ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

India has become a strong country under Prime Minister Modi's rule: Basavaraj Bommai

ಬೆಂಗಳೂರು: ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಮಾದರಿಯಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು. ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ.

ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಪುನರುಚ್ಚರಿಸಿದ್ದಾರೆ.

ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು.

ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ.

ಮತ್ತೊಮ್ಮೆ ವಿನಯಪೂರ್ವಕವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ತಿಳಿಸುತ್ತಾ, ಹಾವೇರಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]