ದೊಡ್ಡಬಳ್ಳಾಪುರ: ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಲಸಿನ ಮರಕ್ಕೆ ನೇಣು
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕರಾಯಪ್ಪನಹಳ್ಳಿ ಬಳಿನ ಹಲಸಿನ ಮರಕ್ಕೆ ನೇಣುಬಿಗಿದುಕೊಂಡು ಲಾರಿ ಮಾಲೀಕನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

ಮೃತನನ್ನು ಸಾಧುಮಠದ ನಿವಾಸಿ ಉಮೇಶ್ (45 ವರ್ಷ) ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿಯೇ ನೇಣು
ಮತ್ತೊಂದು ಪ್ರಕರಣದಲ್ಲಿ ದೊಡ್ಡಬೆಳವಂಗಲ ಮನೆಯೊಂದರಲ್ಲಿ ಸುಮಾರು 35 ವರ್ಷದ ವ್ಯಕ್ತಿ ನೇಣುಬಿಗಿದು ಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.
ಮೃತರನ್ನು ವಿನೋದ (35 ವರ್ಷ) ಎಂದು ಗುರುತಿಸಲಾಗಿದೆ.
ನೇಣುಬಿಗಿದು ಕೊಂಡಿರುವುದ ಗಮನಿಸಿರುವ ಕುಟುಂಬಸ್ಥರು, ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿನೋದ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.