ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

DCM D.K. Shivakumar's warning to Congress MLAs

ಬೆಂಗಳೂರು: “ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕಿಡಿಕಾರಿದರು.

ಸಿದ್ದರಾಮಯ್ಯ ಅವರೊಟ್ಟಿಗೆ ಒಂದೇ ವಿಮಾನದಲ್ಲಿ ಬಹಳ ದಿ‌ನಗಳ ನಂತರ ಪ್ರಯಾಣ ಮಾಡುತ್ತಿದ್ದೀರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಸಿಟ್ಟಾದ ಡಿ ಕೆ ಶಿವಕುಮಾರ್ ಅವರು, ನಿಮಗೆ ತಲೆ ಕೆಟ್ಟಿದೆ ಎನಿಸುತ್ತಿದೆ. ಎಲ್ಲಿದೆ ನನ್ನ ಮತ್ತು ಸಿದ್ದರಾಮಯ್ಯ ಗುಂಪು. ನೀವೇ ಗುಂಪು ಸೃಷ್ಟಿ ಮಾಡುತ್ತಿದ್ದೀರಿ.

ದೆಹಲಿಯಲ್ಲಿ ಸಿದ್ದರಾಮಯ್ಯ ಅವರ ಗುಂಪು ಎಂದು ಹೇಳಿದ್ದೀರಿ. ಅವರೇನೂ ಸಿದ್ದರಾಮಯ್ಯ ಗುಂಪು ಎಂದು ಬೋರ್ಡ್ ಹಾಕಿಕೊಂಡಿದ್ದಾರೆಯೇ? ಅಥವಾ ನನ್ನ ಗುಂಪು ಎಂದು ನಾನು ಬೋರ್ಡ್ ಹಾಕಿಕೊಂಡಿದ್ದೇನೆಯೇ? ಎಲ್ಲ 139 ಶಾಸಕರು ನನ್ನ ಹಾಗೂ ಸಿದ್ದರಾಮಯ್ಯ ಅವರ ಶಾಸಕರೇ ಆಗಿದ್ದಾರೆ. ಯಾವ ಗುಂಪೂ ಇಲ್ಲ, ಬೋರ್ಡೂ ಇಲ್ಲ. ನಿಮಗೆ ಗೊತ್ತಿದೆಯೇ ಯಾರ್ಯಾರ ಗುಂಪು ಏನಿದೆ ಅಂತ? ನಿಮಗೆ ಹೆಂಗೆ ಬೇಕೋ ಹಂಗೆ ಚಟಕ್ಕೆ ಬರೆಯುತ್ತಾ ಇದ್ದೀರಿ ಎಂದರು.

ನಿಮ್ಮ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಾ ಇದ್ದಾರಲ್ಲಾ ಎಂದು ಕೇಳಿದಾಗ, “ಯಾವ ಹೇಳಿಕೆಯೂ ಇಲ್ಲ. ಯಾವ ಗುಂಪೂ ಇಲ್ಲ. 139 ಶಾಸಕರು ನನ್ನದೇ ಗುಂಪು. ಕಾಂಗ್ರೆಸ್ ಗುಂಪು. ನಮಗೆ ಪಕ್ಷ ಹಾಗೂ ಪಕ್ಷದ ಹಿತ ಮುಖ್ಯ. ಪಕ್ಷದ ಅಭಿವೃದ್ಧಿಗೆ ಹಾಗೂ ಅದರ ಒಳಿತಿಗೆ ಏನು ಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದೇವೆ. ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡುತ್ತಿದ್ದೇವೆ, ಮಾಡುತ್ತೇವೆ” ಎಂದರು.

ಜಬ್ಬಾರ್ ಹಾಗೂ ನಸೀರ್ ಅಹ್ಮದ್ ಅವರ ವಿರುದ್ದ ಕ್ರಮ ಕೈಗೊಂಡಿರುವುದರ ಬಗ್ಗೆಯೂ ಮಾತನಾಡುತ್ತೇನೆ ಎಂದು ಸತೀಶ್ ಜಾರಕಿಹೊಳಿ ಅವರು ಹೇಳಿದ್ದರ ಬಗ್ಗೆ ಕೇಳಿದಾಗ, “ಇಲ್ಲಿ ಯಾವುದೇ ವೈಯಕ್ತಿಕ ವಿಚಾರಗಳು ಇಲ್ಲ. ಪಕ್ಷಕ್ಕೆ ತನ್ನದೇ ಆದ ರೀತಿ-ರಿವಾಜುಗಳಿವೆ. ಎಂಎಲ್ ಎ, ಎಂಎಲ್ ಸಿ ವಿಚಾರವಾಗಿ ದೆಹಲಿ ನಾಯಕರು ಏನೂ ಹೇಳದೇ, ಅವರು ಏನೂ ಸೂಚನೆ ಕೊಡದೆ, ನಾವು ಏನೂ ಮಾಡಲೂ ಆಗುವುದಿಲ್ಲ. ಕೆಲವನ್ನು ಮಾರ್ಗದರ್ಶನದ ಅನುಸಾರವಾಗಿ ಮಾಡಬೇಕಾಗುತ್ತದೆ. ಕೆಲವರು ನನ್ನ ಮೇಲೆ ದೂರಬಹುದು. ಹಾಗೇ ನನ್ನ ಮೇಲೆ ಹೇಳಿದರೂ ಚಿಂತೆಯಿಲ್ಲ. ಪಕ್ಷದ ಶಿಸ್ತಿನ ಚೌಕಟ್ಟಿ‌ನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಾಗುತ್ತದೆ” ಎಂದರು.

ಕಾಂಗ್ರೆಸ್ ಪಕ್ಷ ಇರುವುದೇ ಎಲ್ಲರ ಒಳಿತಿಗೆ

ಅಲ್ಪಸಂಖ್ಯಾತ ಸಮುದಾಯವನ್ನು ಮತ್ತೆ ತುಳಿಯುವ ಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಇಡೀ ಕಾಂಗ್ರೆಸ್ ಪಕ್ಷ ಇರುವುದೇ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗ, ರೈತರು – ಹೀಗೆ ಎಲ್ಲಾ ವರ್ಗಕ್ಕೂ ನ್ಯಾಯ ಒದಗಿಸಲು” ಎಂದರು.

ಸತೀಶ್ ಜಾರಕಿಹೊಳಿ ಅವರ ಜತೆ ಏನು ಚರ್ಚೆ ನಡೆಯಿತು ಎಂದು ಕೇಳಿದಾಗ, “ಅವರು ನಮ್ಮ ಪಕ್ಷದ ನಾಯಕರು. 2028 ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ. ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನನಗೆ ಶೇ. 1000 ಪಟ್ಟು ಅಧಿಕಾರಕ್ಕೆ ಮರಳುವ ವಿಶ್ವಾಸವಿದೆ” ಎಂದರು.

“ನಾನು ಹಾಗೂ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನ ಟ್ರಾಫಿಕ್ ಅನ್ನು ಹೇಗೆ ನಿಯಂತ್ರಣ ಮತ್ತು ಕಡಿಮೆ ಮಾಡಬೇಕು ಎನ್ನುವ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ನೆಲಮಂಗಲದಿಂದ ಗೊರಗುಂಟೆಪಾಳ್ಯದವರೆಗೆ ಹೆಚ್ಚು ವಾಹನ ಸಂಚಾರ ದಟ್ಟಣೆ ಇದೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಮೂಲಕ ನಗರದ ಒಳಗೆ ವಾಹನಗಳು ಬರದಂತೆ ಹೇಗೆ ಬದಲಿ ವ್ಯವಸ್ಥೆ ಮಾಡಬಹುದು. ನೈಸ್ ರಸ್ತೆಗೆ ಮುನ್ನ ಯಾವ ವ್ಯವಸ್ಥೆ ಮಾಡಬಹುದು ಎಂದು ಚರ್ಚೆ ನಡೆಸಿದ್ದೇವೆ. ಈಗಾಗಲೇ ಬಿಜಿನೆಸ್ ಕಾರಿಡಾರ್ ಯೋಜನೆ ಕೈಗೆತ್ತಿಕೊಂಡಿದ್ದೇವೆ” ಎಂದರು.

ರಾಜಕೀಯ ಲಾಭಕ್ಕಾಗಿ ಕ್ಷೇತ್ರ ಮರುವಿಂಗಡಣೆ ತೀರ್ಮಾನ

ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಕೇಂದ್ರದ ತರಾತುರಿ ನಿರ್ಧಾರದ ಬಗ್ಗೆ ಕೇಳಿದಾಗ, “ಅವರು ಏಕೆ ಆತುರದಲ್ಲಿ ಇದ್ದಾರೆ ಎಂದು ತಿಳಿಯುತ್ತಿಲ್ಲ. ಕಾಂಗ್ರೆಸ್ ಪಕ್ಷವು ಚೌಕಟ್ಟಿನ ಒಳಗೆ ಇದರ ಬಗ್ಗೆ ಸೂಕ್ತ ಚರ್ಚೆ ನಡೆಸಬೇಕು ಎಂದು ಬಯಸುತ್ತದೆ. ರಾಜಕೀಯ ಲಾಭಕ್ಕಾಗಿ ಯಾವುದೇ ಸ್ಪಷ್ಟನೆ ಇಲ್ಲದೇ ಈ ನಿರ್ಧಾರವನ್ನು ಬಿಜೆಪಿ ತೆಗೆದುಕೊಳ್ಳುತ್ತಿದೆ. ಇದು ಒಳ್ಳೆಯದಲ್ಲ‌” ಎಂದರು.

“ಬಿಜೆಪಿಯವರು ಅಭದ್ರತೆ ಎದುರಿಸುತ್ತಿದ್ದಾರೆ. ಅದಕ್ಕೆ ಈ ವಿಚಾರದ ಬಗ್ಗೆ ತರಾತುರಿಯಲ್ಲಿದ್ದಾರೆ. ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಈ ಹಿಂದೆ ಈ ಬಗ್ಗೆ ತೀರ್ಮಾನ ಆಗಿತ್ತು” ಎಂದರು.

ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ತಮಿಳುನಾಡಿನ ನಿಲುವಿನ ಬಗ್ಗೆ ಕೇಳಿದಾಗ, “ಕ್ಷೇತ್ರ ಪುನರ್ ವಿಂಗಡಣೆ ಸರಿಯಾದ ಕ್ರಮವಲ್ಲ. ಇದು ಬೇಕಾಗಿಲ್ಲ” ಎಂದರು.

ದೆಹಲಿ ಭೇಟಿ ಹಾಗೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಈಗ ಆ ವಿಚಾರ ಚರ್ಚೆಯಿಲ್ಲ. ಮೊದಲು ಚುನಾವಣೆಗಳನ್ನು ಮುಗಿಸೋಣ. ಮೊದಲ ಆದ್ಯತೆ ಚುನಾವಣೆಗೆ. ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮ ನಿಮಿತ್ತ ನಾನು ಹಾಗೂ ಮುಖ್ಯಮಂತ್ರಿ ದೆಹಲಿಗೆ ತೆರಳುತ್ತಿದ್ದೇವೆ. ಇತರೇ ದೇಶಗಳ ರಾಯಭಾರಿಗಳು, ಉದ್ಯಮಿಗಳು ಸೇರಿದಂತೆ ಅನೇಕರು ಸೇರುತ್ತಿದ್ದಾರೆ. ಐಟಿ ಬಿಟಿ ಸಚಿವರು ಇದನ್ನು ಆಯೋಜಿಸಿದ್ದಾರೆ” ಎಂದು ತಿಳಿಸಿದರು.

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!