ದೊಡ್ಡಬಳ್ಳಾಪುರ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (Dr. B.R. Ambedkar) ಅವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕರ ಡಾ.ಬಾಬು ಜಗಜೀವನರಾಂ (Dr. Babu Jagjivan Ram) ಅವರ 119ನೇ ಜನ್ಮದಿನಾಚರಣೆ ಸಮಾರಂಭ ನಗರದ ಕೊಂಗಾಡಿಯಪ್ಪ ಬಸ್ ನಿಲ್ದಾಣ (ಹಳೇ ಬಸ್ ನಿಲ್ದಾಣ)ದಲ್ಲಿ ಏ.14ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ತಾಲೂಕು ಕಚೇರಿ ವೃತ್ತದ ಬಳಿಯಿಂದ ವೇದಿಕೆ ಬಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ಸಂಚರಿಸಲಿದೆ.

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
ಬೆಂ.ಗ್ರಾ.ಜಿಲ್ಲೆ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ರವರ 135 ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಏಪ್ರಿಲ್ 14 ರ ಮಂಗಳವಾರ ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ಜಿಲ್ಲೆಯ ಪ್ರಗತಿಪರ, ಕನ್ನಡಪರ, ದಲಿತಪರ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೋರಿದ್ದಾರೆ.