5 ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳವೇ ಈ ಸರ್ಕಾರಕ್ಕೆ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

JDS-BJP alliance government will come to power; H.D. Kumaraswamy

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

ದಾವಣಗೆರೆಯಲ್ಲಿ ಭಾನುವಾರ ಬೆಳಗ್ಗೆ ಮಾಧ್ಯಮಗೋಸ್ತಿಯನ್ನು ಉದ್ದೇಶಿಸಿ ಕೇಂದ್ರ ಸಚಿವರು ಮಾತನಾಡಿದರು.

ಮುಖ್ಯಮಂತ್ರಿಗಳ ಅವಕಾಶವಾದಿ ರಾಜಕಾರಣ ಯಾವ ರೀತಿ ಇರುತ್ತದೆ ಎಂಬುದು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಗಜ್ಜಾಹೀರು ಆಗಿದೆ. ಅಹಿಂದ ವರ್ಗದಲ್ಲಿ ಪ್ರಮುಖ ಭಾಗವಾಗಿರುವ ಮುಸ್ಲಿಂ ಜನಾಂಗದ ಮತಗಳಿಂದಲೇ ರಾಜಕೀಯ ಶಕ್ತಿ ಬಳಸಿಕೊಂಡ ಸಿದ್ದರಾಮಯ್ಯನವರು, ಈಗ ನೋಡಿದರೆ ಕಣದಲ್ಲಿರುವ ಯಾವೊಬ್ಬ ಮುಸ್ಲಿಂ ಅಭ್ಯರ್ಥಿಗೂ ಮತ ಹಾಕಬೇಡಿ ಎಂದು ಬಹಿರಂಗವಾಗಿ ಕರೆ ನೀಡಿದ್ದಾರೆ. ಸಾಮಾಜಿಕ ನ್ಯಾಯ ಎಂದರೆ ಹೀಗೆನಾ ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಅಹಿಂದ ವರ್ಗದ ನಾಯಕ ನಾನು, ಅಹಿಂದ ವರ್ಗಕ್ಕೆ ದೊಡ್ಡ ಕೊಡುಗೆ ನೀಡಿದ್ದೇನೆ ಎನ್ನುತ್ತಾರೆ. ಆದರೆ ವಾಲ್ಮೀಕಿ ನಿಗಮದ ಕಥೆ ಏನಾಯ್ತು? ಅಲ್ಲಿ ಲೂಟಿಯಾಗಿದೆ ಎಂಬುದನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಪ್ರತಿಪಕ್ಷಗಳು ಹೇಳಿದಷ್ಟು ಪ್ರಮಾಣದಲ್ಲಿ ದುಡ್ಡು ಹೊಡೆದಿಲ್ಲ, ಆದರೂ ಸ್ವಲ್ಪ ದುಡ್ಡು ಹೊಡೆದಿದ್ದೇವೆ ಎಂದು ಹೇಳುತ್ತಾರೆ. ದೇವರಾಜ್ ಅರಸು ನಿಗಮದ ಮೂಲಕ ಬಡವರಿಗೆ ನೀಡಲಾಗುವ ಗಂಗಾ ಕಲ್ಯಾಣ ಯೋಜನೆಯನ್ನು ಲೂಟಿ ಆಗಿದೆ. ಒಬ್ಬರು ಇಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ. ಅಂತಹ ಆಯೋಜನೆಯನ್ನು ಕೂಡ ಇವರು ಬಿಟ್ಟಿಲ್ಲ ಎಂದು ಅವರು ಕಿಡಿಕಾರಿದರು.

ಉಪ ಚುನಾವಣೆಯನ್ನು ಹೇಗಾದರೂ ಗೆಲ್ಲಲೇಬೇಕು ಎಂದು ಇಡೀ ಸರ್ಕಾರ ಆಡಳಿತವನ್ನು ಗಾಳಿಗೆ ಬಿಟ್ಟು ದಾವಣಗೆರೆಯಲ್ಲಿ ಮೊಕ್ಕಂ ಹೂಡಿದೆ. ವಿಧಾನಸೌಧ ಸಂಪೂರ್ಣ ಖಾಲಿ ಆಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಜೊತೆಗೆ ಎಐಸಿಸಿ ರಾಜ್ಯ ಉಸ್ತುವಾರಿ ಆಗಿರುವ ವ್ಯಕ್ತಿ ಕೂಡ ಇಲ್ಲಿಯೇ ತಳವೂರಿದ್ದಾರೆ ಅವರು ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಪಕ್ಷ ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನತೆಯ ಬಗ್ಗೆ ನಮಗೆ ಬದ್ಧತೆ ಇದೆ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಇವರಿಗೆ ಅದು ಯಾವ ರೀತಿಯ ಬದ್ಧತೆ ಇದೆಯೋ ನನಗೆ ಗೊತ್ತಿಲ್ಲ ಎಂದು ಟೀಕಿಸಿದರು ಕೇಂದ್ರ ಸಚಿವರು.

ಮುಖ್ಯಮಂತ್ರಿಗಳು ಉಪ ಚುನಾವಣೆ ಕಣದಲ್ಲಿ ತಮ್ಮ ಸರ್ಕಾರದ ಸಾಧನೆಗಳನ್ನು ಜನತೆಗೆ ಹೇಳುವುದನ್ನು ಬಿಟ್ಟು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಪದ ಬಳಕೆಯನ್ನು ನಾನು ಗಮನಿಸಿದ್ದೇನೆ. ಇದು ಜವಾಬ್ದಾರಿಯುತ ಮುಖ್ಯಮಂತ್ರಿ ಪದವಿಯಲ್ಲಿ ಕೂತಿರುವ ವ್ಯಕ್ತಿಗೆ ಭೂಷಣವಲ್ಲ ಎಂದು ಕುಮಾರಸ್ವಾಮಿಯವರು ಕಟುವಾಗಿ ಟೀಕಿಸಿದರು.

ಗ್ಯಾರೆಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ, ಬೇಕಾಬಿಟ್ಟಿಯಾಗಿ ನೀಡುತ್ತಿದ್ದಾರೆ. ಗೃಹಲಕ್ಷ್ಮಿ ಹಣ ಬಾಕಿ ಉಳಿಸಿಕೊಂಡು ಎಲೆಕ್ಷನ್ ಬಂದಾಗ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುತ್ತಿದ್ದಾರೆ. ಉಳಿದಂತೆ ಸರ್ಕಾರದ ಸಾಧನೆ ಶೂನ್ಯ. ಕಳೆದ ಮೂರು ವರ್ಷಗಳಲ್ಲಿ ಇವರು ಮಾಡಿದ ಸಾಧನೆ ಏನೇನು ಇಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. ಇನ್ನು ಎರಡು ತಿಂಗಳಿಗೆ ಈ ಸರ್ಕಾರ ನಾಲ್ಕನೇ ವರ್ಷಕ್ಕೆ ಕಾಲಿಡುತ್ತದೆ ಎಂದು ಸಚಿವರು ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಈ ಸರ್ಕಾರ ಏನಾದರೂ ಸಾಧನೆ ಮಾಡಿದೆಯಾ ಎಂದು ಮಾಧ್ಯಮಗಳಲ್ಲಿ ದುರ್ಬೀನು ಹಾಕಿ ಹುಡುಕಿದರು ಏನೇನು ಸಿಗುವುದಿಲ್ಲ. ಗ್ಯಾರೆಂಟಿಗಳನ್ನು ಬಿಟ್ಟು ಉಳಿದಂತೆ ಏನು ಸಾಧನೆ ಮಾಡಿರುವುದು ತಿಳಿಯುವುದಿಲ್ಲ. ವೃಷ್ಯ ಮಾಧ್ಯಮಗಳನ್ನು ನೋಡಿದರೆ, ಪತ್ರಿಕೆಗಳನ್ನು ಓದಿದರೆ ಮುಖ್ಯಮಂತ್ರಿಗಳು ಕುರ್ಚಿಗೆ ಪ್ರಾಮುಖ್ಯತೆ ಕೊಟ್ಟಿರುವ ವರದಿಗಳಷ್ಟೇ ಕಣ್ಣಿಗೆ ಕಾಣುತ್ತದೆ. ಅದು ಬಿಟ್ಟರೆ ಭ್ರಷ್ಟಾಚಾರದ ಹಗರಣಗಳು ಹೆಜ್ಜೆ ಹೆಜ್ಜೆಗೂ ಗೋಚರವಾಗುತ್ತಿವೆ ಎಂದು ಕುಮಾರಸ್ವಾಮಿಯವರು ಬೇಸರ ವ್ಯಕ್ತಪಡಿಸಿದರು.

ಕಾಂತರಾಜು, ಜಯಪ್ರಕಾಶ ಹೆಗಡೆ ವರದಿಗಳನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಏಕೆ ಇಟ್ಟಿದ್ದೀರಿ

ಪದೇ ಪದೇ ಮುಖ್ಯಮಂತ್ರಿಗಳು ಒಂದು ಮಾತು ಹೇಳುವುದನ್ನು ಗಮನಿಸಿದ್ದೇನೆ. ಕುಮಾರಸ್ವಾಮಿ ಅವರನ್ನು ನಾವು ಮುಖ್ಯಮಂತ್ರಿ ಮಾಡಿದ್ದೆವು. ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಮೀಕ್ಷೆ ನಡೆಸಲು ನೇಮಿಸಲಾಗಿದ್ದ ಕಾಂತರಾಜು ಆಯೋಗದ ವರದಿಯನ್ನು ಸ್ವೀಕರಿಸದೆ ಅದನ್ನು ಕುಮಾರಸ್ವಾಮಿ ತಡೆದು ಹಿಡಿದುಬಿಟ್ಟರು ಎಂದು ದೂರುತ್ತಿದ್ದಾರೆ. ಈ ವಿಷಯ ಇಟ್ಟುಕೊಂಡು ಅವರು ನನ್ನ ಮೇಲೆ ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಗಳನ್ನು ಕೇಳುವುದು ಇಷ್ಟೇ, ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಆಮೇಲೆ ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಅದನ್ನು ಎಷ್ಟು ದಿನವೆಂದು ನಿಮ್ಮ ಬಳಿ ಇಟ್ಟುಕೊಳ್ಳುತ್ತೀರಿ? ಎರಡು ವರದಿಗಳನ್ನು ಇನ್ನೂ ಯಾಕೆ ಇನ್ನು ಸ್ಟೋರೇಜ್ ನಲ್ಲಿ ಇಟ್ಟುಕೊಂಡಿದ್ದೀರಿ? ಯಾಕೆ ವರದಿಗಳನ್ನು ಇನ್ನು ಬಿಡುಗಡೆ ಮಾಡಿಲ್ಲ? ಅಹಿಂದ ನಾಯಕ ಎನ್ನುವ ನೀವು ಅವುಗಳನ್ನು ಹೊರಕ್ಕೆ ತಂದು ಇನ್ನೂ ಅವಕಾಶ ವಂಚಿತ ಸಮುದಾಯಗಳಿಗೆ ಅನುಕೂಲ ಯಾಕೆ ಮಾಡಿಕೊಡುತ್ತಿಲ್ಲ ಎಂದು ಮುಖ್ಯಮಂತ್ರಿಗಳನ್ನು ಸಚಿವ ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಒಳ ಮೀಸಲಾತಿ ವಿಚಾರ ದೊಡ್ಡ ವಿಚಾರವಾಗಿ ಪರಿಣಮಿಸಿದೆ. ಬೀದಿ ಬೀದಿಯಲ್ಲಿ ಅದರ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಯಾಕೆ ಮೌನ ವಹಿಸಿದ್ದಾರೆ?
ಎಲ್ಲವನ್ನು ಬಿಟ್ಟು ಗ್ಯಾರೆಂಟಿಗಳ ಬಗ್ಗೆ ಮಾತ್ರ ಜಾಗಟೆ ಹೊಡಿತಿದಿರಿ. ಇದುವರೆಗೂ ರಾಜ್ಯದಲ್ಲಿ ಆಗಿ ಹೋದ ಎಷ್ಟೋ ಸರ್ಕಾರಗಳು ಗ್ಯಾರಂಟಿಗಳಿಗಿಂತ ಉತ್ತಮ ಕಾರ್ಯಕ್ರಮಗಳನ್ನು ಕೊಟ್ಟಿವೆ. ಆದರೆ ನೀವು ಗ್ಯಾರೆಂಟಿಗಳನ್ನು ಹೇಗೆ ಕೊಡುತ್ತಿದ್ದೀರಿ ಎಂಬುದು ಜನರಿಗೂ ಅರ್ಥವಾಗಿದೆ ಸಂದರ್ಭ ಬರಲಿ ಎಂದು ಕಾಯುತ್ತಿದ್ದಾರೆ. ಗ್ಯಾರೆಂಟಿಗಳಿಂದ ಕಾಂಗ್ರೆಸ್ಸು ಶಾಶ್ವತವಾಗಿ ಅಧಿಕಾರದಲ್ಲಿ ಇರಲು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ತಲಾದಾಯ ಉತ್ತಮವಾಗಿದ್ದರೆ ಗ್ಯಾರಂಟಿ ಏಕೆ?

ರಾಜ್ಯವು ಸಮೃದ್ಧವಾಗಿದೆ, ಇಡೀ ದೇಶದಲ್ಲಿ ತಲಾದಾಯ ಮಾನದಂಡದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ನೀವು ಹೇಳುತ್ತಿದ್ದೀರಿ. ಸರ್ಕಾರದ ಲೆಕ್ಕಗಳು ಪ್ರಕಾರ ರಾಜ್ಯದ ಜನರಿಗೆ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ತಲಾದಾಯ ಚೆನ್ನಾಗಿದ್ದರೆ ಈ ಈ ಅಲ್ಪ ಪರಿಹಾರದ ಗ್ಯಾರಂಟಿಗಳನ್ನು ಕೊಡುವ ಅಗತ್ಯ ಏಕೆ? ಜನ ನೆಮ್ಮದಿಯಾಗಿ ಇದ್ದರೆ ಉಚಿತ ಕೊಡುಗೆಗಳ ಅಗತ್ಯ ಏತಕ್ಕೆ? ಯಾಕೆ ಇಂತಹ ಆತ್ಮವಂಚಕ ಹೇಳಿಕೆಗಳನ್ನು ಕೊಡುತ್ತೀರಿ? ಎಷ್ಟು ವರ್ಷ ಇಂತಹ ಉಚಿತ ಕೊಡುಗೆಗಳನ್ನು ಕೊಡಲು ಸಾಧ್ಯ? ಬೇರೆ ರಾಜ್ಯಗಳಲ್ಲಿ ಕೊಟ್ಟಿದ್ದಾರೆ ಎಂದು ಹೇಳುತ್ತೀರಿ, ಇನ್ನೊಂದು ಕಡೆ ಕೊಟ್ಟರೆ ನೀವು ಕೊಡಬೇಕು ಅಂತ ಏನಾದರೂ ಇದೆಯೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಗ್ಯಾರೆಂಟಿಗಳನ್ನು ಕೊಟ್ಟು ಕುಟುಂಬಗಳನ್ನು ಪರಾವಲಂಬಿಗಳನ್ನಾಗಿ ಮಾಡುವುದಲ್ಲ. ಶಾಶ್ವತವಾಗಿ ಆರ್ಥಿಕ ಶಕ್ತಿಯನ್ನು ಕುಟುಂಬಗಳಿಗೆ ತುಂಬುವುದು ಅತ್ಯಗತ್ಯ. ಸದೃಢವಾದ ಬದುಕು ಕಟ್ಟಿಕೊಳ್ಳಲು ಸರ್ಕಾರ ನೆರವು ಕೊಡಬೇಕಿದೆ. ಪರಿಶಿಷ್ಟರ ಹಣವನ್ನು ಕಿತ್ತು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದೀರಿ. ಕೊನೆ ಪಕ್ಷ ದಲಿತ ಅಲ್ಪಸಂಖ್ಯಾತ ಮಕ್ಕಳಿಗೆ ಸಕಾಲಕ್ಕೆ ವಿದ್ಯಾರ್ಥಿ ವೇತನ ಕೊಡುವುದಕ್ಕೂ ಈ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಲಕ್ಷಾಂತರ ಮನೆ ಕಟ್ಟಿದ್ದೀರಿ ಎಂದು ಹೇಳಿಕೆಗಳನ್ನು ಕೊಡುತ್ತಿದ್ದೀರಿ, ಒಮ್ಮೆ ತೋರಿಸಿ ಎಷ್ಟು ಮನೆಗಳನ್ನು ಕಟ್ಟಿದ್ದೀರಿ ಎಂದು ನೋಡುತ್ತೇವೆ. ಚುನಾವಣೆ ನಡೆಯುತ್ತಿರುವ ದಾವಣಗೆರೆಯಲ್ಲಿ ಎಷ್ಟು ಮನೆಗಳನ್ನು ಕಟ್ಟಿದ್ದೀರಿ? ಲೆಕ್ಕ ಕೊಡಿ. ಹಕ್ಕುಪತ್ರಗಳನ್ನು ಕೊಡದೆ ಸತಾಯಿಸುತ್ತಿದ್ದೀರಿ ಎಂದು ಕುಮಾರಸ್ವಾಮಿ ಆರೋಪಿಸಿದರು.

ಮಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಮುರುಗೇಶ್ ನಿರಾಣಿ, ಮಾಜಿ ಸಂಸದ ಜಿಎಂ ಸಿದ್ದೇಶ್ವರ್, ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಬೋಜೇಗೌಡ,, ದಾವಣಗೆರೆ ಉಪ ಚುನಾವಣೆಯ ಮೈತ್ರ ಕೂಟದ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೇರಿದಂತೆ ಅನೇಕ ನಾಯಕರು ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಚಿನ್ನ ಕಳವು, ಕೇಂದ್ರ ಬಿಜೆಪಿ ಸರ್ಕಾರದಿಂದ ತನಿಖೆಯಾಕಿಲ್ಲ?; ಡಿಸಿಎಂ ಡಿ.ಕೆ. ಶಿವಕುಮಾರ್

ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಚಿನ್ನ ಕಳವು, ಕೇಂದ್ರ ಬಿಜೆಪಿ ಸರ್ಕಾರದಿಂದ ತನಿಖೆಯಾಕಿಲ್ಲ?; ಡಿಸಿಎಂ ಡಿ.ಕೆ.

“ಕೇರಳಂ ಜನತೆ ಬದಲಾವಣೆ ಬಯಸಿದ್ದು, ಅಭಿವೃದ್ಧಿ, ನಿರುದ್ಯೋಗ ಸಮಸ್ಯೆಗೆ ಪರಿಹಾರ, ಸ್ವಾಮಿ ಅಯ್ಯಪ್ಪನಿಗೆ ನ್ಯಾಯ ಒದಗಿಸಲು ಬಯಸುತ್ತಿರುವ ಜನ ಕಾಂಗ್ರೆಸ್ ಹಾಗೂ ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತದೊಂದಿಗೆ ಗೆಲ್ಲಿಸಲಿದ್ದಾರೆ ಎಂದು ಶೇಕಡ ನೂರರಷ್ಟು

[ccc_my_favorite_select_button post_id="120739"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]