ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

BJP-led NDA government in the state by 2028: Opposition Leader R. Ashoka

ಆದಿಚುಂಚನಗಿರಿ: 2028 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಆದಿಚುಂಚನಗಿರಿ ಮಠದ ಗುರು ಭೈರವೈಕ್ಯ ಮಂದಿರ ಉದ್ಘಾಟನೆಯ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028 ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ನೇತೃತ್ವದ ಸರ್ಕಾರ ರಚನೆಯಾಗಲಿದೆ. ಜೆಡಿಎಸ್‌ ಕೂಡ ಜೊತೆಗೆ ಇರಲಿದೆ.

ಈಗಾಗಲೇ ಸಂಸತ್ತಿನಲ್ಲೂ ಬಿಜೆಪಿ ಜೊತೆಗೆ ಜೆಡಿಎಸ್‌ ಇದೆ. ಯಾರು ಮುಖ್ಯಮಂತ್ರಿಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್‌ ಶಾ ಮೊದಲಾದ ನಾಯಕರು ತೀರ್ಮಾನಿಸಲಿದ್ದಾರೆ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಅನೇಕರಿದ್ದಾರೆ. ಪಕ್ಷದ ಆಶೀರ್ವಾದವಿದ್ದರೆ ನಾನು ಕೂಡ ಸಿಎಂ ಆಗಬಹುದು. ಈಗ ಅವೆಲ್ಲಕ್ಕಿಂತಲೂ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯುವುದು ಮುಖ್ಯವಾಗುತ್ತದೆ. ಇದಕ್ಕಾಗಿ ನಾವು ಹೋರಾಟಗಳನ್ನು ಮುಂದುವರಿಸುತ್ತೇವೆ ಎಂದರು.

ಮುಖ್ಯಮಂತ್ರಿ ಬದಲಾವಣೆ ನವೆಂಬರ್‌ನಲ್ಲಿ ಆಗಬೇಕಿತ್ತು. ಈಗ ಆ ದಿನಾಂಕ ಮುಗಿದುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರು ಮಲ್ಲಿಕಾರ್ಜುನ ಖರ್ಗೆಯವರ ಮನೆಗೆ ಹೋಗಿ ಗಲಾಟೆ ಮಾಡಿದ್ದಾರೆ. ಈ ಜಗಳದಲ್ಲೇ ಸರ್ಕಾರ ಸತ್ತುಹೋಗಿದೆ. ಪಕ್ಷದ ಅಧ್ಯಕ್ಷರಿಗೆ ಗೌರವ ಇದ್ದಿದ್ದರೆ ಶಾಸಕರು ದೆಹಲಿಗೆ ಹೋಗುತ್ತಿರಲಿಲ್ಲ. ಡಿ.ಕೆ.ಶಿವಕುಮಾರ್‌ ಧ್ವನಿಗೆ ಮೂರು ಪೈಸೆಯ ಬೆಲೆಯನ್ನು ಶಾಸಕರು ನೀಡುತ್ತಿಲ್ಲ. ಅವರ ವರ್ಚಸ್ಸು ಕಡಿಮೆಯಾಗುತ್ತಿದೆ ಎಂದು ಇದರಿಂದ ತಿಳಿದುಬರುತ್ತದೆ. ಕಾಂಗ್ರೆಸ್‌ನಲ್ಲಿ ಸಿಎಂ ಆಸೆ ಇಟ್ಟುಕೊಂಡವರು ಜಗಳವಾಡುತ್ತಿದ್ದಾರೆ. ಈ ನಡುವೆ ರಾಜ್ಯದ ಅಭಿವೃದ್ಧಿ ನಡೆಯುತ್ತಿಲ್ಲ. ಹಿಂದೆ ಜನತಾದಳವನ್ನು ʼಜಗಳಗಳ ಪಾರ್ಟಿʼ ಎಂದು ಕರೆಯುತ್ತಿದ್ದರು. ಅದೇ ರೀತಿ ಈಗ ಕಾಂಗ್ರೆಸ್‌ ʼಜಗಳಗಳ ಪಾರ್ಟಿʼ ಆಗಿದೆ ಎಂದು ವ್ಯಂಗ್ಯವಾಡಿದರು.

ಮಂದಿರ ಉದ್ಘಾಟನೆ

ಆದಿಚುಂಚನಗಿರಿ ಸಂಸ್ಥಾನದ ಗುರು ಭೈರವೈಕ್ಯ ಮಂದಿರದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಇಲ್ಲಿ ಉತ್ತಮ ತಯಾರಿ ನಡೆಯುತ್ತಿದ್ದು, ಸಾವಿರಾರು ಜನರು ಕೂರುವ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಗೆ ಮಠದ ಬಗ್ಗೆ ಅಪಾರ ಭಕ್ತಿ ಭಾವವಿದೆ. ಈ ಹಿಂದೆಯೂ ಅವರು ಮಠದ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಮಂದಿರವನ್ನು ಬಹಳ ಆಕರ್ಷಕ ವಿನ್ಯಾಸದಲ್ಲಿ ನಿರ್ಮಿಸಲಾಗಿದೆ. ನಾನು ಕೂಡ ಕಾರ್ಯಕ್ರಮದಲ್ಲಿ ಪಾಲೊಳ್ಳಲು ಅವಕಾಶ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿಯವರು ಮೊದಲಿಗೆ ಭೈರವೈಕ್ಯ ದೇವರ ಪೂಜೆಯಲ್ಲಿ ಪಾಲ್ಗೊಂಡು, ನಂತರ ಮಂದಿರ ಉದ್ಘಾಟನೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ರಾಜಕೀಯ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

2028 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120947"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]