2nd PUC ಫಲಿತಾಂಶ: 6ನೇ ಸ್ಥಾನಕ್ಕೆ ಜಿಗಿದ ಬೆಂ.ಗ್ರಾ.ಜಿಲ್ಲೆ.. ದೊಡ್ಡಬಳ್ಳಾಪುರಕ್ಕೆ ತಪ್ಪಿದ ಪ್ರಥಮ ಸ್ಥಾನ..!

Registration for skills training

ಬೆಂ.ಗ್ರಾ.ಜಿಲ್ಲೆ; ನಿನ್ನೆ ಪ್ರಕಟವಾದ 2025-26ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ 6ನೇ ಸ್ಥಾನ ಪಡೆಯುವ ಮೂಲಕ ಶೇಕಡ 91 ರಷ್ಟು ಫಲಿತಾಂಶ ದಾಖಲಿಸಿದೆ.

ಈ ಮೂಲಕ ಕಳೆದ ವರ್ಷಕ್ಕಿಂತ ಎರಡು ಸ್ಥಾನ ಮೇಲಕ್ಕೇರಿದೆ.

ಹೌದು 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನವನ್ನು ಪಡೆದಿತ್ತು. ಆದರೆ ಈ ವರ್ಷ ಶೇಕಡ 91 ರಷ್ಟು ಫಲಿತಾಂಶ ಪಡೆಯುವ ಮೂಲಕ 6ನೇ ಸ್ಥಾನಕ್ಕೇರಿದೆ.

2025-26 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-01 ಕ್ಕೆ ಹೊಸ ವಿದ್ಯಾರ್ಥಿಗಳು 10,821, ಖಾಸಗಿ ವಿದ್ಯಾರ್ಥಿಗಳು 166, ಪುನರಾವರ್ತಿತ ವಿದ್ಯಾರ್ಥಿಗಳು 578 ಸೇರಿ ಪರೀಕ್ಷೆಗೆ 11,565 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದರು.

ಕಲಾ ವಿಭಾಗದಲ್ಲಿ 833 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5405, ವಿಜ್ಞಾನ ವಿಭಾಗದಲ್ಲಿ 4583, ಸರ್ಕಾರಿ ಕಾಲೇಜುಗಳಲ್ಲಿ 1,724 ವಿದ್ಯಾರ್ಥಿಗಳು, ಅನುದಾನಿತ ಕಾಲೇಜಿನಲ್ಲಿ 1,074, ಅನುದಾನರಹಿತ ಕಾಲೇಜಿನಲ್ಲಿ 8,023 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು.

ವಿಜ್ಞಾನ ವಿಭಾಗ

ನೆಲಮಂಗಲದ ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿ ಬಿಂದು ಎ, ವಿಜ್ಞಾನ ವಿಭಾಗದಲ್ಲಿ 600 ಕ್ಕೆ 597 ಅಂಕ ಪಡೆದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗ

ಹೊಸಕೋಟೆಯ ಖಾಸಗಿ ಪಿಯು ಕಾಲೇಜು ವಿದ್ಯಾರ್ಥಿ ಜೀವಿತ ಹೆಚ್. ಎಸ್ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 597 ಅಂಕ ಪಡೆದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸುಮನ ಕಾಲೇಜಿಗೆ ಶೇ.100 ಫಲಿತಾಂಶ

2 PUC Result: 100% result for Sumana College
2 PUC Result: 100% result for Sumana College

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮುಖ್ಯ ರಸ್ತೆಯ ಸಮೀಪದಲ್ಲಿರುವ ಮಾರಸಂದ್ರದ ಸುಮನ ಪದವಿ ಪೂರ್ವ ಕಾಲೇಜು 2025–2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಈ ಸಾಲಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ 18 ಮಂದಿ ಅತ್ಯುತ್ತಮ ಶ್ರೇಣಿಯಲ್ಲಿ (Distinction) ಹಾಗೂ 21 ಮಂದಿ ಪ್ರಥಮ ಶ್ರೇಣಿಯಲ್ಲಿ (First Class) ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗವು 100% ಫಲಿತಾಂಶವನ್ನು ದಾಖಲಿಸಿ ಅತ್ಯುತ್ತಮ ಸಾಧನೆ ಮಾಡಿದೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲಿ
ಜನನಿ ವಿ – 96%, ಶ್ವೇತಾ ಕೆ ಎನ್ – 95%, ಶಶಾಂಕ್ ಸಿ – 93%, ಶ್ರೇಯಾ ಶಂಕರ್ – 93%, ಚಿರಂತನ ಆರ್ ವೈ – 92% ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಾಣಿಜ್ಯ ವಿಭಾಗವು 96% ಫಲಿತಾಂಶವನ್ನು ಸಾಧಿಸಿದೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ
ಸಿಂದು ಎಂ – 94.5%, ಮಿರಾಜುದ್ದೀನ್ ಅನ್ಸಾರಿ – 92%, ಶ್ರೀಷಾ ಎಸ್ ಯಾರಾ – 92.5%, ದೀಪಕ್ ಜಿ – 92.4%, ಧ್ರುವ ತೇಜಸ್ – 92% ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ರಾಜಕೀಯ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

2028 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120947"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]