ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

Dharmasthala constituency is not a political issue; D.K. Suresh lashes out at opposition parties

ಬೆಂಗಳೂರು: “ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K. Suresh) ಹೇಳಿದರು.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.

ಲೋಕಸಭಾ, ವಿಧಾನಸಭಾ ಕ್ಷೇತ್ರ ಮರುವಿಂಗಡಣೆಯಿಂದ ಕ್ಷೇತ್ರಗಳು ನಷ್ಟವಾಗುವುದಿಲ್ಲ ಎನ್ನುವ ಪ್ರಧಾನಿಯವರ ಹೇಳಿಕೆಯ ಬಗ್ಗೆ ಕೇಳಿದಾಗ, “ನಾನು ಈ ಬಗ್ಗೆ ಹಿಂದೆಯೇ ಹೇಳಿದ್ದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ದಕ್ಷಿಣದ ರಾಜ್ಯಗಳು ಎಚ್ಚೆತ್ತುಕೊಳ್ಳಬೇಕು. ಒಂದಲ್ಲ ಒಂದು ದಿನ ಈ ಕೂಗು ಎದ್ದೇಳಲಿದೆ ಎಂದಿದ್ದೇ. ಇಲ್ಲದಿದ್ದರೇ ಜನರು ಪರ್ಯಾಯವಾಗ ಮಾರ್ಗಗಳನ್ನು ಆಲೋಚನೆ ಮಾಡುತ್ತಾರೆ ಎಂದು ಹೇಳಿದ್ದೆ. ಎಷ್ಟು ಸೀಟು ಹೋಗಲಿದೆ ಬರಲಿದೆ ಎನ್ನುವುದು ಮುಖ್ಯವಲ್ಲ” ಎಂದರು.

“ಇದೇ 16 ನೇ ತಾರೀಕಿನಿಂದ ವಿಶೇಷ ಲೋಕಸಭಾ ಅಧಿವೇಶನ ಕರೆಯಲಾಗಿದೆ. ಸರ್ಕಾರ ಯಾವ ರೀತಿಯಲ್ಲಿ ಬಿಲ್‌ ಮಂಡಿಸಲಿದೆ ಎಂದು ನೋಡಬೇಕಿದೆ. ಒಟ್ಟಾರೆ ದಕ್ಷಿಣದ ಹಣವನ್ನು ಉತ್ತರದ ರಾಜ್ಯಗಳಿಗೆ ತಗೆದುಕೊಂಡು ಹೋಗುವಂತಹ ಹುನ್ನಾರ ಇದಾಗಿದೆ” ಎಂದು ಹೇಳಿದರು.

“2011 ರ ಜನಗಣತಿಯ ಅನ್ವಯ ನಾವು ವಿಂಗಡಣೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇದು ಇನ್ನು ಮಾರಕ. 2011 ರ ಜನಗಣತಿ ಪ್ರಕಾರ ಬೆಂಗಳೂರಿನ ಜನಸಂಖ್ಯೆ 60-70 ಲಕ್ಷ. ಈಗ 1.40 ಕೋಟಿ ಜನಸಂಖ್ಯೆಯಿದೆ. ಕರ್ನಾಟಕದ ಜನಸಂಖ್ಯೆ 5 ಕೋಟಿಯಿತ್ತು ಈಗ ಏಳು ಕೋಟಿಗೂ ಮೀರಿ ಜನಸಂಖ್ಯೆ ಬೆಳೆಯುತ್ತಿದೆ. ಇದರ ಜೊತೆಗೆ ಆರ್ಥಿಕ ಸವಾಲು ಸೇರಿದಂತೆ ಅನೇಕ ಸವಾಲುಗಳು ಎದುರಾಗುತ್ತವೆ. ಎಲ್ಲಾ ಪಕ್ಷಗಳು ಇದರ ಬಗ್ಗೆ ಚಿಂತನೆ ಮಾಡಬೇಕು” ಎಂದು ತಿಳಿಸಿದರು.

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ

“ಯುದ್ಧದಿಂದ ಸಾಕಷ್ಟು ಸಮಸ್ಯೆಗಳನ್ನು ನಮ್ಮ ದೇಶ ಎದುರಿಸುತ್ತಿದೆ. ಇದರ ಬಗ್ಗೆ ಕೇಂದ್ರ ಸರ್ಕಾರ ತನ್ನ ಮೌನವನ್ನು ಮುರಿದಿಲ್ಲ. ಭಾರತದ ನಾಗರಿಕರಿಗೆ ಪ್ರಧಾನಿಯವರು ಬೇರೆ ಸಂದರ್ಭದಲ್ಲಿ ಸಂದೇಶ ನೀಡುತ್ತಾರೆ. ಆದರೆ ಇವತ್ತಿನ ತನಕ ಪ್ರಧಾನಿ ಸೇರಿದಂತೆ ಯಾವ ಕೇಂದ್ರ ಸಚಿವರು ಸಹ ದೇಶದ ಜನರು ಪರಿಸ್ಥಿತಿ ಹೇಗೆ ಎದುರಿಸಬೇಕು ಎಂದು ಸಂದೇಶ ನೀಡಿಲ್ಲ. ಭಾರತದ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ನೇರ ಹೊಣೆಗಾರಿಕೆ ಪ್ರಧಾನಿಯವರೇ ಹೊರಬೇಕು. ಯಾವ ವಿಚಾರದಲ್ಲಿ ಸಮಸ್ಯೆಯಿದೆ. ಮುಂದಿನ ಆರು ತಿಂಗಳು ಹೇಗೆ ಇವುಗಳನ್ನು ಎದುರಿಸಬೇಕು. ಇದಕ್ಕೆ ಯಾವ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂದೇಶ ನೀಡಬೇಕು” ಎಂದರು.

“ದೇಶದಲ್ಲಿ ಎಲ್ಲವೂ ಸರಿಯಿದೆ ಎಂದು ಮೂರನೇ ವ್ಯಕ್ತಿ ಹೇಳುವಂತಹದ್ದು, ಮಾಧ್ಯಮಗಳಲ್ಲಿ ಇದನ್ನು ಬಿತ್ತರಿಸುತ್ತಿರುವುದು ನೋಡಿದರೆ ಯಾವುದೂ ಸಹ ಸರಿಯಿಲ್ಲ ಎನ್ನುವ ಅನುಮಾನ ಉಂಟಾಗಲಿದೆ. ಬೆಲೆ ಏರಿಕೆಯಾಗಿದೆ, ಅಭಾವಗಳು ಉಂಟಾಗಿದೆ. ಈ ರೀತಿ ಆದಾಗ ಇದು ಕೃತಕವಾಗಿ ಸೃಷ್ಟಿಯಾಗಿರುವುದೇ ಅಥವಾ ಬೇರೆಯೇ ಎನ್ನುವ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು. ಎಚ್ಚರಿಕೆಯ ನಡೆ, ನುಡಿಯನ್ನ ಸರ್ಕಾರ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ” ಎಂದರು.

ಪರಮೇಶ್ವರ್‌ ಅವರನ್ನೇ ಕೇಳಬೇಕು

ಮುಂದಿನ ಎರಡು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಪರಮೇಶ್ವರ್‌ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಅವರನ್ನೇ ಕೇಳಬೇಕು. ಗೃಹಸಚಿವರು ಅಧಿಕೃತವಾಗಿ ಹೇಳಿದ್ದಾರೆ. ಅವರು ಹೇಗೆ ಹೇಳುತ್ತಾರೋ ಹಾಗೆ ಕೇಳಬೇಕು” ಎಂದರು.

ಅಣ್ಣನನ್ನು ಒಮ್ಮೆ ಸಿಎಂ ಮಾಡಬೇಕು ಎನ್ನುವ ನಿಮ್ಮ ಆಸೆಯ ಬಗ್ಗೆ ಕೇಳಿದಾಗ, “ಅದರ ಬಗ್ಗೆ ಆನಂತರ ಮಾತನಾಡೋಣ. ನಾನೇನೂ ಆಸೆಯಿಲ್ಲ ಎಂದು ಹೇಳಿಲ್ಲವಲ್ಲ. ಇಂದೇ ಸಿಎಂ ಆಗುತ್ತಾರೆ ಎಂದು ಹೇಳಿರುವೆನೆ. ಆಸೆಯಿದೆ ಎಂದು ಹೇಳಿರುವೆ” ಎಂದರು.

ಈ ಅವಧಿಯಲ್ಲಿ ನಿಮ್ಮ ಅಣ್ಣ ಸಿಎಂ ಆಗುವುದಿಲ್ಲವೇ ಎಂದು ಕೇಳಿದಾಗ, “ಆನಂತರ ಮಾತನಾಡೋಣ” ಎಂದರು.

ಉಪಚುನಾವಣೆ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು

ಉಪಚುನಾವಣೆ ಬಗ್ಗೆ ಕೇಳಿದಾಗ, “ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲಲಿದೆ. ಗ್ಯಾರಂಟಿಗಳನ್ನು ನೀಡಿದ್ದೇವೆ. ಆ ಭಾಗದ ಅಭಿವೃದ್ದಿ ವಿಚಾರದಲ್ಲಿ ನಮ್ಮ ಸರ್ಕಾರ ಸಾಕಷ್ಟು ಸ್ಪಂದಿಸಿದೆ. ಹೀಗಾಗಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ” ಎಂದರು.

ಬಾಗಲಕೋಟೆಯಲ್ಲಿ ಸೋಲಾಗಲಿದೆ ಎನ್ನುವ ಬಗ್ಗೆ ಕೇಳಿದಾಗ, “ಇದೆಲ್ಲಾ ಊಹಾಪೋಹ. ನಾವು ಅತ್ಯಧಿಕ ಮತಗಳಿಂದ ಗೆಲ್ಲಲಿದ್ದೇವೆ” ಎಂದರು.

ಆಕ್ಟೀವ್‌ ಆಗಿ ನೀವು ಕಾಣಿಸಿಕೊಳ್ಳುತ್ತಿಲ್ಲ ಎಂದು ಕೇಳಿದಾಗ, “ಈಗಲೂ ಆಕ್ಟೀವ್‌ ಆಗಿಯೇ ಇದ್ದೇನೆ” ಎಂದರು.

ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಕೇಳಿದಾಗ, “ಉಪಚುನಾವಣೆ ಆದ ನಂತರ ಮಾತನಾಡೋಣ. ಸದ್ಯಕ್ಕೆ ನಮ್ಮನ್ನು ತಮಿಳುನಾಡು ಚುನಾವಣೆ ಜವಾಬ್ದಾರಿ ನೀಡಿದ್ದಾರೆ. ಅಲ್ಲಿಗೆ ಹೋಗಿ ಆ ಜವಾಬ್ದಾರಿ ನಿಭಾಯಿಸಲಿದ್ದೇವೆ” ಎಂದರು.

ತಮಿಳುನಾಡಿನ ಪೊಲೀಸರಿಗೆ ಮರಣದಂಡಣೆ ವಿಧಿಸಿರುವ ಬಗ್ಗೆ ಕೇಳಿದಾಗ, “ಈಗ ಮಾತನಾಡಲು ಆಗುವುದಿಲ್ಲ” ಎಂದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!