ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನಪ್ಪಿದ್ದಾರೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ (Cm Siddaramaiah) ಸ್ಪಂದಿಸಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು.
— Siddaramaiah (@siddaramaiah) April 10, 2026
ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಘಟನೆ…
ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ.
ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು.