ರೈತರಿಂದ ಅರ್ಜಿ ಆಹ್ವಾನ

Artists receiving monthly allowances submit lifetime certificates

ಬೆಂ.ಗ್ರಾ.ಜಿಲ್ಲೆ: ಭಾರತ ಸರ್ಕಾರದ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯು (ಎನ್.ಹೆಚ್.ಬಿ) ಹಣ್ಣು, ತರಕಾರಿ, ಪುಷ್ಪ, ತೋಟದ ಬೆಳೆ ಮತ್ತು ಸಾಂಬಾರು ಬೆಳೆಗಳ ಸಮಗ್ರ ಅಭಿವೃದ್ಧಿ ಗುರಿ ಹೊಂದಿದ್ದು, ಕ್ಲಸ್ಟರ್ ಡೆವಲಪ್ ಮೆಂಟ್ ಪ್ರೋಗ್ರಾಂ (ಸಿ.ಡಿ.ಪಿ) ಎಂಬ ಹೊಸ ಯೋಜನೆಯನ್ನು ರಾಜ್ಯ ಮಟ್ಟದಲ್ಲಿ ಅನುಷ್ಠಾನ ಮಾಡಲಿದ್ದು, ಆಸಕ್ತ ರೈತರಿಂದ (Farmers) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯ ಮುಖ್ಯ ಉದ್ದೇಶ
ಒಂದು ಪ್ರದೇಶದಲ್ಲಿ ಸಾಮಾನ್ಯವಾಗಿ ಬೆಳೆಯಬಹುದಾದ ಬೆಳೆಯನ್ನು ಕ್ಲಸ್ಟರ್ ರೂಪದಲ್ಲಿ ಒಗ್ಗೂಡಿಸಿ ಉತ್ಪಾದನೆ-ಸಂಸ್ಕರಣೆ- ಸಂಗ್ರಹಣೆ-ಮಾರುಕಟ್ಟೆ- ರಫ್ತು ಸರಪಳಿಯನ್ನು ಬಲಪಡಿಸುವುದಾಗಿದೆ.

ಈ ಕ್ಲಸ್ಟರ್ ಗಳಿಗೆ ಎನ್.ಹೆಚ್.ಬಿ ಯಿಂದ ಹಣಕಾಸು ನೆರವು ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಂಡಳಿ (ಎನ್.ಹೆಚ್.ಬಿ) ಸಿ.ಡಿ.ಪಿ ಅನ್ನು ಜಾರಿಗೆ ತರಲು ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ.

ರಾಜ್ಯ ತೋಟಗಾರಿಕೆ ಮಿಷನ್ ಏಜೆನ್ಸಿಯು ಸಿ.ಡಿ.ಪಿ ಯೋಜನೆಯ ಅನುಷ್ಟಾನಕ್ಕೆ ಅನುಕೂಲವಾಗುವ ಜವಾಬ್ದಾರಿಯುತ ಸಂಸ್ಥೆಯಾಗಿದ್ದು, ಇದರ ಪಾತ್ರವು ಬೆಳೆಯ ಕ್ಲಸ್ಟರ್ ಆಯ್ಕೆ, ಕಾರ್ಯಗತಗೊಳಿಸುವ ಸಂಸ್ಥೆ ಗುರುತಿಸುವುದು (ಐ.ಎ), ಯೋಜನೆಯ ಮೇಲ್ವಿಚಾರಣೆ ಮತ್ತು ತಳಮಟ್ಟದ ಪರಿಶೀಲನೆಯಾಗಿರುತ್ತದೆ.
ತೋಟಗಾರಿಕೆ ಇಲಾಖೆಯಿಂದ ಈಗಾಗಲೇ ನೀಡುತ್ತಿರುವ (ಹನಿ ನೀರಾವರಿ), ಪಾಲಿಮನೆ ಮತ್ತು ಬೆಳೆಪದ್ದತಿ, ಟ್ರಾಕ್ಟರ್, ಟಿಲ್ಲರ್, INM-IPM, ಕೃಷಿಹೊಂಡ, ಪ್ಯಾಕ್ ಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ನೆರಳು ಮನೆ, Cold room Stagging, ಶೀಥಲ ವಾಹನ, ಎರೆಹುಳು ಗೊಬ್ಬರ ಘಟಕ, Sensor based automation unit in poly house) ಘಟಕಗಳಿಗೆ ಸಹಾಯಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏ.17 ಕೊನೆಯ ದಿನವಾಗಿದ್ದು ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ), ಬೆಂಗಳೂರು ಗ್ರಾಮಾಂತರ ಜಿಲ್ಲೆ – 944899214, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೇವನಹಳ್ಳಿ ತಾಲ್ಲೂಕು – 9480461234, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ದೊಡ್ಡಬಳ್ಳಾಪುರ ತಾಲ್ಲೂಕು – 9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ),ಹೊಸಕೋಟೆ ತಾಲ್ಲೂಕು – 9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ),ಹೊನೆಲಮಂಗಲ ತಾಲ್ಲೂಕು – 9880461607, ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಲು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

CBSE ಫಲಿತಾಂಶ; MSV ಶಾಲೆ ಮಕ್ಕಳ ಮೇಲುಗೈ: ದೊಡ್ಡಬಳ್ಳಾಪುರ ತಾಲೂಕಿಗೆ ಟಾಪರ್..

CBSE results; MSV school students dominate
CBSE results; MSV school students dominate

ದೊಡ್ಡಬಳ್ಳಾಪುರ: ನಿನ್ನೆ (ಏ‌.15) ಪ್ರಕಟವಾದ
ಸಿಬಿಎಸ್‌ಇ (CBSE) 10ನೇ ತರಗತಿ ಫಲಿತಾಂಶದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಶಾಲೆಯಾದ ಎಂ‌ಎಸ್‌ವಿ ಪಬ್ಲಿಕ್ ಶಾಲೆ (MSV Public School) ಶೇ.100 ರಷ್ಟು ಸಾಧನೆ ಮಾಡಿದೆ.

2025-26ನೇ ಸಾಲಿನ ಸಿಬಿಎಸ್‌ಇ ಕೇಂದ್ರೀಯ ಪರೀಕ್ಷಾ ಮಂಡಳಿಯ ಹತ್ತನೇ ತರಗತಿ ಫಲಿತಾಂಶದಲ್ಲಿ, ದೊಡ್ಡಬಳ್ಳಾಪುರ ನಗರದ ಎಂಎಸ್‌ವಿ ಪಬ್ಲಿಕ್ ಶಾಲೆಯು ನಿರಂತರವಾಗಿ 15ನೇ ವರ್ಷವೂ ಶೇ.100 ಸಾಧನೆ ಮಾಡಿ ಮತ್ತೊಮ್ಮೆ ಗಮನ ಸೆಳೆದಿದೆ. 

ಈ ಬಾರಿ ಒಟ್ಟು 136 ವಿದ್ಯಾರ್ಥಿಗಳಲ್ಲಿ 86 ಮಕ್ಕಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 41 ಮಕ್ಕಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ಮಕ್ಕಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಮಕ್ಕಳ ಈ ಫಲಿತಾಂಶಕ್ಕೆ ಮತ್ತು ಅವರ ಸಾಧನೆಗೆ ಶಾಲೆಯ ಸಂಸ್ಥಾಪಕರಾದ ಸುಬ್ರಮಣ್ಯ.ಎ ರವರು ಪ್ರಶಂಸೆ ವ್ಯಕ್ತಪಡಿಸಿದರು. 

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, “ನಿರಂತರವಾಗಿ 15 ವರ್ಷಗಳ ಕಾಲ ಶೇ.100 ಫಲಿತಾಂಶವನ್ನು ಸಾಧಿಸುವುದು ನಮ್ಮ ಶಾಲೆಯ ಗುಣಮಟ್ಟದ ಶಿಕ್ಷಣ ಮತ್ತು ತಂಡದ ಕಾರ್ಯದ ಪ್ರತೀಕವಾಗಿದೆ.  ಮಕ್ಕಳ ಈ ಸಾಧನೆ ನಮ್ಮ ಶಾಲೆಗೆ ಕೀರ್ತಿ ತಂದಿದೆ, ಮಕ್ಕಳಿಗೆ ಹಾಗೂ ವಿದ್ಯೆ ಕಲಿಸಿದ ಶಿಕ್ಷಕ ವೃಂದಕ್ಕೆ ನನ್ನ ಮನಃಪೂರ್ವಕವಾದ ಅಭಿನಂದನೆಗಳು” ಎಂದು ಮುಕ್ತ ಕಂಠದಿಂದ ಹಾರೈಸಿದ್ದಾರೆ.

ಶಾಲಾ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿ ನಯನಾ ಸ್ವರೂಪ್ ಹಾಗೂ ಪ್ರಾಂಶುಪಾಲರಾದ ರೆಮ್ಯ.ಬಿ.ವಿ ಹಾಗೂ ಸಿಬ್ಬಂದಿ ವರ್ಗಕೂಡ ಮಕ್ಕಳ ಸಾಧನೆಯನ್ನು ಮುಕ್ತ ಕಂಠದಿಂದ ಅಭಿನಂದನೆಗಳನ್ನು ಸಲ್ಲಿಸಿದರು.

ಈ ವಿಶಿಷ್ಟ ಸಾಧನೆಗೆ ಶಿಕ್ಷಕರ ಸಮರ್ಪಣೆ, ಮಾರ್ಗದರ್ಶನ,  ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಾಲೆಯ ಶಿಸ್ತಿನ ವಾತಾವರಣ ಪ್ರಮುಖ ಕಾರಣಗಳಾಗಿವೆ.

ಈ ಸಾಧನೆಯೊಂದಿಗೆ, ಶಾಲೆಯು ಸಿಬಿಎಸ್‌ಇ ಪಠ್ಯಕ್ರಮದಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಮುಂದಿನ ವರ್ಷಗಳಲ್ಲಿಯೂ ಇದೇ ಸಾಧನೆಯನ್ನು ಮುಂದುವರಿಸುವ ವಿಶ್ವಾಸ ವ್ಯಕ್ತವಾಗಿದೆ.

ಫಲಿತಾಂಶದ ವಿವರ

ಶ್ರೇಯಾ ಆರ್ –  97.00%
ಶ್ರುತಿ ಬಿ ಆರ್  – 95.60%
ಡಿ ರಕ್ಷಾ – 94.60%
ಗಗನಶ್ರೀ ಡಿ ಎಸ್ – 94.00%
ಕೆ ಹೆಚ್ ಸ್ಮೃತಿ. – 93.00%
ಅಫಿಫಾ. – 92.60%
ಧನುಶ್ರೀ ವಿ.- 92.00%.

ಚಿನ್ಮಯ್ ಎನ್ ಲೋಕೇಶ್. – 91.80%
ಪೂರ್ವಿಕಾ ಡಿ – 91.60%
ಹರಿಪ್ರಿಯಾ ಕೆ ಪಿ. – 91.60%
ರವಿನೂತಲ ತೇಜೋ ನಾಗಗೌರೀ ವೈಷ್ಣವಿ. – 91.40%
ಯೋಗಿತಾ ಕೆ ಪಿ. – 91.40%
ರಿಶಿಕಾ ರಾಜ್ ಸಿ. – 91.20%.

ಕೃತಿಕಾ ಹೆಚ್ ಎಂ. – 90.80%
ಭರಣಿ.ಎಸ್. – 90.40%
ವರ್ಷ ಬಿಂದು ಎನ್. – 90.20%
ಇಖ್ರಾ ಮರಿಯಮ್ – 90.00%

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!