LPG ಸಮಸ್ಯೆಯನ್ನು ಕೇಂದ್ರ ಸರಕಾರ ಸಮರ್ಥವಾಗಿ ನಿಭಾಯಿಸಿದೆ; ಪ್ರಲ್ಹಾದ್ ಜೋಶಿ

Auto gas shortage hit Doddaballapur too..

ದೆಹಲಿ: ಅಮೆರಿಕ ಮತ್ತು ಇಸ್ರೇಲ್ ಜತೆಗೂಡಿ ಇರಾನ್ ವಿರುದ್ದ ನಡೆಸುತ್ತಿರುವ ಯುದ್ಧ ಸೋಮವಾರ 38ನೇ ದಿನಕ್ಕೆ ಕಾಲಿಟ್ಟಿದೆ. ಯುದ್ಧದ ಕಾರಣವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದರಿಂದ ನೈಸರ್ಗಿಕ ಅನಿಲ ಮತ್ತು ಎಲ್‌ಪಿಜಿ (LPG) ಪೂರೈಕೆ ವ್ಯವಸ್ಥೆಯಲ್ಲಿ ಭಾರೀ ವ್ಯತ್ಯಯವಾಗಿದೆ.

ಪರಿಣಾಮವಾಗಿ ಭಾರತದಲ್ಲಿ ಮೊದಲಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡ‌ರ್ ಸರಬರಾಜಿನಲ್ಲಿ ಮತ್ತು ಆಟೊಗ್ಯಾಸ್ ಪೂರೈಕೆಯಲ್ಲಿ ಕೊರತೆ ಎದುರಾಗಿದೆ.

ಅಡುಗೆ ಅನಿಲ ಸಿಲಿಂಡ‌ರ್ ಸರಬರಾಜು ವಿಚಾರವಾಗಿ ಆತಂಕದಲ್ಲಿದ್ದ ಜನಕ್ಕೆ ‘ದೇಶದಲ್ಲಿ ಎಲ್ಪಿಜಿ ಕೊರತೆ ಇಲ್ಲ. ಅಡುಗೆ ಅನಿಲ ಸಾಕಷ್ಟು ಲಭ್ಯವಿದೆ. ಜನರು ಆತಂಕ ಪಡಬೇಕಿಲ್ಲ’ ಎಂದು ಕೇಂದ್ರ ಸರಕಾರ ಅಭಯ ನೀಡಿದೆ.

ಅಲ್ಲದೇ ತುರ್ತು ಸ್ಥಿತಿಗೆ ಅನುಕೂಲವಾಗಲಿದೆ ಎಂದು 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯನ್ನೂ ಹೆಚ್ಚಿಸಿದೆ.

5 ಕೆಜಿ ಎಲ್‌ಪಿಜಿ ಸಿಲಿಂಡರ್ ಎಲ್ಲಾ ಏಜೆನ್ಸಿಗಳಲ್ಲೂ ಲಭ್ಯವಿವೆ. ಯಾವುದಾದರೊಂದು ಗುರುತಿನ ಚೀಟಿ ತೋರಿಸಿ ಗ್ರಾಹಕರು ಸಿಲಿಂಡರ್ ಖರೀದಿಸಬಹುದು ಎಂದು ಸರಕಾರ ಹೇಳಿದೆ. ಮಾ.23ರಿಂದ 6.60 ಲಕ್ಷದಷ್ಟು 5 ಕೆಜಿ ಸಿಲಿಂಡ‌ರ್ ಮಾರಾಟವಾಗಿವೆ.

ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ

ಪೆಟ್ರೋಲ್ ಸದಾಕಾಲ ಲಭ್ಯವಿರುವ ಇಂಧನ. ಸದ್ಯದ ಮಟ್ಟಿಗೆ ಆಟೋ ಚಾಲಕರು ಎಲ್‌ಪಿಜಿ (LPG) ಬದಲಿಗೆ ಪೆಟ್ರೋಲ್ ಬಳಸುವುದು ಸೂಕ್ತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಲಹೆ ನೀಡಿದ್ದಾರೆ

ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಸುಮಾರು 70 ದಿನಗಳಿಗೆ ಸಾಕಾಗುವಷ್ಟು ಕಚ್ಚಾ ತೈಲದ ಸಂಗ್ರಹವಿದೆ. ನಿರಂತರವಾಗಿ ತೈಲ ಪೂರೈಕೆ ಆಗುತ್ತಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ.

ವಾಣಿಜ್ಯ ಸಿಲಿಂಡರ್‌ಗಳ ವಿತರಣೆಯನ್ನು ಶೇ.70ಕ್ಕೆ ಹೆಚ್ಚಿಸಲಾಗಿದೆ. ಶೇ.60ರಷ್ಟು ಎಲ್‌ಪಿಜಿಯನ್ನು ದೇಶದಲ್ಲೇ ಉತ್ಪಾದಿಸಲಾಗುತ್ತಿದೆ. ಶೇ.40ರಷ್ಟು ಆಮದು ಮಾಡಿಕೊಳ್ಳುತ್ತಿದ್ದೇವೆ. ಜಾಗತಿಕ ಮಟ್ಟದಲ್ಲಿ ಆಟೊ ಎಲ್‌ಪಿಜಿ ಸಂಪನ್ಮೂಲಗಳು ಸೀಮಿತ ವಾಗಿವೆ. ವಿಶ್ವದ ಕೆಲವೇ ದೇಶಗಳಲ್ಲಿ ಆಟೋ ಎಲ್‌ ಪಿಜಿ ಲಭ್ಯವಿದೆ ಎಂದರು.

ಸರಕಾರಿ ಒಡೆತನದ 72 ಸೇರಿದಂತೆ ರಾಜ್ಯದಲ್ಲಿ 372 ಆಟೋ ಎಲ್‌ಪಿಜಿ ವಿತರಣಾ ಕೇಂದ್ರಗಳಿವೆ. ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯಾದ ಹಿನ್ನೆಲೆ ಯಲ್ಲಿ ಖಾಸಗಿ ಕಂಪನಿಗಳು ಪ್ರತಿ ಕೆಜಿ ಎಲ್‌ಪಿಜಿ ದರವನ್ನು 110 ರು.ಗೆ ಏರಿಸಿವೆ. ಸರಕಾರಿ ಒಡೆತನದ ಕೇಂದ್ರಗಳಲ್ಲಿ ಆಟೋ ಎಲ್‌ಪಿಜಿ ದರ ಪ್ರತಿ ಕೆಜಿಗೆ 89 ರು. ಇದೆ. ಹೀಗಾಗಿ, ಈ ಕೇಂದ್ರಗಳಲ್ಲಿ ಎಲ್‌ ಪಿಜಿಗೆ ಆಟೋಗಳ ಉದ್ದನೆಯ ಸರತಿ ಸಾಲು ಕಂಡುಬರುತ್ತಿದೆ ಎಂದು ಪ್ರತಿಕ್ರಿಯೆ ನೀಡಿದರು.

ಗ್ಯಾಸ್‌ ಸಮಸ್ಯೆಯನ್ನು ಕೇಂದ್ರ ಸರಕಾರ ಸಮರ್ಥವಾಗಿ ನಿಭಾಯಿಸಿದೆ. ಗೃಹ ಬಳಕೆ ಗ್ಯಾಸ್‌ಗೆ ಸಮಸ್ಯೆಯಾಗಿಲ್ಲ. ನಾವು ಮೊದಲೇ ಯೋಜನೆ ಮಾಡಿದ್ದರಿಂದ ಸಮಸ್ಯೆ ಆಗಿಲ್ಲ ಎಂದು ಹೇಳಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!