ದೊಡ್ಡಬಳ್ಳಾಪುರ: ಸಿಬಿಎಸ್‌ಇ (CBSE) 10ನೇ ತರಗತಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆ (MSV Public School) ಸತತ 15ನೇ ವರ್ಷವೂ ಶೇ.100ರಷ್ಟು ಫಲಿತಾಂಶ ಪಡೆದಿದೆ.

ಹೌದು ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ 136 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದು, 136 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಮೂಲಕ ಶಾಲೆ ಆರಂಭವಾದ 15 ವರ್ಷಗಳಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಹಿರಿಮೆಗೆ ಪಾತ್ರವಾಗಿದೆ. (ಸಂಪೂರ್ಣ ಮಾಹಿತಿ ನಿರೀಕ್ಷಿಸಲಾಗಿದೆ).
ಇನ್ನೂ ಇಂದು ಬಿಡುಗಡೆಯಾದ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ 94.99ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಬಾಲಕರಿಗಿಂತ ಬಾಲಕಿಯರು ಶೇ 1.3ರಷ್ಟು ಹೆಚ್ಚು ಸಾಧನೆ ಮಾಡಿದ್ದಾರೆ.
2.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇಕಡ 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಈ ಪೈಕಿ 55,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ 95ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಫಲಿತಾಂಶ ಏರಿಕೆ ಕಂಡಿದೆ.
