ಲೆಗಳ ವಿವರ

ಬಳ್ಳಾರಿ (ಮೊದಲ ಸ್ಥಾನ – 78.65 ಅಂಕ)
ಚಾಮರಾಜನಗರ (ಎರಡನೇ ಸ್ಥಾನ – 78.45 ಅಂಕ)
ಧಾರವಾಡ (ಮೂರನೇ ಸ್ಥಾನ – 78.38 ಅಂಕ)
ಕಲಬುರಗಿ (ನಾಲ್ಕನೇ ಸ್ಥಾನ – 78.27 ಅಂಕ)
ಹಾವೇರಿ (ಐದನೇ ಸ್ಥಾನ – 78.26 ಅಂಕ).

ಕಳಪೆ ಸಾಧನೆ

ಉಳಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ 31ನೇ ಸ್ಥಾನ ಪಡೆಯುವ ಮೂಲಕ ಕಳಪೆ ಸಾಧನೆ ಮಾಡಿದ್ದು, ಅಧಿಕಾರಿಗಳ ಕಾರ್ಯಕ್ಷಮತೆ, ಜನಪ್ರತಿನಿಧಿಗಳ ಜವಾಬ್ದಾರಿಯನ್ನು ಪ್ರಶ್ನಿಸುವಂತೆ ಮಾಡಿದೆ.

ರಾಜ್ಯಾದ್ಯಂತ ಮಾರ್ಚ್ ತಿಂಗಳಲ್ಲಿ ಲಕ್ಷಾಂತರ ಅರ್ಜಿಗಳು ಸಕಾಲ ಅಡಿಯಲ್ಲಿ ಸಲ್ಲಿಕೆಯಾಗಿದ್ದು, ಬೆಳಗಾವಿ (1,49,236) ಮತ್ತು ತುಮಕೂರು (1,19,794) ಜಿಲ್ಲೆಗಳಲ್ಲಿ ಅತಿ ಹೆಚ್ಚು ಸ್ವೀಕೃತಿ ದಾಖಲಾಗಿದೆ. ಆದರೆ ಕಾರ್ಯಕ್ಷಮತೆ ಆಧಾರದ ಮೇಲೆ ನಿಗದಿತ ಅವಧಿಯೊಳಗೆ ಅರ್ಜಿಗಳ ವಿಲೇವಾರಿಯಲ್ಲಿ ಬಳ್ಳಾರಿ ಜಿಲ್ಲೆಯು ಅಗ್ರಸ್ಥಾನ ಕಾಯ್ದುಕೊಂಡಿದೆ.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

[ccc_my_favorite_select_button post_id="120613"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]