ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ: ವದಂತಿಗಳಿಗೆ ಕಿವಿಗೊಡಬೇಡಿ- ಆಹಾರ ಇಲಾಖೆ

Auto gas shortage hit Doddaballapur too..

​ಬೆಂಗಳೂರು: ರಾಜ್ಯದ ವಿವಿಧ ಆಟೋ ಗ್ಯಾಸ್ (Auto Gas) ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ.

​ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ IOC (ಇಂಡಿಯನ್ ಆಯಿಲ್), BPC (ಭಾರತ್ ಪೆಟ್ರೋಲಿಯಂ) ಮತ್ತು HPC (ಹಿಂದೂಸ್ತಾನ್ ಪೆಟ್ರೋಲಿಯಂ) ಮೂಲಕ ಹೆಚ್ಚಿನ ಪ್ರಮಾಣದ ಅನಿಲವನ್ನು ಪೂರೈಕೆ ಮಾಡಲಾಗುತ್ತಿದೆ.

​ಹಿಂದೆ ಈ ಮೂರು ಸಂಸ್ಥೆಗಳು ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಅನ್ನು ಸರಬರಾಜು ಮಾಡುತ್ತಿದ್ದವು. ಆದರೆ ಪ್ರಸ್ತುತ ಬೇಡಿಕೆಯನ್ನು ಪೂರೈಸಲು ಸರಬರಾಜು ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸದ್ಯ ಪ್ರತಿದಿನ ಸರಾಸರಿ 83.58 ಮೆಟ್ರಿಕ್ ಟನ್ ಗ್ಯಾಸ್ ಅನ್ನು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೂರೈಸಲಾಗುತ್ತಿದೆ.

ಕಳೆದ ಐದು ದಿನಗಳ ಪೂರೈಕೆ ವಿವರ

ಕಳೆದ ಏಪ್ರಿಲ್ 2 ರಿಂದ ಏಪ್ರಿಲ್ 6 ರವರೆಗಿನ ಅಂಕಿಅಂಶಗಳನ್ನು ಗಮನಿಸಿದರೆ, ಪೂರೈಕೆಯಲ್ಲಿ ಸ್ಥಿರತೆ ಇರುವುದು ಕಂಡುಬರುತ್ತದೆ. ಏಪ್ರಿಲ್ 2 ರಂದು 87.78 ಮೆಟ್ರಿಕ್ ಟನ್, ಏಪ್ರಿಲ್ 3 ರಂದು 86.05 ಮೆಟ್ರಿಕ್ ಟನ್, ಏಪ್ರಿಲ್ 4 ರಂದು 84.80 ಮೆಟ್ರಿಕ್ ಟನ್, ಏಪ್ರಿಲ್ 5 ರಂದು ಗರಿಷ್ಠ 94.11 ಮೆಟ್ರಿಕ್ ಟನ್ ಹಾಗೂ ಏಪ್ರಿಲ್ 6 ರಂದು 83.58 ಮೆಟ್ರಿಕ್ ಟನ್ ಅನಿಲವನ್ನು ಈ ಮೂರು ಪ್ರಮುಖ ಸಂಸ್ಥೆಗಳು ಯಶಸ್ವಿಯಾಗಿ ಪೂರೈಕೆ ಮಾಡಿವೆ.

​ಆದ್ದರಿಂದ, ರಾಜ್ಯದ ಆಟೋ ಮಾಲೀಕರು ಮತ್ತು ಚಾಲಕರು ಇಂತಹ ಯಾವುದೇ ಸುಳ್ಳು ವದಂತಿಗಳನ್ನು ನಂಬಬಾರದು ಮತ್ತು ಆತಂಕಕ್ಕೊಳಗಾಗಿ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲಬಾರದು ಎಂದು ಸರ್ಕಾರ ಮನವಿ ಮಾಡಿದೆ. ಅನಿಲ ಪೂರೈಕೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!