ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಚಿನ್ನ ಕಳವು, ಕೇಂದ್ರ ಬಿಜೆಪಿ ಸರ್ಕಾರದಿಂದ ತನಿಖೆಯಾಕಿಲ್ಲ?; ಡಿಸಿಎಂ ಡಿ.ಕೆ. ಶಿವಕುಮಾರ್

Gold theft at Ayyappa temple, no investigation by BJP government? D.K. Shivakumar

ಕಣ್ಣೂರು: “ಕೇರಳಂ ಜನತೆ ಬದಲಾವಣೆ ಬಯಸಿದ್ದು, ಅಭಿವೃದ್ಧಿ, ನಿರುದ್ಯೋಗ ಸಮಸ್ಯೆಗೆ ಪರಿಹಾರ, ಸ್ವಾಮಿ ಅಯ್ಯಪ್ಪನಿಗೆ ನ್ಯಾಯ ಒದಗಿಸಲು ಬಯಸುತ್ತಿರುವ ಜನ ಕಾಂಗ್ರೆಸ್ ಹಾಗೂ ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತದೊಂದಿಗೆ ಗೆಲ್ಲಿಸಲಿದ್ದಾರೆ ಎಂದು ಶೇಕಡ ನೂರರಷ್ಟು ವಿಶ್ವಾಸ ನಮಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಕೇರಳಂ ರಾಜ್ಯದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ತೆರಳಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಕೇರಳಂನಲ್ಲಿ ಚುನಾವಣೆ ಕಾವು ಹೇಗಿದೆ ಎಂದು ಕೇಳಿದಾಗ, “ಅಯ್ಯಪಸ್ವಾಮಿ ದೇವಾಲಯದ ಚಿನ್ನ ಕಳ್ಳತನ ಪ್ರಕರಣವನ್ನು ಸಿಪಿಐಎಂ ಸರ್ಕಾರ ಸರಿಯಾದ ತನಿಖೆ ನಡೆಸಿಲ್ಲ. ಕೇಂದ್ರ ಬಿಜೆಪಿ ಸರ್ಕಾರ ಕೂಡ ಈ ಪ್ರಕರಣದ ಸಿಬಿಐ ತನಿಖೆ ನಡೆಸಿಲ್ಲ. ಬೆಲೆ ಏರಿಕೆ ಸಮಸ್ಯೆ ನಡುವೆ ಸೌದಿ ಸೇರಿದಂತೆ ಅರಬ್ ರಾಷ್ಟ್ರಗಳಿಂದ ಲಕ್ಷಾಂತರ ಜನ ಕೇರಳಕ್ಕೆ ಮರಳುತ್ತಿದ್ದಾರೆ. ಪ್ರತಿ ವರ್ಷ ಲಕ್ಷಾಂತರ ಯುವಕರು ಕೆಲಸ ಹುಡುಕಿಕೊಂಡು ಕೇರಳದಿಂದ ಹೊರಗೆ ಹೋಗುತ್ತಿದ್ದಾರೆ. ಇದು ರಾಜ್ಯದ ಪ್ರಮುಖ ಸಮಸ್ಯೆಯಾಗಿದೆ. ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯವಿದ್ದು ಯುಡಿಎಫ್ ಮೈತ್ರಿಕೂಟವನ್ನು ಕೇರಳಿಗರು ಆರಿಸಲಿದ್ದಾರೆ. ಕಳೆದ ಹತ್ತುವರ್ಷಗಳ ಪಿಣರಾಯಿ ವಿಜಯನ್ ಅವರ ಸರ್ಕಾರ ವಿಫಲವಾಗಿದ್ದು, ಅಭಿವೃದ್ಧಿಯ ಯಾವುದೇ ಗುರುತು ನಮ್ಮ ಕಣ್ಣಿಗೆ ಕಾಣುತ್ತಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯುಡಿಎಫ್ ಅಧಿಕಾರಕ್ಕೆ ಬಂದರೆ ಸಿಎಂ ಯಾರಾಗಲಿದ್ದಾರೆ ಎಂದು ಕೇಳಿದಾಗ, “ಕಾಂಗ್ರೆಸ್ ಪಕ್ಷ ಸಿಎಂ ಆಗಿರುತ್ತದೆ. ಇಲ್ಲಿ ನಿರ್ದಿಷ್ಠ ವ್ಯಕ್ತಿ ಎಂಬುದಕ್ಕಿಂತ ಪಕ್ಷ ಮುಖ್ಯ. ಕಾಂಗ್ರೆಸ್ ಪಕ್ಷ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿದ್ದು, ಕಾಂಗ್ರೆಸ್ ಪಕ್ಷದ ನಾಯಕತ್ವದ ಮೇಲೆ ನಂಬಿಕೆ ಇದೆ” ಎಂದು ತಿಳಿಸಿದರು.

ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವುದು ಮ್ಯಾಚ್ ಫಿಕ್ಸಿಂಗ್ ಎನ್ನುತ್ತಾರಾ? ಕೇರಳಂ ಜನ ಭರ್ಜರಿ ಮತಗಳೊಂದಿಗೆ ರಾಹುಲ್ ಗಾಂಧಿ ಅವರನ್ನು ಸಂಸತ್ತಿಗೆ ಆಯ್ಕೆ ಮಾಡಿದಾಗ, ಅವರು ಕೋಲಾರದಲ್ಲಿ ಮಾಡಿದ ಭಾಷಣವನ್ನು ನೆಪವಾಗಿಟ್ಟುಕೊಂಡು ಸಂಸತ್ ಸದಸ್ಯತ್ವದಿಂದ ಅನರ್ಹ ಮಾಡಲು ಮುಂದಾದರು. ಆ ಮೂಲಕ ಕೇರಳ ಜನರಿಗೆ ಅಪಮಾನ ಎಸಗಿದರು. ಇದನ್ನು ಮ್ಯಾಚ್ ಫಿಕ್ಸಿಂಗ್ ಎಂದು ಕರೆಯುತ್ತಾರಾ?” ಎಂದು ತಿಳಿಸಿದರು.

ಕೇರಳಂನಲ್ಲೂ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷನಾಗಿ ನಾನು ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ನಾವು ಕೊಟ್ಟ ಮಾತಿನಂತೆ ನಡೆದಿದ್ದೇವೆ. ಪ್ರತಿ ಮರಕ್ಕೆ ಬೇರು ಮುಖ್ಯ. ನಾವು ಬೇರನ್ನು ನಂಬಿರುವವರು. ಬೇರು ಇಲ್ಲದೇ ನಂಬಿಕೆ ಮೂಡಲು ಸಾಧ್ಯವಿಲ್ಲ. ಜನರು ನಮ್ಮನ್ನು ನಂಬಿದರು. ನಾವು ಅವರ ನಂಬಿಕೆ ಉಳಿಸಿಕೊಂಡು ನುಡಿದಂತೆ ನಡೆದಿದ್ದೇವೆ. ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದಲ್ಲಿ ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಕೇರಳದಲ್ಲಿ ಕೊಟ್ಟಿರುವ ಭರವಸೆಯಂತೆ ಇಂದಿರಾ ಕ್ಯಾಂಟೀನ್ ಆರಂಭಿಸುತ್ತೇವೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ, ಆಹಾರ ಭದ್ರತೆ, ಶೈಕ್ಷಣಿಕ ಹಕ್ಕು, ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದೆವು” ಎಂದು ತಿಳಿಸಿದರು.

ಶಬರಿಮಲ ವಿಚಾರ ಎಲ್ ಡಿಎಫ್ ಮೇಲೆ ಪರಿಣಾಮ ಬೀರಲಿದೆಯೇ ಎಂದು ಕೇಳಿದಾಗ, “ಖಂಡಿತವಾಗಿ ಪರಿಣಾಮ ಬೀರಲಿದೆ. ಇದು ದೇವರ ನಾಡು. ಇಲ್ಲಿನ ಜನ ದೇವರು, ಧರ್ಮ, ಸಂಸ್ಕೃತಿಯ ಮೇಲೆ ನಂಬಿಕೆ ಇಟ್ಟಿದ್ದಾರೆ. ದೇವರ ಹಿತಾಸಕ್ತಿಯನ್ನು ನಾವು ಕಾಪಾಡಬೇಕು. ದೇಶದ ಎಲ್ಲಾ ಭಾಗದ ಜನ ನಂಬಿಕೆಯ ಮೇಲೆ ಶಬರಿಮಲೆಗೆ ಬರುತ್ತಾರೆ. ಈ ದೇಶ ಹಾಗೂ ರಾಜ್ಯದ ಬೇರು ನಂಬಿಕೆ ಮೇಲೆ ನಿಂತಿದೆ. ಈ ಕಾರಣದಿಂದಾಗಿ ಎಲ್ ಡಿಎಫ್ ಸರ್ಕಾರವನ್ನು ಈ ಬಾರಿಯ ಚುನಾವಣೆಯಲ್ಲಿ ಬೇರು ಸಮೇತ ಕಿತ್ತೊಗೆಯಲಾಗುವುದು” ಎಂದು ತಿಳಿಸಿದರು.

ಮಲಯಾಳಂ ಭಾಷಾ ನೀತಿ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೇರಳಂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಜನ ಅಸಂತುಷ್ಟರಾಗಿದ್ದು, ಈ ಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನರು ಯುಡಿಎಫ್ ಗೆ ಬೆಂಬಲ ನೀಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷ ಹಾಗೂ ಯುಡಿಎಫ್ ಗೆ ಭರ್ಜರಿ ಬಹುಮತ ನೀಡಿದ್ದು, ವಿಧಾನಸಭಾ ಚುನಾವಣೆಯಲ್ಲೂ ಮೂರನೇ ಎರಡರಷ್ಟು ಬಹುಮತ ನೀಡಲಿದ್ದಾರೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ಟ್ರೆಕಿಂಗ್ ಗೆ ತೆರಳಿದ್ದ ಕೇರಳದ ಯುವತಿ ನಾಪತ್ತೆಯಾಗಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಲಭ್ಯವಿಲ್ಲ. ನೀವು ಪ್ರಶ್ನೆ ಕೇಳಿರುವುದರಿಂದ ಮಾಹಿತಿ ಪಡೆದು ಉತ್ತರ ನೀಡುವೆ” ಎಂದು ತಿಳಿಸಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!