ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

This is not the time for you to shout that Kumaranna should become the Chief Minister; H.D. Kumaraswamy

ಬೆಂಗಳೂರು: ಪ್ರತಿಯೊಬ್ಬರು ಬಾಬಾ ಸಾಹೇಬ್ ಅಂಬೇಡ್ಕರ್ (Ambedkar) ಅವರ ಆಶಯಗಳಲ್ಲಿ ನಂಬಿಕೆ ಇರಿಸಿ ಅವರ ಉದ್ದೇಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಸ್ಪಷ್ಟ ಕರೆ ನೀಡಿದರು.

ಪಕ್ಷದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ತಮಗೆ ಜೈಕಾರ ಹಾಕಿದ ಕಾರ್ಯಕರ್ತರಿಗೆ ನಯವಾಗಿ ತರಾಟೆಗೆ ತೆಗೆದುಕೊಂಡ ಸಚಿವರು, ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ. ಹಾಗೆ ಮಾಡುವುದು ಅಂಬೇಡ್ಕರ್ ಅವರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ನನ್ನ ವೈಭವಿಕರಣ ಬೇಡ ಎಂದು ಬುದ್ಧಿಮಾತು ಹೇಳಿದರು.

ಈಗಷ್ಟೇ ಕೋರ್ ಕಮಿಟಿ ಅಧ್ಯಕ್ಷರಾದ ಎಂ. ಕೃಷ್ಣಾರೆಡ್ಡಿ ಮತ್ತು ಮಾಜಿ ಮಂತ್ರಿಗಳಾದ ವೆಂಕಟರಾವ್ ನಾಡಗೌಡರು ಹಾಗೂ ಮಾಜಿ ಶಾಸಕ ಅನ್ನದಾನಿ ಅವರೆಲ್ಲರೂ ಕುಮಾರಣ್ಣನೇ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದಾರೆ. ಎಲ್ಲರ ಭಾಷಣವನ್ನು ನಾನು ಆಲಿಸಿದೆ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುವ ಈ ವೇದಿಕೆಯಲ್ಲಿ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚಿಸುವುದು ಸರಿಯಲ್ಲ. ನಾವು ಬಾಬಾ ಸಾಹೇಬರ ಆದರ್ಶ ಮತ್ತು ತತ್ವಗಳನ್ನು ಅಳವಡಿಸಿಕೊಂಡು ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕು ಎಂದು ಕೆಲಸ ಸಚಿವರು ಕರೆ ನೀಡಿದರು.

ದೇವರ ದಯೆಯಿಂದ ನಾನು ಎರಡು ಬಾರಿ ಈ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಪೂರ್ಣಪ್ರಮಾಣದ ಬಹುಮತ ಇಲ್ಲದೆ ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನ ದೃಷ್ಟಿಯಲ್ಲಿ ನೋಡಿದ್ದೇನೆ. ಹೀಗಾಗಿ ನನ್ನ ಮೇಲೆ ಎಲ್ಲರಿಗೂ ಪ್ರೀತಿ ವಿಶ್ವಾಸ ಇದೆ. ನೆನ್ನೆಯ ದಿನ ನಾನು ವಿಧಾನಸೌಧಕ್ಕೂ ಭೇಟಿ ಕೊಟ್ಟಿದ್ದೆ. ಆ ಸಂದರ್ಭದಲ್ಲಿಯೂ ಕೆಲ ಮಾಧ್ಯಮ ಸ್ನೇಹಿತರು ನೀವು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಶುಭ ಹಾರೈಸಿದರು. ಇದೆಲ್ಲವೂ ಅವರು ನನ್ನ ಮೇಲೆ ಇಟ್ಟಿರುವ ಪ್ರೀತಿ ಮತ್ತು ನಂಬಿಕೆಯನ್ನು ಸೂಚಿಸುತ್ತದೆ. ಇಂತಹ ವೇದಿಕೆಯಲ್ಲಿ ರಾಜಕೀಯ ಮಾತನಾಡುವುದು ಬೇಡ ಎಂದು ಅವರು ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚಿಸಿದರು.

ಪಕ್ಷವನ್ನು ನಾವು ಎಲ್ಲಾ ಸಮುದಾಯಗಳನ್ನು ಒಳಗೊಂಡಂತೆ ಕಟ್ಟಬೇಕು. ಗ್ರಾಮ ಹೋಬಳಿ ಮತ್ತು ಮತಗಟ್ಟೆಗಳ ಮಟ್ಟದಲ್ಲಿಯೂ ಬಲಿಷ್ಠವಾಗಿ ಕಾರ್ಯಕರ್ತರ ಪಡೆಯಲು ಸೃಷ್ಟಿ ಮಾಡಬೇಕು. ಶೋಷಿತರ ಮತ್ತು ಧನಿ ಇಲ್ಲದವರ ದನಿಯಾಗಿ ನಾವು ಕೆಲಸ ಮಾಡಬೇಕು. ಇದುವೇ ಬಾಬಾ ಸಾಹೇಬ್ ಅವರು ಹೇಳಿದ ಸಂದೇಶ. ಆದರೆ ಕೆಲವರು ಅವರು ಬರೆದ ಸಂವಿಧಾನದ ಪೀಠಿಕೆಯನ್ನು ಪ್ರಚಾರಕಷ್ಟೇ ಓದುತ್ತಾರೆ. ಅವರು ತಪಸ್ಸಿನಂತೆ ರಚಿಸಿದ ಸಂವಿಧಾನವನ್ನು ಕೇವಲ ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ. ಅನ್ನದಾನಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕರಾದ ಟಿ ಎ ಶರವಣ, ಟಿ ಜವರಾಯಿಗೌಡ, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ಬೆಂಗಳೂರು ಐದು ಪಾಲಿಕೆಗಳ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]