ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಮೃತನನ್ನು ಮಾಗಡಿ ಸಮೀಪದ ದಾಸರಹಳ್ಳಿ ನಿವಾಸಿ ಶಿವಕುಮಾರ್ (34 ವರ್ಷ) ಎಂದು ಗುರುತಿಸಲಾಗಿದೆ.
ಜನರೇಟ್ ಬಾಡಿಗೆಗೆಂದು ಗೆಳೆಯರೊಂದಿಗೆ ಲಿಂಗಾಪುರಕ್ಕೆ ತಂದಿದ್ದ ವೇಳೆ, ಬೇಸಿಗೆ ಧಗೆ ಹಿನ್ನೆಲೆಯಲ್ಲಿ ಶಿವಕುಮಾರ್ ಲಿಂಗಾಪುರ ಹೊರವಲಯದಲ್ಲಿ ಖಾಸಗಿ ಜಮೀನಿನಲ್ಲಿ ನಿರ್ಮಿಸಿದ್ದ ಕೃಷಿ ಹೊಂಡಕ್ಕೆ ಈಜಾಡಲೆಂದು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
(ಸಾಂದರ್ಭಿಕ ಚಿತ್ರ ಬಳಸಲಾಗಿದೆ)