ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

CSK complains that they have insulted Dosa, Idli, Sambar, Chutney, Chutney... using the song!

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ, ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್ ಬಿಸಿಸಿಐಗೆ ದೂರು ನೀಡಿದ್ದಾರೆ.

ಏಪ್ರಿಲ್ 5 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರನ್ನು ಹಾಗೂ ಅಭಿಮಾನಿಗಳನ್ನು ಅವಮಾನಿಸಿದ್ದಾರೆ ಎಂದು ಸಿಎಸ್​ಕೆ ಮ್ಯಾನೇಜ್ಮೆಂಟ್ ದೂರು ನೀಡಿದ್ದಾರೆ.​

ಅಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಉದ್ದೇಶಪೂರ್ವಕವಾಗಿ ಆ ಹಳೆಯ ಹಾಡನ್ನು ಪ್ಲೇ ಮಾಡಿ ಸಿಎಸ್‌ಕೆ ಆಟಗಾರರನ್ನು ಮತ್ತು ತಮಿಳುನಾಡಿನ ಸಂಸ್ಕೃತಿಯನ್ನು ಅವಹೇಳನ ಮಾಡಿದ್ದಾರೆ. ಹೋಮ್ ಟೀಮ್ ಬೆಂಬಲಿಸುವುದು ಸಹಜ, ಆದರೆ ಎದುರಾಳಿ ತಂಡದ ಆಟಗಾರರನ್ನು ಹೀಗಳೆಯುವುದು ಕ್ರೀಡಾ ಸ್ಫೂರ್ತಿಗೆ ವಿರುದ್ಧವಾಗಿದೆ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವೆ ನಡೆಯುವ ಪಂದ್ಯ ಕೇವಲ ಕ್ರಿಕೆಟ್ ಮೈದಾನದ ಹೋರಾಟಕ್ಕೆ ಮಾತ್ರವಲ್ಲದೆ, ಅಭಿಮಾನಿಗಳ ನಡುವಿನ ಜಿದ್ದಾಜಿದ್ದಿಗೂ ಹೆಸರುವಾಸಿ.

ಆದರೆ, ಈ ಬಾರಿ ಈ ಪೈಪೋಟಿ ಮೈದಾನದ ಹೊರಗೆ ‘ಸಾಂಸ್ಕೃತಿಕ ಅವಮಾನ’ದ ತಿರುವು ಪಡೆದುಕೊಂಡಿದೆ. ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವಿನ ಪಂದ್ಯದ ವೇಳೆ ನಡೆದ ‘ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ’ ಹಾಡಿನ ವಿವಾದ ಈಗ ಬಿಸಿಸಿಐ (BCCI) ಮೆಟ್ಟಿಲೇರಿದೆ.

ಈಗ ಇದರ ಮೇಲೂ ಪರಸ್ಪರ ಆರೋಪ ಪ್ರತ್ಯಾರೋಪ ವ್ಯಕ್ತವಾಗುತ್ತಿದ್ದು, ಕಳೆದ ಅವಧಿಯಲ್ಲಿ ಚೆನ್ನೈನಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವಿನ ಪಂದ್ಯದ ವೇಳೆ ಜಿತೇಶ್ ಔಟಾದ ಸಂದರ್ಭದಲ್ಲಿ ‘ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ’ ಹಾಡನ್ನು ಪ್ಲೇ ಮಾಡಿ ಜಿತೇಶ್ ಅವರ ಕಿಚಾಯಿಸಿತ್ತು, ಆಗ ಕಾಣದ ಸಂಸ್ಕೃತಿಯ ಅವಹೇಳನ ಈಗೇಗ್ ಬಂತು ಎಂಬುದಾಗಿ ಆರ್‌ಸಿಬಿ ಬೆಂಬಲಿಗರು ತಿರುಗೇಟು ನೀಡಿದ್ದಾರೆ.

CBSE ಫಲಿತಾಂಶ; MSV ಶಾಲೆ ಮಕ್ಕಳ ಮೇಲುಗೈ: ದೊಡ್ಡಬಳ್ಳಾಪುರ ತಾಲೂಕಿಗೆ ಟಾಪರ್..

CBSE results; MSV school students dominate
CBSE results; MSV school students dominate

ದೊಡ್ಡಬಳ್ಳಾಪುರ: ನಿನ್ನೆ (ಏ‌.15) ಪ್ರಕಟವಾದ
ಸಿಬಿಎಸ್‌ಇ (CBSE) 10ನೇ ತರಗತಿ ಫಲಿತಾಂಶದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಶಾಲೆಯಾದ ಎಂ‌ಎಸ್‌ವಿ ಪಬ್ಲಿಕ್ ಶಾಲೆ (MSV Public School) ಶೇ.100 ರಷ್ಟು ಸಾಧನೆ ಮಾಡಿದೆ.

2025-26ನೇ ಸಾಲಿನ ಸಿಬಿಎಸ್‌ಇ ಕೇಂದ್ರೀಯ ಪರೀಕ್ಷಾ ಮಂಡಳಿಯ ಹತ್ತನೇ ತರಗತಿ ಫಲಿತಾಂಶದಲ್ಲಿ, ದೊಡ್ಡಬಳ್ಳಾಪುರ ನಗರದ ಎಂಎಸ್‌ವಿ ಪಬ್ಲಿಕ್ ಶಾಲೆಯು ನಿರಂತರವಾಗಿ 15ನೇ ವರ್ಷವೂ ಶೇ.100 ಸಾಧನೆ ಮಾಡಿ ಮತ್ತೊಮ್ಮೆ ಗಮನ ಸೆಳೆದಿದೆ. 

ಈ ಬಾರಿ ಒಟ್ಟು 136 ವಿದ್ಯಾರ್ಥಿಗಳಲ್ಲಿ 86 ಮಕ್ಕಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 41 ಮಕ್ಕಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ಮಕ್ಕಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಮಕ್ಕಳ ಈ ಫಲಿತಾಂಶಕ್ಕೆ ಮತ್ತು ಅವರ ಸಾಧನೆಗೆ ಶಾಲೆಯ ಸಂಸ್ಥಾಪಕರಾದ ಸುಬ್ರಮಣ್ಯ.ಎ ರವರು ಪ್ರಶಂಸೆ ವ್ಯಕ್ತಪಡಿಸಿದರು. 

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, “ನಿರಂತರವಾಗಿ 15 ವರ್ಷಗಳ ಕಾಲ ಶೇ.100 ಫಲಿತಾಂಶವನ್ನು ಸಾಧಿಸುವುದು ನಮ್ಮ ಶಾಲೆಯ ಗುಣಮಟ್ಟದ ಶಿಕ್ಷಣ ಮತ್ತು ತಂಡದ ಕಾರ್ಯದ ಪ್ರತೀಕವಾಗಿದೆ.  ಮಕ್ಕಳ ಈ ಸಾಧನೆ ನಮ್ಮ ಶಾಲೆಗೆ ಕೀರ್ತಿ ತಂದಿದೆ, ಮಕ್ಕಳಿಗೆ ಹಾಗೂ ವಿದ್ಯೆ ಕಲಿಸಿದ ಶಿಕ್ಷಕ ವೃಂದಕ್ಕೆ ನನ್ನ ಮನಃಪೂರ್ವಕವಾದ ಅಭಿನಂದನೆಗಳು” ಎಂದು ಮುಕ್ತ ಕಂಠದಿಂದ ಹಾರೈಸಿದ್ದಾರೆ.

ಶಾಲಾ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿ ನಯನಾ ಸ್ವರೂಪ್ ಹಾಗೂ ಪ್ರಾಂಶುಪಾಲರಾದ ರೆಮ್ಯ.ಬಿ.ವಿ ಹಾಗೂ ಸಿಬ್ಬಂದಿ ವರ್ಗಕೂಡ ಮಕ್ಕಳ ಸಾಧನೆಯನ್ನು ಮುಕ್ತ ಕಂಠದಿಂದ ಅಭಿನಂದನೆಗಳನ್ನು ಸಲ್ಲಿಸಿದರು.

ಈ ವಿಶಿಷ್ಟ ಸಾಧನೆಗೆ ಶಿಕ್ಷಕರ ಸಮರ್ಪಣೆ, ಮಾರ್ಗದರ್ಶನ,  ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಾಲೆಯ ಶಿಸ್ತಿನ ವಾತಾವರಣ ಪ್ರಮುಖ ಕಾರಣಗಳಾಗಿವೆ.

ಈ ಸಾಧನೆಯೊಂದಿಗೆ, ಶಾಲೆಯು ಸಿಬಿಎಸ್‌ಇ ಪಠ್ಯಕ್ರಮದಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಮುಂದಿನ ವರ್ಷಗಳಲ್ಲಿಯೂ ಇದೇ ಸಾಧನೆಯನ್ನು ಮುಂದುವರಿಸುವ ವಿಶ್ವಾಸ ವ್ಯಕ್ತವಾಗಿದೆ.

ಫಲಿತಾಂಶದ ವಿವರ

ಶ್ರೇಯಾ ಆರ್ –  97.00%
ಶ್ರುತಿ ಬಿ ಆರ್  – 95.60%
ಡಿ ರಕ್ಷಾ – 94.60%
ಗಗನಶ್ರೀ ಡಿ ಎಸ್ – 94.00%
ಕೆ ಹೆಚ್ ಸ್ಮೃತಿ. – 93.00%
ಅಫಿಫಾ. – 92.60%
ಧನುಶ್ರೀ ವಿ.- 92.00%.

ಚಿನ್ಮಯ್ ಎನ್ ಲೋಕೇಶ್. – 91.80%
ಪೂರ್ವಿಕಾ ಡಿ – 91.60%
ಹರಿಪ್ರಿಯಾ ಕೆ ಪಿ. – 91.60%
ರವಿನೂತಲ ತೇಜೋ ನಾಗಗೌರೀ ವೈಷ್ಣವಿ. – 91.40%
ಯೋಗಿತಾ ಕೆ ಪಿ. – 91.40%
ರಿಶಿಕಾ ರಾಜ್ ಸಿ. – 91.20%.

ಕೃತಿಕಾ ಹೆಚ್ ಎಂ. – 90.80%
ಭರಣಿ.ಎಸ್. – 90.40%
ವರ್ಷ ಬಿಂದು ಎನ್. – 90.20%
ಇಖ್ರಾ ಮರಿಯಮ್ – 90.00%

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!