ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

Doddaballapur railway station underpass unscientific: MP Dr. K. Sudhakara

ಬೆಂ.ಗ್ರಾ.ಜಿಲ್ಲೆ: ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ದಿಶಾ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರವೂ ಆಯುಷ್ಮಾನ ಭಾರತ, ಕಿಸಾನ್ ಸಮ್ಮಾನ್, ವಿಶ್ವಕರ್ಮ, ಪಿಎಂಇಜಿಪಿ ಯೋಜನೆಯಂತಹ ಸಾಕಷ್ಟು ಜನರ ಪರ ಯೋಜನೆಗಳನ್ನು ತಂದಿದ್ದು, ಅದರ ಸೌಲಭ್ಯಗಳು ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು.

ರೈತರಲ್ಲಿ ಫಸಲ್ ಭೀಮಾ ಯೋಜನೆ ಅರಿವು ಮೂಡಿಸಿ

ಜಿಲ್ಲೆಯಲ್ಲಿ 1.92 ಲಕ್ಷ ರೈತರು ಇದ್ದು, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಳೆದ ವರ್ಷ ಕೇವಲ 6053 ರೈತರು ನೋಂದಾಯಿಸಿಕೊಂಡಿದ್ದಾರೆ. ನೋಂದಾಯಿತ ರೈತರ ಸಂಖ್ಯೆಯಲ್ಲಿ ತೀರಾ ಕಡಿಮೆಯಾಗಿದ್ದು, ಜಿಲ್ಲೆಯ ರೈತರಲ್ಲಿ ಯೋಜನೆ ಕುರಿತಾಗಿ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದರು.

ವಿಮೆ ಕಟ್ಟಿರುವವರಿಗೆ ಸಾಕಷ್ಟು ಈಗಾಗಲೇ ಅನುಕೂಲವಾಗಿದೆ. ರೈತರಿಗೆ ನಂಬಿಕೆ ಇಲ್ಲದ ಕಾರಣ ವಿಮೆ ಕಟ್ಟಿಲ್ಲ. ಇದರ ಬಗ್ಗೆ ಅರಿವು ಮೂಡಿಸಬೇಕು. ವಿಶೇಷ ಅಭಿಯಾನದ ಮೂಲಕ ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿ ನೀಡಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಜಮೀನುಗಳನ್ನು ಕೆಐಎಡಿಬಿ ವಶಪಡಿಸಿಕೊಂಡಿದ್ದಾರೆ. ಇದರಿಂದ ಫಲಾನುಭವಿಗಳಿಗೆ ವಿಮೆ ಸೌಲಭ್ಯ ತಲುಪಿದಾಗ ಅದರ ಬಗ್ಗೆ ಕಾರ್ಯಕ್ರಮ ಮಾಡಿ ರೈತರಿಗೆ ಅರಿವು ಮೂಡಿಸಬೇಕು ಎಂದರು.

ರೈಲ್ವೆ ಇಲಾಖೆ ಕೆಲಸಗಳು ಶೀಘ್ರವಾಗಲಿ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕವಾಗಿದ್ದು, ಇಲ್ಲಿ ಹೆಚ್ಚಿನ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ಈ ಭಾಗಕ್ಕೆ ಪ್ರಮುಖವಾಗಿ ಮೇಲ್ಸೇತುವೆ ಅಗತ್ಯವಾಗಿದೆ. ಈಗಾಗಲೇ ಶಾಸಕರು, ಅಧಿಕಾರಿಗಳ ಜತೆಗೆ ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಇಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ನೆಲಮಂಗಲದಲ್ಲಿ ರೈಲ್ವೆಸ್ಟೇಷನ್ನಲ್ಲಿ ಪ್ಲಾಂಟ್ ಫಾರ್ಮ್-2 ರ ನಿರ್ಮಾಣ ಮಾಡಲು ಅಗತ್ಯ ಕ್ರಮವಹಿಸಬೇಕು. ವೇಗವಾಗಿ ರೈಲ್ವೆ ಇಲಾಖೆಯೂ ಕೆಲಸಗಳನ್ನು ಮಾಡಬೇಕು. ರೈಲ್ವೆ ಇಲಾಖೆಯ ಸಾಕಷ್ಟು ಕೆಲಸಗಳು ನಿಧಾನವಾಗಿ ಸಾಗುತ್ತಿದ್ದು, ಅದಕ್ಕೆ ವೇಗ ನೀಡಬೇಕು ಎಂದರು.

ಗರ್ಭಕಂಠ ಕ್ಯಾನ್ಸರ್ ಲಸಿಕಾ ಜಾಗೃತಿ ಹೆಚ್ಚಿಸಿ

ಕೇಂದ್ರ ಸರ್ಕಾರದಿಂದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ದೇಶದ ಎಲ್ಲಾ ಹೆಣ್ಣುಮಕ್ಕಳಿಗೆ ಉಚಿತವಾಗಿ ಎಚ್.ಪಿ.ವಿ ಲಸಿಕೆ ನೀಡುತ್ತಿದ್ದು, ಜಿಲ್ಲೆಯ ನಾಲ್ಕು ತಾಲೂಕು ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು.

ಜಿಲ್ಲೆಯಲ್ಲಿ 12,000 ಲಸಿಕೆಗಳ ಗುರಿಯಿದ್ದು, ಎಲ್ಲಾ ತಾಲೂಕುಗಳಲ್ಲಿ ಶಾಸಕರು, ಸಂಸದರು, ಸಚಿವರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಮಾಡಿ, ಶಾಲಾ ಮಕ್ಕಳಿಗೂ ಈ ಲಸಿಕೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.

ಜಿಲ್ಲೆಯಲ್ಲಿ 22 ಬಾಲ್ಯ ವಿವಾಹ ತಡೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ 22 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. 4 ಪ್ರಕರಣಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದರು.

ಜಿಲ್ಲೆಯ ವಿವಿಧ ಕೈಗಾರಿಕೆಗಳಿಂದ ಸಿ.ಎಸ್.ಆರ್ ಅನುದಾನದಡಿ ಜಿಲ್ಲೆಗೆ ಬಂದ ಅನುದಾನದ ಕುರಿತು ಮಾಹಿತಿಯನ್ನು ಎರಡು ವಾರದಲ್ಲಿ ಒದಗಿಸುವಂತೆ ಕೈಗಾರಿಕಾ ಜಂಟಿ ನಿರ್ದೇಶಕರಿಗೆ ಸಂಸದರು ಸೂಚಿಸಿದರು.

ಜಿಲ್ಲೆಯಲ್ಲಿ ಜಲಜೀವನ ಮಿಷನ್ (ಜೆಜೆಎಂ) ಕಾಮಗಾರಿಗಳಲ್ಲಿ ಕಳಪೆ ಮಟ್ಟದ ವಸ್ತುಗಳನ್ನು ಬಳಕೆ ಆಗಬಾರದು, ಗುಣಮಟ್ಟ ಕಾಯ್ದುಕೊಂಡು ಗ್ರಾಮೀಣ ಜನರಿಗೆ ನೀರು ಕೊಡುವ ಕೆಲಸ ಆಗಬೇಕು ಎಂದ ಸಂಸದರು ಕೋಯಿರಾ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ತಕ್ಷಣವೇ ಬೋರ್ ವೇಲ್ ಕೊರೆಸಿ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸಕ್ಕೆ ಮುಂದಾಗಿ ಎಂದು ಅಧಿಕಾರಿಗಳಿಗೆ ಹೇಳಿದರು.

ಗ್ರಾಮಗಳಲ್ಲಿ ಕುಡಿಯುವ ನೀರಿನ ಮೂಲಗಳಿಗೆ ಎಚ್.ಎನ್ ವ್ಯಾಲಿ ಮತ್ತು ಕೆ.ಸಿ ವ್ಯಾಲಿ ನೀರು ಸೇರುವುದನ್ನು ಪರೀಕ್ಷೆಯನ್ನು ಆಗಾಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾಡಬೇಕು. ಜತೆಗೆ ಗ್ರಾಮೀಣಿಗರಿಗೆ ಶುದ್ಧ ಕುಡಿಯುವ ನೀರಿನ ಕಲ್ಪಿಸುವಂತ ಕೆಲಸ ಆಗಬೇಕು ಎಂದರು.

ಅಧಿಕಾರಿಗಳು ಕೇವಲ ಕಚೇರಿಗೆ ಕೆಲಸ ಕಾರ್ಯಗಳ ಜತೆಗೆ ಗ್ರಾಮ, ನಗರಗಳಿಗೂ ಭೇಟಿ ನೀಡಿ, ಅಲ್ಲಿನ ಜನರ ಕುಂದು ಕೊರತೆಗಳನ್ನು ಆಲಿಸಬೇಕು. ಸರಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಶಿಷ್ಟಾಚಾರವನ್ನು ಪಾಲಿಸುವ ಕೆಲಸವನ್ನು ಮಾಡಬೇಕು. ಸಮರ್ಪಕವಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ವಿಕಲಚೇತನರಿಗೆ ಸುಗಮ ಭಾರತ ಅಭಿಯಾನದಡಿ ಅವಶ್ಯಕ ಸೌಕರ್ಯಗಳನ್ನು ಕಲ್ಪಿಸಬೇಕು. ವಿಕಲಚೇತನ ಸ್ನೇಹಿ ಇಳಿಜಾರು ದಾರಿ, ಸುಲಭ ಶೌಚಾಲಯ, ಲಿಫ್ಟ್ ಗಳಲ್ಲಿ ಬ್ರೈಲ್ ಸಂಕೇತ ಮತ್ತು ಶಬ್ದ ಸಂಕೇತ ಸೇರಿ ವಿಕಲಚೇತನ ಸ್ನೇಹಿ ಪೂರಕ ವಾತಾವರಣ ಕಲ್ಪಿಸಲು ಕ್ರಮ ವಹಿಸಲಾಗುವುದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಅಪರ ಜಿಲ್ಲಾಕಾರಿ ಸೈಯಿದಾ ಆಯಿಷಾ ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಬಾಶೆಟ್ಟಿಹಳ್ಳಿ ಪಪಂ ಅಧ್ಯಕ್ಷ ಪ್ರೇಮ್ ಕುಮಾರ್, ದಿಶಾ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

2 ಪಿಯುಸಿ ರಿಸಲ್ಟ್: ಸುಮನ ಕಾಲೇಜಿಗೆ ಶೇ.100 ಫಲಿತಾಂಶ

2 PUC Result: 100% result for Sumana College
2 PUC Result: 100% result for Sumana College

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮುಖ್ಯ ರಸ್ತೆಯ ಸಮೀಪದಲ್ಲಿರುವ ಮಾರಸಂದ್ರದ ಸುಮನ ಪದವಿ ಪೂರ್ವ ಕಾಲೇಜು 2025–2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಈ ಸಾಲಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ 18 ಮಂದಿ ಅತ್ಯುತ್ತಮ ಶ್ರೇಣಿಯಲ್ಲಿ (Distinction) ಹಾಗೂ 21 ಮಂದಿ ಪ್ರಥಮ ಶ್ರೇಣಿಯಲ್ಲಿ (First Class) ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗವು 100% ಫಲಿತಾಂಶವನ್ನು ದಾಖಲಿಸಿ ಅತ್ಯುತ್ತಮ ಸಾಧನೆ ಮಾಡಿದೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲಿ
ಜನನಿ ವಿ – 96%, ಶ್ವೇತಾ ಕೆ ಎನ್ – 95%, ಶಶಾಂಕ್ ಸಿ – 93%, ಶ್ರೇಯಾ ಶಂಕರ್ – 93%, ಚಿರಂತನ ಆರ್ ವೈ – 92% ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಾಣಿಜ್ಯ ವಿಭಾಗವು 96% ಫಲಿತಾಂಶವನ್ನು ಸಾಧಿಸಿದೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ
ಸಿಂದು ಎಂ – 94.5%, ಮಿರಾಜುದ್ದೀನ್ ಅನ್ಸಾರಿ – 92%, ಶ್ರೀಷಾ ಎಸ್ ಯಾರಾ – 92.5%, ದೀಪಕ್ ಜಿ – 92.4%, ಧ್ರುವ ತೇಜಸ್ – 92% ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಉತ್ತಮ ಅಂಕಗಳನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಅವರು ಸೂಚನೆ ನೀಡಿದರು.

[ccc_my_favorite_select_button post_id="120824"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]