ದೊಡ್ಡಬಳ್ಳಾಪುರ: ಸ್ವಯಂಭುವೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

Swayambhuveshwaraswamy Brahmarathotsava

ದೊಡ್ಡಬಳ್ಳಾಪುರ: ನಗರದ ಗ್ರಾಮಾಂತರ ಪೊಲೀಸ್ ಠಾಣೆ ಸಮೀಪದ ಸ್ವಯಂಭುವೇಶ್ವರ ಸ್ವಾಮಿ (ಸೋಮೇಶ್ವರ) ದೇವಾಲಯದಲ್ಲಿ ಶ್ರೀ ಸ್ವಯಂಭುವೇಶ್ವರ ಸ್ವಾಮಿ ಬ್ರಹ್ಮರಥೋತ್ಸವ (Brahmarathotsava) ಶ್ರದ್ಧಾಭಕ್ತಿಗಳಿಂದ ನೆರವೇರಿತು.

ಬ್ರಹ್ಮರಥೋತ್ಸವದ ಅಂಗವಾಗಿ ಗಿರಿಜಾ ಕಲ್ಯಾಣೋತ್ಸವ, ಪ್ರಾಕಾರೋತ್ಸವ ನಡೆಯಿತು.

ಏಪ್ರಿಲ್ 2 ರಂದು ಹಗಲು ಪೆರಿಷೆ ನಡೆಯಲಿದೆ.

ಏ.8ರವರೆಗೆ ನಿತ್ಯ ಪ್ರಾಕಾರೋತ್ಸವ, ಪೂಜಾ ಕಾರ್ಯಗಕ್ರಮಗಳು ನಡೆಯಲಿದ್ದು, ಮೇ1ರಂದು ರಾತ್ರಿ ಹೂವಿನ ಪಲ್ಲಕ್ಕಿ, ಕರಗದ ಉತ್ಸವ ನಡೆಯಲಿದೆ.

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ; ಆಯೋಜಕರಿಗೆ ಸಂಕಷ್ಟ..!

DJ used in Doddaballapura procession; trouble for organizers..!
DJ used in Doddaballapura procession; trouble for organizers..!

ದೊಡ್ಡಬಳ್ಳಾಪುರ; ಭಾನುವಾರ ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ನಗರದಲ್ಲಿ ಶೋಭಾಯಾತ್ರೆ ( DJ used in Doddaballapura Sobhayatre; trouble for organizers..!) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

ಹೌದು ಪ್ರತಿ ವರ್ಷದಂತೆಯೇ ಈ ಬಾರಿಯೂ ಡಿ.ಜೆಗೆ ಅನುಮತಿ ನೀಡದೆ ಧ್ವನಿವರ್ಧಕಗಳ ಬಳಕೆಗೆ ಮಾತ್ರ ಅನುಮತಿ ನೀಡಲಾಗಿತು. ಆದರೆ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿರುವ ಆದೇಶ ಉಲ್ಲಂಘಿಸಿ ಡಿಜೆ ಬಳಕೆ ಮಾಡಿರುವ ಆರೋಪದ ಮೇಲೆ ಆಯೋಜಕರ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೋಭಾಯಾತ್ರೆಯಲ್ಲಿ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಖಂಡಿಸಿ ಶನಿವಾರ ಮಧ್ಯಾಹ್ನ 3 ಗಂಟೆಯಿಂದ ನಗರ ಪೊಲೀಸ್ ಠಾಣೆ ಮುಂದೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಶ್ರೀರಾಮ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ನಗರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಪಾಂಡುರಂಗ ಅವರ ಸಮ್ಮುಖದಲ್ಲಿ ಶಾಸಕ ಧೀರಜ್ ಮುನಿರಾಜು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ‘ಡಿಜೆ ಬಳಸದೆ ಶೋಭಾಯಾತ್ರೆಯಲ್ಲಿ ಧ್ವನಿ ವರ್ಧಕಗಳನ್ನು ಮಾತ್ರ ಬಳಸಬೇಕು’ ಎಂದು ಪೊಲೀಸರು ತಿಳಿಸಿದ್ದರು.

ಅದರಂತೆಯೇ ಮಧ್ಯಾಹ್ನ 3 ಗಂಟೆಗೆ ಭಗತ್‌ಸಿಂಗ್ ಕ್ರೀಡಾಂಗಣದಿಂದ ಪ್ರಾರಂಭವಾದ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ, ಇಮ್ಮಡಿ ಪುಲಿಕೇಶಿ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ವಿವಿಧ ದೇವತೆಗಳ ಪ್ರತಿಮೆಗಳು ಮೆರವಣಿಗೆ ನಡೆಲಾಯಿತು. ವಿವಿಧ ಕಲಾತಂಡಗಳು ಭಾಗವಹಿಸಿದ್ದವು.

ಈ ಶೋಭಾಯಾತ್ರೆ ಡಿಜೆ ಆದೇಶ ಉಲ್ಲಂಘಿಸಿ ಡಿಜೆ ಬಳಕೆ ಮಾಡಿರುವ ಆರೋಪ ಹಾಗೂ ಕಾರ್ಯಕ್ರಮದ ಅನುಮತಿ ರಾತ್ರಿ 10 ಗಂಟೆಗೆ ಮಾತ್ರ ನೀಡಿದ್ದರು, 11, 45ರ ವರೆಗೂ ನಡೆಸಿದ್ದಾರೆಂಬ ಕಾರಣ ಕಾರ್ಯಕ್ರಮದ ಆಯೋಜಕರು, ಡಿಜೆ ವಾಹನ ಮಾಲೀಕರು ಹಾಗೂ ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿಜೆ ಬಳಸದಂತೆ ಎಸ್ಪಿ ಮನವಿ

ದೊಡ್ಡಬಳ್ಳಾಪುರದಲ್ಲಿ ನಡೆದ ಶೋಭ ಯಾತ್ರೆಯಲ್ಲಿ (Shobha Yatre) ಡಿಜೆ ಹಾಗೂ ಇತರೆ ಹೆಚ್ಚಿನ ಶಬ್ದ ಬರುವಂತಹ ಯಾವುದೇ ಸಲಕರಣೆಗಳನ್ನು ಬಳಸದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆದೇಶಿಸಿದ್ದು, ತಪ್ಪಿದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದರು‌‌.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದ ಅವರು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ರಾಮನವಮಿಯ ಅಂಗವಾಗಿ ಬೃಹತ್ ಶೋಭ ಯಾತ್ರೆಯನ್ನು ಆಯೋಜಿಸುತ್ತಿರುವುದು ಸಂತಸ ಮತ್ತು ಶುಭದಾಯಕವಾದ ವಿಚಾರ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಕಾರ್ಯಕ್ರಮದಲ್ಲಿ ಶಾಂತಿ ಮತ್ತು ಕಾಪಾಡುವ ಸಲುವಾಗಿ ಡಿಜೆ ಅಥವಾ ಹೆಚ್ಚಿನ ಶಬ್ದ ಬರುವಂತಹ ಯಾವುದೇ ಸಲಕರಣೆಗಳನ್ನು ಈ ಬಾರಿ ನಿಷೇಧಿಸಲಾಗಿದೆ.

ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಅಂತಿಮ ಘಟ್ಟದಲ್ಲಿ ಇರುತ್ತವೆ. 8, 9ನೇ ತರಗತಿಯ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳು ಸಹ ಚಾಲ್ತಿಯಲ್ಲಿರುತ್ತವೆ. ಇದಲ್ಲದೆ 60 ವಯಸ್ಸಿನ ಮೇಲ್ಪಟ್ಟಂತಹ ಹಲವಾರು ವೃದ್ಧರು 18 ವರ್ಷದೊಳಗಿನ ಮಕ್ಕಳು ಸಾವಿರಾರು ಸಾವಿರಾರು ಸಂಖ್ಯೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಇರುತ್ತಾರೆ.

ಇಂತಹ ಸಂದರ್ಭದಲ್ಲಿ ಅವರುಗಳ ಆರೋಗ್ಯದ ದೃಷ್ಟಿಯಿಂದ ಹಾಗೂ 20 ರಿಂದ 25 ಸಾವಿರಕ್ಕೂ ಹೆಚ್ಚು ಜನಸಂದಣಿ ಯಾಗುವ ಈ ಕಾರ್ಯಕ್ರಮದಲ್ಲಿ ಕಾನೂನು ವ್ಯವಸ್ಥೆ ಪಾಲನೆಯಾಗುವ ದೃಷ್ಟಿಯಿಂದ ಡಿಜೆ ಮತ್ತು ಇತರೆ ಹೆಚ್ಚಿನ ಶಬ್ದ ಬರುವಂತಹ ಹೆಚ್ಚಿನ ಡಿಸಿಬಲ್ ಇರುವಂತಹ ಯಾವುದೇ ಸಲಕರಣೆಗಳನ್ನು ಕಾರ್ಯಕ್ರಮದಲ್ಲಿ ನಿಷೇಧಿಸಲಾಗಿದೆ.

ಇದರ ಬದಲಾಗಿ ಸಂಸ್ಕೃತಿ ಸಂಪ್ರದಾಯಗಳನ್ನು ಸಾರುವಂತಹ ಈ ಬೃಹತ್ ಕಾರ್ಯಕ್ರಮದಲ್ಲಿ ಚಂಡೆ, ಮದ್ದಳೆ, ತಮಟೆ, ತವಿಲ್ ವೀಣೆ. ಶಹನಾಯಿ, ನಗಾರಿ, ಸ್ಥಳೀಯ ಬ್ಯಾಂಡುಗಳಂತಹ ಯಾವುದೇ ಭಾರತೀಯ ಸಂಸ್ಕೃತಿಯನ್ನು ಹೆಚ್ಚಿಗೆ ಪ್ರತಿನಿಧಿಸುವಂತಹ ವಾದ್ಯಗಳನ್ನು ಬಳಸುವ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರೆಗನ್ನು ತರಲು ಕೋರಿದ್ದರು‌.

ಇದಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಜನಪ್ರತಿನಿಧಿಗಳು ವಿವಿಧ ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಸಹಕರಿಸುವಂತೆ ಮನವಿ ಮಾಡಿದ್ದರು‌.

ಅಲ್ಲದೆ ಈ ಮನವಿಯನ್ನು ಕಟ್ಟುನಿಟ್ಟಿನ ಸೂಚನೆ ಎಂದು ತಿಳಿಯುವುದು. ಇದನ್ನು ಹೊರತುಪಡಿಸಿಯೂ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಥಮ ವರ್ತಮಾನ ವರದಿ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದರು.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

[ccc_my_favorite_select_button post_id="120613"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]