ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

Accident between Canter and tractor.. one dead

ದೊಡ್ಡಬಳ್ಳಾಪುರ: ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ ರಾಮೇಶ್ವರ ಗೇಟ್ ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಟ್ರಾಕ್ಟರ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ತಿಮ್ಮಸಂದ್ರ ಗ್ರಾಮದ ಆನಂದ್ (32 ವರ್ಷ) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ದಾಬಸ್ ಪೇಟೆ ಹೊಸಕೋಟೆ ನಡುವಿನ ರಾಮೇಶ್ವರ ಗೇಟ್ ಬಳಿ ದುರ್ಘಟನೆ ಸಂಭವಿಸಿದ್ದು, ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

ಕುಡಿದವನಿಗೆ ಟೆಸ್ಟ್ ಡ್ರೈವ್ ಕಾರು ನೀಡಿ ಅಪಘಾತ:

Accident after giving test drive to drunk driver
Accident after giving test drive to drunk driver

ಬೆಂಗಳೂರು: ಮಹದೇವಪುರದ ಮಹೀಂದ್ರಾ ಶೋರೂಂ ಸಿಬ್ಬಂದಿ ಮಾಡಿಕೊಂಡ ಎಡವಟ್ಟಿಗೆ ಹಲವು ಹೊಸ ವಾಹನಗಳು ಅಪಘಾತಕ್ಕೆ (Accident) ಒಳಗಾಗಿ ಜಖಂಗೊಂಡಿವೆ.

ಕುಡಿದ ಮತ್ತಿನಲ್ಲಿ ಶೋ ರೂಂಗೆ ಬಂದ ವ್ಯಕ್ತಿಯೊಬ್ಬನಿಗೆ ಮಹೀಂದ್ರಾ ಶೋರೂಂ ಸಿಬ್ಬಂದಿ ಕಾರನ್ನು ಟೆಸ್ಟ್ ಡ್ರೈವ್‌ಗೆ ನೀಡಿದ್ದಾರೆ.

ಏಪ್ರಿಲ್ 12ರಂದು ಮಹದೇವಪುರದ ವಿಜೇಶ್ವರ ನಗರದಲ್ಲಿರುವ ಮಹೀಂದ್ರಾ ಶೋರೂಂನಲ್ಲಿ ಕುಡಿದು ಬಂದಿದ್ದ ಅಭಿಲಾಶ್ ಎಂಬಾತನಿಗೆ ಟೆಸ್ಟ್ ಡ್ರೈವ್ ವಾಹನ ನೀಡಿದ ಸಿಬ್ಬಂದಿಯ ನಿರ್ಲಕ್ಷ್ಯ ತೋರಿದೆ. ಇದರಿಂದ ಅಪಘಾತ ಉಂಟಾಗಿ, ನಾಲ್ಕು ವಾಹನಗಳು ಜಖಂಗೊಂಡಿದೆ.

ಕುಡಿದ ಮತ್ತಿನಲ್ಲಿ ಅಭಿಲಾಶ್, ರಸ್ತೆಯಲ್ಲಿ ಮನಸೋ ಇಚ್ಛೆ ಕಾರು ಓಡಿಸಿದ್ದಾನೆ. ಆತ ನಾಲ್ಕು ಕಾರುಗಳಿಗೆ ಗುದ್ದಿ ಜಖಂಗೊಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ, ಅಷ್ಟೇ ಅಲ್ಲದೆ, ರಮೇಶ್ ಎಂಬವರ ಕಾರಿಗೆ ಗುದ್ದಿದ ರಭಸಕ್ಕೆ ಅವರ ಕಾಲು ಮುರಿದಿದೆ.

ಗಾಯಗೊಂಡ ರಮೇಶ್ ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಲಾಶ್ ಕೂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ಸಂಬಂಧ ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಹದೇವಪುರ ಸಂಚಾರಿ ಪೊಲೀಸರು ಅಭಿಲಾಶ್‌ ಗೆ ನೋಟಿಸ್ ಜಾರಿ ಮಾಡಿದ್ದು, ಐಎಂವಿ ಕಾಯಿದೆ ಹಾಗೂ ಬಿಎನ್‌ಎಸ್ 125 (ಎ), 281 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪತ್ನಿ ಭುವನ ಪತ್ತೆಗೆ ಪತಿಯ ಮನವಿ

Husband's plea to find his wife Bhuvana
Husband’s plea to find his wife Bhuvana

ಚಿಕ್ಕಬಳ್ಳಾಪುರ: ನಗರದ ಪ್ರಶಾಂತನಗರದ 4ನೇ ವಾರ್ಡ್ ನಿವಾಸಿ ಪಿ.ಭುವನ (P. Bhuvana) ಎಂಬ 31 ವರ್ಷದ ಮಹಿಳೆಯು ಮಾನಸಿಕ ಖಿನ್ನತೆ ಸೇರಿದಂತೆ ಆರೋಗ್ಯ ಸಮಸ್ಯೆಗಳಿಂದ ಮನನೊಂದು ಏಪ್ರಿಲ್ 2 ರಂದು ಮನೆಯಿಂದ ಹೊರಗಡೆ ಹೋದವಳು ಮತ್ತೆ ಮನೆಗೆ ಬಂದಿರುವುದಿಲ್ಲ.

ಎಲ್ಲಾ ಕಡೆ ಹುಡುಕಾಡಿದರೂ, ಸಂಬಂಧಿಕರಲ್ಲಿ ವಿಚಾರಿಸಿದರೂ ಮಾಹಿತಿ ಸಿಗದ ಕಾರಣ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿ ಕಾಣೆಯಾಗಿರುವ ಬಗ್ಗೆ ದೂರು ನೀಡಿ ಪತ್ತೆ ಮಾಡಿಕೊಡಬೇಕೆಂದು ಅವರ ಮನವಿ ಮಾಡಿದ್ದಾರೆ.

ಚಹರೆ: ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, 5 ಅಡಿ ಎತ್ತರವಿದ್ದು, ಗ್ರೇ ಕಲ್ಲರ್ ಚೂಡಿದಾರ್ ಧರಿಸಿದ್ದು, ಕನ್ನಡ ಮತ್ತು ತೆಲುಗು ಮಾತನಾಡುತ್ತಾರೆ.

ಈ ಚಹರೆಯುಳ್ಳ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದೆಂದು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

Women's reservation bill defeated
Women’s reservation bill defeated

ನವದೆಹಲಿ: ಮಹಿಳಾ ಮೀಸಲಾತಿ (Women’s reservation) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

ಮಸೂದೆಯ ಪರವಾಗಿ 278 ಮತಗಳು ಮತ್ತು ವಿರುದ್ಧವಾಗಿ 211 ಮತಗಳು ಬಿದ್ದಿದ್ದು. ಲೋಕಸಭೆಯಲ್ಲಿ 489 ಸಂಸದರು ಮತ ಚಲಾಯಿಸಿದರು.

ಮಸೂದೆಯನ್ನು ಅಂಗೀಕರಿಸಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. 489 ರಲ್ಲಿ ಮೂರನೇ ಎರಡರಷ್ಟು 326. ಹೀಗಾಗಿ, ಬಹುಮತದ ಕೊರತೆಯಿಂದಾಗಿ, ಮಸೂದೆಯನ್ನು 28 ಮತಗಳಿಂದ ಸೋಲಿಸಲಾಗಿದೆ.

ತನ್ನ 11 ವರ್ಷಗಳ ಆಡಳಿತದಲ್ಲಿ ಮೋದಿ ಸರ್ಕಾರವು ಸದನದಲ್ಲಿ ಮಸೂದೆಯನ್ನು ಅಂಗೀಕರಿಸುವಲ್ಲಿ ವಿಫಲವಾಗಿರುವುದು ಇದೇ ಮೊದಲು.

ಇದಕ್ಕೂ ಮೊದಲು, ಅಮಿತ್ ಶಾ ಒಂದು ಗಂಟೆ ಭಾಷಣ ಮಾಡಿ, ಈ ಮಸೂದೆಗಳನ್ನು ಅಂಗೀಕರಿಸದಿದ್ದರೆ, ವಿರೋಧ ಪಕ್ಷವೇ ಜವಾಬ್ದಾರವಾಗಿರುತ್ತದೆ ಎಂದು ಹೇಳಿದರು. ವಿರೋಧ ಪಕ್ಷವು ಮತ ​​ಚಲಾಯಿಸದಿದ್ದಾರೆ.

ಈ ತಿದ್ದುಪಡಿ ಮಾಡಿದ ಮಸೂದೆಗಳನ್ನು ಲೋಕಸಭೆಯಲ್ಲಿ 21 ಗಂಟೆಗಳ ಕಾಲ ಚರ್ಚಿಸಲಾಯಿತು. 56 ಮಹಿಳೆಯರು ಸೇರಿದಂತೆ ಒಟ್ಟು 130 ಸಂಸದರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕ್ಷೇತ್ರ ವಿಂಗಡನೆ ಬದಿಗಿಟ್ಟು ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದರೆ ಬೆಂಬಲಿಸುವುದಾಗಿ ವಿಪಕ್ಷಗಳು ಹೇಳಿದ್ದವಾದ್ರೂ, ಮೋದಿ ಸರ್ಕಾರ ಪಟ್ಟುಬಿಡದ ಕಾರಣ ಹಿನ್ನಡೆ ಅನುಭವಿಸಿದೆ.

ರಾಜಕೀಯ

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ (Women's reservation Bill) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

[ccc_my_favorite_select_button post_id="121067"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!