ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

Man drowned in Gundamagere lake.

ದೊಡ್ಡಬಳ್ಳಾಪುರ: ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

ಮೃತ ದುರ್ದೈವಿಯನ್ನು ಬೆಂಗಳೂರಿನ ಕುರುಬರಹಳ್ಳಿ ನಿವಾಸಿ ಶ್ರೀನಿವಾಸ ಚಾರ್ (50 ವರ್ಷ) ಎಂದು ಗುರುತಿಸಲಾಗಿದೆ.

ಮೃತನು ಗುಂಡಮಗೆರೆ – ದೊಡ್ಡಬಳ್ಳಾಪುರ ನಡುವಿನ ರಸ್ತೆಯಲ್ಲಿನ ಜಮೀನು ನೋಡಲೆಂದು ಬಾಮೈದನೊಂದಿಗೆ ಬಂದಿದ್ದು, ಈ ವೇಳೆ ಗುಂಡಮಗೆರೆ ಕೆರೆ ವೀಕ್ಷಿಸಲು ತೆರಳಿದ್ದ ವೇಳೆ, ಬೆಸಿಗೆಯ ಧಗೆಯಿಂದ ಪಾರಾಗಲು ಬಾಮೈದಾ ಬೇಡವೆಂದರು ಈಜಾಡಲು ಕೆರೆಗೆ ಇಳಿದಿದ್ದು, ಈ ವೇಳೆ ನೀರಲ್ಲಿ ಮುಳುಗಿ ಸಾವನಪ್ಪಿದ್ದಾರೆ.

ಈ ವೇಳೆ ಬಾಮೈದಾ ಸಮೀಪದಲ್ಲಿಯೇ ಈಜಾಡುತ್ತಿದ್ದ ಯುವಕರ ನೆರವಿನೊಂದಿಗೆ ಶ್ರೀನಿವಾಸ್ ಚಾರ್ ಅವರ ರಕ್ಷಿಸಲು ನೀರಿಗೆ ಹಾರಿ, ನೀರಿಂದ ಹೊರತಂದಿದ್ದಾರೆ. ಆದರೆ ಅಷ್ಟರಲ್ಲಿ ಶ್ರೀನಿವಾಸ ಚಾರ್ ಅವರ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಹೊಸಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ

Renowned playback singer Asha Bhosle is no more.
Renowned playback singer Asha Bhosle is no more.

ನವದೆಹಲಿ: ಪ್ರಸಿದ್ಧ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆ (Asha Bhosle) ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಭೋಂಸ್ಲೆ ಅವರನ್ನು ಶನಿವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

“ನನ್ನ ತಾಯಿ ಇಂದು ನಿಧನರಾದರು. ಸಾರ್ವಜನಿಕರಿಗೆ ನಾಳೆ ಬೆಳಿಗ್ಗೆ 11 ಗಂಟೆಗೆ ಅವರು ವಾಸಿಸುತ್ತಿದ್ದ ಲೋವರ್ ಪರೇಲ್‌ನ ಕಾಸಾ ಗ್ರಾಂಡೆಯಲ್ಲಿ ಅಂತಿಮ ನಮನ ಸಲ್ಲಿಸಬಹುದು. ಅವರ ಅಂತ್ಯಕ್ರಿಯೆಯನ್ನು ನಾಳೆ ಸಂಜೆ 4 ಗಂಟೆಗೆ ಶಿವಾಜಿ ಪಾರ್ಕ್‌ನಲ್ಲಿ ನಡೆಸಲಾಗುವುದು” ಎಂದು ಭೋಸ್ಲೆ ಅಗಲಿಕೆಯನ್ನು ಅವರ ಪುತ್ರ ಆನಂದ್ ಭೋಸ್ಲೆ ಸುದ್ದಿಯನ್ನು ದೃಢಪಡಿಸಿದ್ದಾರೆ.

ಭೋಸ್ಲೆ ಅವರು ಸೆಪ್ಟೆಂಬರ್ 8, 1933 ರಂದು ಮಹಾರಾಷ್ಟ್ರದ ಸಾಂಗ್ಲಿಯ ಗೋರ್‌ನಲ್ಲಿ ಪಂಡಿತ್ ದೀನನಾಥ್ ಮಂಗೇಶ್ಕರ್ ಮತ್ತು ಅವರ ಪತ್ನಿ ಶೇವಂತಿಗೆ ಜನಿಸಿದರು. ಪಂಡಿತ್ ದೀನನಾಥ್ ಒಬ್ಬ ಶಾಸ್ತ್ರೀಯ ಗಾಯಕ ಮತ್ತು ನಟರಾಗಿದ್ದರು.

ತಂದೆಯ ಅಗಲಿಕೆ ತರುವಾಯ, ಕುಟುಂಬವು ಕೊಲ್ಹಾಪುರಕ್ಕೆ ಮತ್ತು ನಂತರ ಮುಂಬೈಗೆ ಸ್ಥಳಾಂತರಗೊಂಡಿತು, ಅಲ್ಲಿ ಭೋಂಸ್ಲೆ ಮತ್ತು ಅವರ ಅಕ್ಕ ಲತಾ ಮಂಗೇಶ್ಕರ್ ಅವರು ಚಲನಚಿತ್ರಗಳಲ್ಲಿ ಗಾಯಕರು ಮತ್ತು ನಟರಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು. 1943 ರ ಹೊತ್ತಿಗೆ, ಅವರು ಮಜಾ ಬಾಲ್ ಎಂಬ ಮರಾಠಿ ಚಿತ್ರಕ್ಕಾಗಿ “ಚಲಾ ಚಲಾ ನವ್ ಬಾಲಾ” ಎಂಬ ಜನಪ್ರಿಯ ಹಾಡನ್ನು ಧ್ವನಿಮುದ್ರಣ ಮಾಡುತ್ತಿದ್ದರು.

ಗಾಯಕಿಯಾಗಿ ಭೋಂಸ್ಲೆ ಅವರು ಹಿಂದಿ ಚಲನಚಿತ್ರಗಳಲ್ಲಿ ಗಾಯಕಿಯಾಗಿ ಪಾದಾರ್ಪಣೆ ಮಾಡಿದರು, ಆದಾಗ್ಯೂ “ಅಂಧೋನ್ ಕಿ ದುನಿಯಾ” ಚಿತ್ರದಲ್ಲಿನ ಅವರ ಹಾಡುಗಳು ಅದೇ ವರ್ಷ ಚುನಾರಿಯಾಕ್ಕಿಂತ ಮೊದಲು ಬಿಡುಗಡೆಯಾದವು. ಅವರ ಮೊದಲ ಏಕವ್ಯಕ್ತಿ ಹಿಂದಿ ಚಲನಚಿತ್ರ ಗೀತೆ 1949 ರಲ್ಲಿ ರಾತ್ ಕಿ ರಾಣಿಗಾಗಿತ್ತು.

ರಾಜಕೀಯ

ದೊಡ್ಡಬಳ್ಳಾಪುರ: ಸರ್ಕಾರಿ ಶಿಕ್ಷಕರ ಸಂಘದ ಚುನಾವಣೆ‌‌.. 24 ಮಂದಿ ನಾಮಪತ್ರ

ದೊಡ್ಡಬಳ್ಳಾಪುರ: ಸರ್ಕಾರಿ ಶಿಕ್ಷಕರ ಸಂಘದ ಚುನಾವಣೆ‌‌.. 24 ಮಂದಿ ನಾಮಪತ್ರ

ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ (Teachers) ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಐದು ವರ್ಷಗಳ ಅವಧಿಗೆ 16 ಜನ ನಿರ್ದೇಶಕ ಆಯ್ಕೆಗೆ ನಾಮ ಪತ್ರಗಳ ಸಲ್ಲಿಕೆ ಕೊನೆಯ ದಿನವಾದ ಭಾನುವಾರ 24 ಜನ ನಾಮಪತ್ರಗಳನ್ನು

[ccc_my_favorite_select_button post_id="120909"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]