ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

Lok Sabha: H.D. Kumaraswamy launches scathing attack on Congress, DMK

ನವದೆಹಲಿ: ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷಗಳ ವಾದಗಳು ಭಯ ಹುಟ್ಟಿಸುವ ರೀತಿಯಲ್ಲಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಶುಕ್ರವಾರ ಮಹಿಳಾ ಮೀಸಲು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಕೇಂದ್ರ ಸಚಿವರು; ಮಹಿಳೆಯರಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ಈ ಮಸೂದೆಯು ಭಾರತದ ಪ್ರಜಾಪ್ರಭುತ್ವದ ಪಯಣದಲ್ಲಿ ಕ್ರಾಂತ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದರು.

ಸುಧಾರಣೆಗಳಿಗೆ ಕಾಂಗ್ರೆಸ್ ಅಡ್ಡಿಯಾಗಿದೆ

ಕಾಂಗ್ರೆಸ್ ಪಕ್ಷವು ನಿರಂತರವಾಗಿ ಸುಧಾರಣೆಗಳಿಗೆ ವ್ಯವಸ್ಥಿತವಾಗಿ ತಡೆಯೊಡ್ಡುತ್ತಿದೆ. ಈ ಮಸೂದೆಯನ್ನು ಬೆಂಬಲಿಸುವುದನ್ನು ಬಿಟ್ಟು ಜನರನ್ನು ದಾರಿತಪ್ಪಿಸುವ ಸಂಕಥನಗಳನ್ನು ಸೃಷ್ಟಿಸುತ್ತಿದೆ. ಕಾಂಗ್ರೆಸ್ ಸೃಷ್ಟಿಸುತ್ತಿರುವ ಗೊಂದಲಗಳಿಗೆ ಅರ್ಥವಿಲ್ಲ, ಅವುಗಳನ್ನು ಜನರು ನಂಬುವುದಿಲ್ಲ ಹಾಗೂ ಸಂಕುಚಿತ ಸಂಕಥನಗಳ ಕಾಂಗ್ರೆಸ್ ವಾದವು ರಾಷ್ಟ್ರದ ವಿಶಾಲ ತಳಹದಿಯ ಭಾವನೆಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಎಂ.ಕೆ. ಸ್ಟಾಲಿನ್ ನಿಲುವು ದಕ್ಷಿಣ ಭಾರತದ ಅಭಿಪ್ರಾಯವಲ್ಲ

ಮಸೂದೆಯ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತೆಗೆದುಕೊಂಡ ನಿಲುವು ಎಲ್ಲಾ ದಕ್ಷಿಣದ ರಾಜ್ಯಗಳ ಅಭಿಪ್ರಾಯವಲ್ಲ ನೇರ ಮಾತುಗಳಲ್ಲಿ ಹೇಳಿದ ಕೇಂದ್ರ ಸಚಿವರು; ಇಂದು ನಾವು ಯಾವ ಮಸೂದೆಯ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆಯೋ ಅದನ್ನು ಮುಕ್ತವಾಗಿ ಬೆಂಬಲಿಸಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಶ್ಲಾಘಿಸಿ, ನಾಯ್ಡು ಅವರಿಗೇನು ರಾಷ್ಟ್ರಪ್ರೇಮ ಇಲ್ಲವೇ? ಇಂದು ಪ್ರಶ್ನಿಸಿದರು.

ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಡಿಎಂಕೆ ಈ ಮಹತ್ವದ ಮಸೂದೆಗಳನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಮತ್ತು ಅವುಗಳು ದಕ್ಷಿಣದ ರಾಜ್ಯಗಳ ಮೇಲೆ ಭಾರಿ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂಬ ಕಳವಳವನ್ನು ವ್ಯಕ್ತಪಡಿಸಿದೆ. ಇದು ಸರಿಯಲ್ಲ, ಅನಗತ್ಯವಾಗಿದೆ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

ಕಿರಿಯ ಸಹೋದರ ಎಂದು ಕುಟುಕಿದ ಸಚಿವರು

ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು, ರಾಹುಲ್ ಗಾಂಧಿ ಅವರು ಕೆಲ ದಿನಗಳ ಹಿಂದೆ, ತಾವು ಸ್ಟಾಲಿನ್ ಅವರ ಕಿರಿಯ ಸಹೋದರ ಎಂದು ಹೇಳಿಕೊಂಡಿದ್ದರು. ಆದರೆ ವಿಧಾನಸಭೆ ಕ್ಷೇತ್ರಗಳ ಹಂಚಿಕೆ ನಂತರ ಹಿರಿಯ ಸಹೋದರ ಕಿರಿಯ ಸಹೋದರನ ಮೇಲೆ ಮುನಿಸಿಕೊಂಡಂತೆ ಕಾಣುತ್ತಿದೆ. ಆದರೂ ಕಿರಿಯ ಸಹೋದರ ಈಗಲೂ ಹಿರಿಯ ಸಹೋದರನಿಂದ ಪ್ರೀತಿಯನ್ನು ನಿರೀಕ್ಷೆ ಮಾಡುತ್ತಿರುವಂತೆ ತೋರುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಮಹಿಳಾ ಮೀಸಲಾತಿ, ಅದರಲ್ಲೂ ಮುಖ್ಯವಾಗಿ ಅನುಪಾತದ ಪ್ರಾತಿನಿಧ್ಯದ ಬಗ್ಗೆ ರಾಹುಲ್ ಗಾಂಧಿ ಅವರ ನಿಲುವಿನಲ್ಲಿ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದ ಸಚಿವ ಕುಮಾರಸ್ವಾಮಿ ಅವರು; ರಾಹುಲ್.ಗಾಂಧಿ ಅವರು ತಮಿಳುನಾಡು ಬಗ್ಗೆ ನೀಡುತ್ತಿರುವ ಹೇಳಿಕೆಯನ್ನು ಉತ್ತರ ಪ್ರದೇಶ, ಬಿಹಾರ ಅಥವಾ ಮಧ್ಯಪ್ರದೇಶಕ್ಕೆ ಹೋಗಿ ಹೇಳುತ್ತಾರೆಯೇ? ಎಂದು ಖಾರವಾಗಿ ಪ್ರಶ್ನಿಸಿದರು.

ಕ್ಷೇತ್ರ ಮರು ವಿಂಗಡಣೆಯ ಬಗ್ಗೆ ಪ್ರತಿಪಕ್ಷಗಳ ಕಳವಳಕ್ಕೆ ಅರ್ಥವಿಲ್ಲ. ಸರ್ಕಾರವು ಎಲ್ಲಾ ರಾಜ್ಯಗಳಲ್ಲಿ ಸ್ಥಾನಗಳಲ್ಲಿ ಸರಾಸರಿ ಶೇ.50ರಷ್ಟು ಕ್ಷೇತ್ರಗಳನ್ನು ಹೆಚ್ಚಿಸುವ ಏಕರೂಪ ಬದ್ಧತೆಯನ್ನು ಖಚಿತಪಡಿಸಿದೆ. ಯಾವುದೇ ರಾಜ್ಯವು ತನ್ನ ಪ್ರಸ್ತುತ ಪ್ರಾತಿನಿಧ್ಯವನ್ನು ಕಳೆದುಕೊಳ್ಳುವುದಿಲ್ಲ ಹಾಗೂ ಭಾರತವು ತನ್ನ ಅಪಾರ ಜನಸಂಖ್ಯೆಯ ಹೊರತಾಗಿಯೂ ಬ್ರಿಟನ್ ನಂತಹ ದೇಶಕ್ಕಿಂತ ಕಡಿಮೆ ಚುನಾಯಿತ ಪ್ರತಿನಿಧಿಗಳನ್ನು ಹೊಂದಿದೆ. ಹೀಗಾಗಿ ಸಂಸದರ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಬಹುದೊಡ್ಡ ಪರಿವರ್ತನಾತ್ಮಕ ಸುಧಾರಣೆಗೆ ಪ್ರಧಾನಿಗಳು ನಾಂದಿ ಹಾಡಿದ್ದಾರೆ ಎಂದ ಸಚಿವರು; ಪ್ರಧಾನಿಗಳ ನೇತೃತ್ವದಲ್ಲಿ ಭಾರತವು ದೃಢವಾದ ಮತ್ತು ಅರ್ಥಪೂರ್ಣ ಪರಿವರ್ತನೆಯತ್ತ ಸಾಗುತ್ತಿದೆ. ಇಡೀ ಜಗತ್ತು ಯುದ್ಧಗಳಿಂದ ತಲ್ಲಣಿಸುತ್ತಿದ್ದರೆ ಭಾರತ ಮಾತ್ರ ಸುಧಾರಣೆಗಳತ್ತ ದೃಢ ಸಂಕಲ್ಪದಿಂದ ಹೊರಳಿದೆ ಎಂದು ಒತ್ತಿ ಹೇಳಿದರು.

ಲೋಕಸಭೆಯ ಸಂಖ್ಯಾಬಲ ಹೆಚ್ಚಿಸುವ ಕೇಂದ್ರದ ನಿರ್ಧಾರವು ವಿಧಾನಸಭೆಗಳು ಮತ್ತು ಲೋಕಸಭೆಯಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಕ್ರಾಂತಿಕಾರಕ ಹೆಜ್ಜೆಯಾಗಿದೆ. ಈ ಕ್ರಮವು ಮಹಿಳೆಯರಿಗೆ ಮಾಡುವ ಉಪಕಾರವಲ್ಲ, ಬದಲಾಗಿ ಸಮಾಜಕ್ಕೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ಮನ್ನಣೆ ನೀಡುವುದೇ ಆಗಿದೆ ಎಂದು ಅವರು ಹೇಳಿದರು ಹಾಗೂ ಮಹಿಳೆಯರು ಶಕ್ತಿ ಸ್ವರೂಪರು, ರಾಷ್ಟ್ರ ನಿರ್ಮಾಣದ ಕೇಂದ್ರಬಿಂದುವಾಗಿದ್ದಾರೆ ಎಂದು ಬಣ್ಣಿಸಿದರು.

ಮಹಿಳಾ ಮೀಸಲು ಕನಸು ಕಂಡಿದ್ದ ದೇವೇಗೌಡರು:

1995ರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಆಶಯವನ್ನು ಪ್ರಪ್ರಥಮ ಬಾರಿಗೆ ಪ್ರಸ್ತಾಪಿಸಿದ್ದರು ಎಂಬುದನ್ನು ಸ್ಮರಿಸಿದ ಸಚಿವರು; ದೇವೇಗೌಡರು ಆ ನಂತರ 1996ರಲ್ಲಿ ಪ್ರಧಾನಿಯಾಗಿ ಸಂಸತ್ತಿನಲ್ಲಿ ಈ ಮಹಿಳಾ ಮೀಸಲು ಮಸೂದೆಯನ್ನು ಮಂಡಿಸಿದರು, ಆದರೆ ರಾಜಕೀಯ ಬೆಂಬಲದ ಕೊರತೆಯಿಂದಾಗಿ ಆ ಸಮಯದಲ್ಲಿ ಅದನ್ನು ಈ ಸದನದಲ್ಲಿ ಅಂಗೀಕರಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ರಾಷ್ಟ್ರದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಇರುವ ಮಹಿಳೆಯರಿಗೆ ಈ ಮೀಸಲಾತಿ ಬಹುದೊಡ್ಡ ಶಕ್ತಿಯನ್ನು ತುಂಬುತ್ತದೆ. ಆತ್ಮನಿರ್ಭರ ಭಾರತದ ಮೂಲಕ ವಿಕಸಿತ ಭಾರತ ಸಾಕಾರಕ್ಕೆ ಪ್ರಧಾನಿಗಳು ಹೇಗೆ ಶ್ರಮಿಸುತ್ತಿದ್ದಾರೆಯೋ ಹಾಗೆಯೇ ಮಹಿಳೆಯರಿಗೆ ಮೀಸಲು ನೀಡಿ ರಾಜಕೀಯವಾಗಿ ಶಕ್ತಿ ನೀಡುವ ಮೂಲಕ ನಾರೀಭಾರತ ಸಾಕಾರಕ್ಕೆ ಮುಂದಾಗಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ನಾನು ಕೂಡ ಈ ಐತಿಹಾಸಿಕ ಸಂದರ್ಭಕ್ಕೆ ಭಾಗವಾಗಿರುವುದು ನನಗೆ ಅತೀವ ಸಂತೋಷ ತಂದಿದೆ ಎಂದು ಹೇಳಿದ ಸಚಿವರು; ಈ ಮೀಸಲಾತಿಯನ್ನು ನಾವು ಔದಾರ್ಯವೆಂದು ನೋಡಬಾರದು. ವಾಸ್ತವವಾಗಿ, ಇದು ನಮ್ಮ ಸಮಾಜದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗೆ ಮನ್ನಣೆ, ಗೌರವ ನೀಡುವುದಾಗಿದೆ.

ತಾಯಿಯೇ ಮೊದಲ ಗುರು ಮತ್ತು ಮಹಿಳೆಯೊಬ್ಬರು ಕಲಿತರೆ ಶಾಲೆಯೊಂದನ್ನು ತೆರೆದಂತೆ ಎಂಬ ಮಾತನ್ನು ನಾವೆಲ್ಲರೂ ಕೇಳಿದ್ದೇವೆ. ಶಾಸನಸಭೆಗಳಲ್ಲಿ ಮಹಿಳೆಯರಿಗೆ ಹೆಚ್ಚು ಅವಕಾಶ ನೀಡುವ ಮೂಲಕ ಪ್ರಜಾಪ್ರಭುತ್ವದ ಅಡಿಪಾಯವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ. ಈ ಐತಿಹಾಸಿಕ ದಿನದಂದು ಭಾರತಮಾತೆ ನಮ್ಮೆಲ್ಲರ ಬಗ್ಗೆ ಹೆಮ್ಮೆಪಡುತ್ತಿದ್ದಾಳೆ ಎಂದು ನಾನು ನಂಬಿದ್ದೇನೆ ಎಂದು ಪ್ರತಿಪಾದಿಸಿದರು.

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!