ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

Modi's strong leadership is rooted in everyone's hearts: H.D. Kumaraswamy

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಪ್ರತಿಪಾದಿಸಿದರು.

ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀಮಠದ 71ನೆ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವು ಜಾಗತಿಕ ನಾಯಕತ್ವ ಆಗಿದ್ದು. ಅವರ ನೇತೃತ್ವದಲ್ಲಿ ಭಾರತ ಪರಿವರ್ತನಾತ್ಮಕ ಅಭಿವೃದ್ಧಿ ಕಾಣುತ್ತಿದೆ. ಬದಲಿಗೆ ಲಕ್ಷಾಂತರ ಭಾರತೀಯರ ಹೃದಯದಲ್ಲಿ ಅವರ ನಾಯಕತ್ವದ ಶ್ರೇಷ್ಠತೆಯು ಆಳವಾಗಿ ಬೇರೂರಿದೆ ಎಂದು ಕುಮಾರಸ್ವಾಮಿ ಅವರು ಬಣ್ಣಿಸಿದರು.

ಪ್ರಧಾನಿಗಳ ದಣಿವರಿಯದ ಸಮರ್ಪಣೆ ಮತ್ತು ಆಡಳಿತದಲ್ಲಿ ಭಾರತೀಯರು ಶಕ್ತಿ, ಸಾಮರ್ಥ್ಯವನ್ನು ವೃದ್ಧಿಸಿಕೊಂಡು, ಎಲ್ಲಾ ಆಯಾಮಗಳಲ್ಲಿಯೂ ಭಾರತವು ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದ ಸಚಿವರು, ಶ್ರೀಮಠಕ್ಕೆ ಭೇಟಿ ನೀಡಿ ಹಿರಿಯ ಗುರುಗಳಿಗೆ ಪ್ರಧಾನಿಗಳು ಗೌರವ ಸಲ್ಲಿಸುತ್ತಿರುವುದು ನನಗೆ ಅತಿವ ಸಂತೋಷ ಉಂಟು ಮಾಡಿದೆ ಎಂದರು.

ಕರ್ನಾಟಕದ ಅಧ್ಯಾತ್ಮ ಮತ್ತು ತ್ರಿವಿಧ ದಾಸೋಹದ ಇತಿಹಾಸದಲ್ಲಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿ ಅವರು ಅಜರಾಮರ ಧ್ರುವತಾರೆ ಆಗಿದ್ದಾರೆ ಎಂದು ನಾನು ಭಕ್ತಿಪೂರ್ವಕವಾಗಿ ಹೇಳಬಯಸುತ್ತೇನೆ. ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಅಸಂಖ್ಯಾತ ಬಡಮಕ್ಕಳ ಪಾಲಿಗೆ ಜ್ಞಾನದ ಬೆಳಕಾಗಿ, ಅಸಂಖ್ಯಾತ ಬಡ ಕುಟುಂಬಗಳ ಪ್ರತ್ಯಕ್ಷ ದೈವವಾಗಿ ಮಹಾಸ್ವಾಮೀಜಿ ಅವರು ನಮ್ಮ ಹೃದಯಗಳಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಹಿರಿಯ ಶ್ರೀಗಳನ್ನು ಸಚಿವರು ಸ್ಮರಿಸಿದರು.

ಅಧ್ಯಾತ್ಮದ ಜೊತೆಗೆ ಶಿಕ್ಷಣ, ಆರೋಗ್ಯ, ಪರಿಸರ ಇತ್ಯಾದಿ ಕ್ಷೇತ್ರಗಳಲ್ಲಿ ತಮ್ಮ ಜೀವಿತ ಕಾಲದ ಉದ್ದಕ್ಕೂ ಅವಿರತವಾಗಿ ದುಡಿದ ಮಹಾಸ್ವಾಮಿಗಳು, ತಮ್ಮ ಸಾಧನೆ ಮತ್ತು ಸಂದೇಶಗಳ ಮೂಲಕ ನಮಗೆಲ್ಲರಿಗೂ ದಾರಿದೀಪವಾಗಿದ್ದಾರೆ. ಸಣ್ಣ ಮಠವಾಗಿದ್ದ ಶ್ರೀ ಆದಿಚುಂಚನಗಿರಿ ಕ್ಷೇತ್ರವನ್ನು ಜಾಗತಿಕ ಶ್ರದ್ಧಾಕೇಂದ್ರವನ್ನಾಗಿ ಬೆಳೆಸಿ ಮಹಾವೃಕ್ಷವನ್ನಾಗಿ ರೂಪಿಸಿದ 71ನೇ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡುವ ಈ ಪರಮಪುಣ್ಯ ಕಾರ್ಯಕ್ರಮಕ್ಕೆ ಆಗಮಿಸಿರುವ ಪ್ರಧಾನಮಂತ್ರಿಗಳು ಹಾಗೂ ಜಗತ್ತಿನ ಶ್ರೇಷ್ಠ ನಾಯಕರಾದ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು ಸಚಿವರು.

ಕರ್ನಾಟಕದಲ್ಲಿ ಶಿಕ್ಷಣ, ಪರಿಸರ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೌನ ಕ್ರಾಂತಿಯನ್ನು ಮಾಡಿದವರು ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು, ಜೋಳಿಗೆ ಹಿಡಿದು ಹಳ್ಳಿಹಳ್ಳಿಯನ್ನು ಸುತ್ತಿದ್ದ ರೈತಾಪಿ ಮಕ್ಕಳ ಜ್ಞಾನಾರ್ಜನೆಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ನಗರಗಳಿಗೆ ಮಾತ್ರ ಸೀಮಿತವಾಗಿದ್ದ ಗುಣಮಟ್ಟದ ಆರೋಗ್ಯ ಸೇವೆಯನ್ನು ಹಳ್ಳಿಗಳಿಗೂ, ಅದರಲ್ಲಿ ಬಡರೈತರ ಮನೆ ಬಾಗಿಲಿಗೆ ವಿಸ್ತರಿಸಿದ ಖ್ಯಾತಿ ಪರಮಪೂಜ್ಯರದು ಎಂದು ನಾನು ಗೌರವಾನ್ವಿತ ಪ್ರಧಾನಿಗಳ ಗಮನಕ್ಕೆ ತರ ಬಯಸುತ್ತೇನೆ ಎಂದು ಕುಮಾರಸ್ವಾಮಿ ಅವರು ಬಣ್ಣಿಸಿದರು.

ಪರಿಸರ ಕ್ಷೇತ್ರದಲ್ಲಿ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರದು ಅನನ್ಯ ಕೊಡುಗೆ. ಸುಮಾರು ಐದು ಕೋಟಿ ಸಸಿಗಳನ್ನು ಬೆಳೆಸಿದ ಮಹಾನ್ ತಪಸ್ವಿ ಅವರು. ಅವರು ನೆಟ್ಟ ಸಣ್ಣಸಣ್ಣ ಸಸಿಗಳು ಇಂದು ಮಹಾವೃಕ್ಷಗಳಾಗಿ ಬೆಳೆದಿವೆ. ಶ್ರೀ ಆದಿಚುಂಚನಗಿರಿ ಕ್ಷೇತ್ರ ಬಹುವಿಧದ ದಾಸೋಹಗಳಲ್ಲಿ ದೊಡ್ಡ ಹೆಸರು. ಕಷ್ಟ ಎಂದು ಬರುವ ದೀನರಿಗೆ ಕಲ್ಪವೃಕ್ಷವಾಗಿದೆ. ಜ್ಞಾನ ಎಂದು ಬರುವವರೆಗೆ ಕಾಮಧೇನು. ಸನಾತನ ಪರಂಪರೆ ಮತ್ತು ಆಧುನಿಕತೆಯ ಮಹಾಸಂಗಮವಾಗಿ, ಮೇರು ಮಹಾ ಪುಣ್ಯಕ್ಷೇತ್ರವಾಗಿ ಇಂದು ನಮಗೆಲ್ಲರಿಗೂ ದಾರಿದೀಪವಾಗಿದೆ ಎಂದು ಕುಮಾರಸ್ವಾಮಿ ನುಡಿದರು.

ರಾಜಕೀಯ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್

ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="121129"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!