ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

I have never seen such a bad government in my 60 years of political life: H.D. Deve Gowda

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ ಮಾಡಿದರು.

ಬೆಂಗಳೂರಿನ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿ ಮಾತಾಡಿದ ಮಾಜಿ ಪ್ರಧಾನಿಗಳು; ಕೇವಲ ರಾಜಕೀಯ ಸ್ವಾರ್ಥಕ್ಕಾಗಿ ಮಾತ್ರ ಅವರು ಸಾಮಾಜಿಕ ನ್ಯಾಯದ ಜಪ ಮಾಡುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದರು.

ಸಾಮಾಜಿಕ ನ್ಯಾಯದ ಪರ ನಾನು ಇದ್ದೇನೆಯೇ ಇಲ್ಲವೇ ಎಂಬುದನ್ನು ಸ್ವತಃ ಸಿದ್ದರಾಮಯ್ಯನವರೇ ತಮ್ಮ ಆತ್ಮಕ್ಕೆ ಪ್ರಶ್ನೆ ಮಾಡಿಕೊಳ್ಳಬೇಕು. ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಅವರು ಸಾಮಾಜಿಕ ನ್ಯಾಯವನ್ನು ವ್ಯವಸ್ಥಿತವಾಗಿ ಬಳಸಿಕೊಂಡಿದ್ದಾರೆ ಎಂದು ದೇವೇಗೌಡರು ಕಟುವಾಗಿ ಟೀಕಿಸಿದರು.

ಅಹಿಂದ ನಾಯಕರು ಕುಮಾರಸ್ವಾಮಿ ಅವರ ಸರ್ಕಾರವನ್ನು ತೆಗೆದರು. ಹಾಗೆಯೇ ನಮ್ಮ ಪಕ್ಷವನ್ನು ಮುಗಿಸುವ ವ್ಯವಸ್ಥಿತ ಹುನ್ನಾರವನ್ನೂ ನಡೆಸಿದರು. ಇಂತಹ ಶಕ್ತಿಗಳಿಗೆ ಪಾಠ ಕಲಿಸಲೇಬೇಕೆಂದು ನಿರ್ಧರಿಸಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಸ್ವತಃ ನಾನೇ ಅನುಮತಿ ಕೊಟ್ಟೆ. ಇವತ್ತು ಕೇಂದ್ರ ಮಂತ್ರಿಯಾಗಿ ಕುಮಾರಸ್ವಾಮಿ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯ ಸರ್ಕಾರ ಸಹಕಾರ ಕೊಡುತ್ತಿಲ್ಲ. ಕುದುರೆಮುಖ ಕಂಪನಿ ಮತ್ತು ಹೆಚ್ಎಂಟಿ ವಿಚಾರವಾಗಿ ಅನಗತ್ಯ ತೊಂದರೆ ಕೊಡುತ್ತಿದ್ದಾರೆ. ರಾಜ್ಯದ ಹಿತದ ಬಗ್ಗೆ ಇವರು ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಕುಮಾರಸ್ವಾಮಿ ಅವರು ಅಂಜದೆ ತಮ್ಮ ಕೆಲಸಗಳನ್ನು ಮುಂದುವರಿಸಿದ್ದಾರೆ ಅವರು ಹೇಳಿದರು.

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಬಲಿಷ್ಠವಾಗಿದೆ. ನಿತೀಶ್ ಕುಮಾರ್ ಅವರಿಗೆ ನರೇಂದ್ರ ಮೋದಿ ಅವರು ಶಕ್ತಿ ತುಂಬಿದ್ದಾರೆ. ನಂಬಿಕೆ, ವಿಶ್ವಾಸದ ಮೇಲೆ ಅವರು ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮ ಜೊತೆ ಕಾಂಗ್ರೆಸ್ ನಡೆದುಕೊಂಡ ರೀತಿಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ವಿಶ್ವಾಸ ದ್ರೋಹದಿಂದಲೇ ಜೆಡಿಎಸ್ ಪಕ್ಷ ಎನ್ಡಿಎ ಮೈತ್ರಿಕೂಟ ಸೇರುವಂತಾಯಿತು ಎಂದು ಮಾಜಿ ಪ್ರಧಾನಿಗಳು ಹೇಳಿದರು.

ದರಿದ್ರ ನಾರಾಯಣ ರ್ಯಾಲಿಗೆ ಸಿದ್ದರಾಮಯ್ಯ ಬರಲಿಲ್ಲ

ನಮ್ಮದು ಕುಟುಂಬ ಪಕ್ಷವಲ್ಲ. ಈ ಪಕ್ಷದಿಂದ ಯಾರು ಯಾರು ಎತ್ತರಕ್ಕೆ ಬೆಳೆದಿದ್ದಾರೆ ಎಂಬುದನ್ನು ನಾನು ಇಲ್ಲಿ ಬಿಡಿಸಿ ಹೇಳುವುದಿಲ್ಲ. ಆದರೆ ಈ ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಎಂಬುದಕ್ಕೆ ಶಕ್ತಿ ತುಂಬಿದವನು ನಾನು. ಇದರ ಬಗ್ಗೆ ಯಾವುದೇ ವೇದಿಕೆಯಲ್ಲಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಒಬ್ಬ ಮುಸ್ಲಿಂ ವ್ಯಕ್ತಿಯನ್ನು ಚುನಾವಣೆಯಲ್ಲಿ ಗೆಲ್ಲಿಸಲು ದರಿದ್ರ ನಾರಾಯಣ ರ್ಯಾಲಿ ಮಾಡಿದೆವು ಆ ಸಮಾವೇಶಕ್ಕೆ ಇವತ್ತಿನ ಅಹಿಂದ ನಾಯಕ ಸಿದ್ದರಾಮಯ್ಯ ಬರಲೇ ಇಲ್ಲ. ವೇದಿಕೆಯ ಕಾರ್ಯಕ್ರಮ ಮುಗಿಯುವ ಕೊನೆ ಹಂತದಲ್ಲಿ ಅವರು ಬಂದರು ಇದು ಅವರಿಗಿರುವ ಸಾಮಾಜಿಕ ನ್ಯಾಯದ ಕುರಿತ ಬದ್ಧತೆ ಎಂದು ಮಾಜಿ ಪ್ರಧಾನಿಗಳು ಕಿರಿಕಾದರು.

ಇದು ಅತ್ಯಂತ ಕೆಟ್ಟ ಸರ್ಕಾರ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಕರ್ನಾಟಕದಲ್ಲಿ ಈಗ ಇರುವಷ್ಟು ಕೆಟ್ಟ ಸರ್ಕಾರವನ್ನು ನಾನೆಂದೂ ನೋಡಿಲ್ಲ. ಆದರೂ ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಮೆರೆಯುತ್ತಿದ್ದಾರೆ. ಈ ಸರ್ಕಾರದಿಂದ ಜನ ರೋಸಿ ಹೋಗಿದ್ದಾರೆ. ಇವರಿಗೆ ತಕ್ಕ ಪಾಠ ಕಲಿಸಲು ಜನರು ಕಾಯುತ್ತಿದ್ದಾರೆ ಎಂದು ದೇವೇಗೌಡರು ಗುಡುಗಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಅನಿವಾರ್ಯವಾಗಿ ಜಿಬಿಎ ಚುನಾವಣೆ ಮಾಡುತ್ತಿದೆ. ಚುನಾವಣೆಗೆ ನಾವು ತಯಾರಿದ್ದೇವೆ. ಐದು ವಿಭಾಗಗಳನ್ನು ರಚಿಸಿ ಐವರು ಉಸ್ತುವಾರಿಗಳನ್ನು ಜೆಡಿಎಸ್ ಪಕ್ಷದಿಂದ ನೇಮಿಸಲಾಗಿದೆ. ಚುನಾವಣೆಗೆ ಎದುರು ಜಾಯಮಾನ ನಮ್ಮ ಪಕ್ಷದ್ದಲ್ಲ ಎಂದು ಅವರು ರಾಜ್ಯ ಸರಕಾರಕ್ಕೆ ಚಾಟಿ ಬೀಸಿದರು.

ಕಾಂಗ್ರೆಸ್ ಏನು ಮಾಡಿದೆ ಎನ್ನುವುದನ್ನು ನಾನು ಹೇಳುವುದಿಲ್ಲ. ಆದರೆ ನಾವು ಏನು ಮಾಡಿದ್ದೇವೆ ಎನ್ನುವುದನ್ನು ನಾನು ಒತ್ತಿ ಹೇಳುತ್ತೇನೆ. ಮಹಿಳಾ ಮೀಸಲಾತಿ ಕೊಟ್ಟಿದ್ದು ನಾವು. ಹಿಂದೆ ಲೀಲಾದೇವಿ ಆರ್ ಪ್ರಸಾದ್ ಅವರು ಮಹಿಳಾ ಮೀಸಲು ವಿಜಯವನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಅಳವಡಿಸಲು ಮನವಿ ಮಾಡಿದ್ದರು. ಬೇರೆ ಯಾವ ಪಕ್ಷವೂ ಮಾಡಲಿಲ್ಲ. ನಾವು ಅದನ್ನು ಮಾಡಿದ್ದೇವೆ. ಸ್ವತಹ ನಾನೇ ಪ್ರಧಾನಿಯಾಗಿ ಸಂಸತ್ತಿನಲ್ಲಿ ಚರ್ಚೆ ಮಾಡಿದ್ದೇನೆ. ಆಗಲೇ ಮಹಿಳಾ ಮೀಸಲು ವಿವೇಕವನ್ನು ಸಂಸತ್ತಿನಲ್ಲಿ ಮಂಡಿಸಲಾಯಿತು. ಅದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿ ಲೋಕಸಭೆಯಲ್ಲಿ ಬಿದ್ದುಹೋಯಿತು. ಅದಾದ 30 ವರ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಧಿಸಿ ತೋರಿಸಿದ್ದಾರೆ ಎಂದು ದೇವೇಗೌಡರು ಹೇಳಿದರು.

ಮತ್ತೆ ಮಹಿಳಾ ಮೀಸಲಾತಿಯ ಬಗ್ಗೆ ಚರ್ಚಿಸಲು ಮೋದಿಯವರು ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಕರೆದಿದ್ದಾರೆ. ನಾನು ಸಂತೋಷದಿಂದ ಕಲಾಪದಲ್ಲಿ ಭಾಗವಹಿಸುತ್ತೇನೆ. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯದ ಚಿತ್ರಣ ಬದಲಾಗುತ್ತದೆ. ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರಗಳು ಹೆಚ್ಚಾಗುತ್ತವೆ ಹಾಗೂ ನಮ್ಮ ರಾಜ್ಯದಲ್ಲಿ 42 ಲೋಕಸಭಾ ಕ್ಷೇತ್ರಗಳು ಸೃಷ್ಟಿಯಾಗುತ್ತವೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ನನಗೀಗ 93 ವರ್ಷ. ಪಕ್ಷ ಕಟ್ಟುವ ಶಕ್ತಿ ಹುಮ್ಮಸ್ಸು ನನಗಿದೆ. ಮುಖಂಡರು ಮತ್ತು ಕಾರ್ಯಕರ್ತರು ಎಲ್ಲಿಗೆ ಕರೆದರೂ ನಾನು ಬರಲು ಸಿದ್ದನಿದ್ದೇನೆ. ನಾವೆಲ್ಲರೂ ಸೇರಿ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡೋಣ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಕುಮಾರಸ್ವಾಮಿಯವರಿಗೆ ಹೊಲ ಬರುತ್ತದೆ ಎಂದು ದೇವೇಗೌಡರು ಒತ್ತಿ ಹೇಳಿದರು.

ರಾಜಕೀಯ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ

[ccc_my_favorite_select_button post_id="120877"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]