ದೊಡ್ಡಬಳ್ಳಾಪುರ: ರೈತರಿಗೆ ಡ್ರೋನ್ ಆತಂಕ.. ವಾಹನ ಸವಾರರಿಗೆ ಲಾರಿಗಳ ಭಯ.‌!

Farmers are worried about drones.. Motorists are afraid of trucks.!

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈತರು ಡ್ರೋನ್ (Drones) ಹಾರಾಟದಿಂದ ಆತಂಕಕ್ಕೆ ಒಳಗಾಗಿದ್ದರೆ, ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಂತಿರುವ ಲಾರಿಗಳಿಂದ ವಾಹನ ಸವಾರರು ಪರದಾಡುವಂತಾಗಿದೆ.

ಹೌದು ದೊಡ್ಡಬೆಳವಂಗಲ ಸುತ್ತಮುತ್ತ ರಾತ್ರೋರಾತ್ರಿ ಡೋನ್ ಗಳ ಹಾರಾಟ ಕಂಡು ರೈತರು ಆತಂಕಕ್ಕೆ ಒಳಗಾಗಿದ್ದಾರೆ‌.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು, ಇದನ್ನ ವಿರೋಧಿಸಿ 5 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಬೆನ್ನಲ್ಲೇ ರಾತ್ರೋರಾತ್ರಿ 8ರಿಂದ 10 ಡ್ರೋನ್‌ಗಳ ಹಾರಾಟ ಕಂಡುಬಂದಿದ್ದು, ಡ್ರೋನ್ ಬಳಸಿ ಸರ್ವೇ ಕಾರ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರದ್ದಾಗಿದ್ದು, ಯಾರು ಎಲ್ಲಿಂದ ಡೋನ್ ಹಾರಿಸುತ್ತಿದ್ದಾರೆ ಎಂಬುದು ನಿಗೂಢವಾಗಿದೆ.

ರಾತ್ರಿ ವೇಳೆ ಡ್ರೋನ್‌ಗಳ ಹಾರಾಟ ಕಂಡು ರೈತರು ಆತಂಕಕ್ಕೊಳಗಾಗಿದ್ದಾರೆ.

ಇನ್ನೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಕೆಐಎಡಿಬಿ ಭೂಸ್ವಾದಿನ ವಿರೋಧಿಸಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯಿಂದ ಇಂದು ಸಂಜೆ 5:00 ಗಂಟೆಗೆ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಹೋರಾಟವನ್ನು ಪ್ರಾರಂಭಿಸಲು ಸಮಯವನ್ನು ನಿಗದಿಪಡಿಸಲಾಗಿದೆ.

ಈ ಹೋರಾಟದಲ್ಲಿ ಹಿರಿಯ ನ್ಯಾಯವಾದಿಗಳಾದ ಸಿ.ಎಚ್ ಹನುಮಂತರಾಯ ಅವರು ಸೇರಿದಂತೆ ಮುಖಂಡರುಗಳು ಭಾಗವಹಿಸಲಿದ್ದಾರೆಂದು ದೊಡ್ಡಬಳ್ಳಾಪುರ ತಾಲೂಕುಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಸಿ. ಶಶಿಧರ್ ತಿಳಿಸಿದ್ದಾರೆ.

ಲಾರಿಗಳ ಭಯ

ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಡ್ರೋನ್ ಆತಂಕ ಒಂದೆಡೆಯಾದರೆ, ಇದೇ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಮಂಗಲ ಗೇಟ್ ಬಳಿ ಲಾರಿಗಳು ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಲ್ಲುತ್ತಿರುವುದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ‌.

ಕನ್ನಮಂಗಲ ಗೇಟ್ ಬಳಿಯ ಗೋದಿ ಫ್ಯಾಕ್ಟರಿಗೆಂದು ಬಂದಿವೆ ಎನ್ನಲಾಗುತ್ತಿರುವ ಸುಮಾರು 50ಕ್ಕೂ ಹೆಚ್ಚು ಲಾರಿಗಳು, ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಲ್ಲುತ್ತಿರುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂಬ ಆರೋಪ ಸ್ಥಳೀಯರದ್ದಾಗಿದೆ.

ರೈತರಿಗೆ ಟ್ರೋನ್ ಆತಂಕ, ವಾಹನ ಸವಾರರಿಗೆ ಲಾರಿಗಳ ಭಯವನ್ನು ನೀಗಿಸುವ ನಿಟ್ಟಿನಲ್ಲಿ ದೊಡ್ಡಬೆಳವಂಗಲ ಠಾಣೆ ಪೊಲೀಸರು ತ್ವರಿತ ಕ್ರಮಕೈಗೊಳ್ಳ ಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ‌.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]