ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

General Process of Constituency Redistribution: R. Ashoka

ಬೆಂಗಳೂರು: ನಾರಿ ಶಕ್ತಿ ವಂದನಾ ಅಧಿನಿಯಮವನ್ನು ವಿರೋಧಿಸುವ ಮೂಲಕ ಕಾಂಗ್ರೆಸ್‌ ತನ್ನ ಮಹಿಳಾ ವಿರೋಧಿ ನಿಲುವನ್ನು ಸ್ಪಷ್ಟಪಡಿಸಿದೆ. ಇದನ್ನು ದೇಶದ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ. ಆದ್ದರಿಂದ ಇನ್ನು ಕಾಂಗ್ರೆಸ್‌ನ ಮಹಿಳಾ ಘಟಕವನ್ನು ರದ್ದು ಮಾಡುವುದು ಸೂಕ್ತ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಮಹಿಳೆಯರಿಗೆ ಸಂವಿಧಾನದತ್ತವಾದ ಹಕ್ಕನ್ನು ನೀಡುವ ನಾರಿ ಶಕ್ತಿ ವಂದನಾ ಅಧಿನಿಯಮ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತಂದರೂ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಸೋಲಿಸಿವೆ. ಮಹಿಳಾ ಸಬಲೀಕರಣದ ಮಸೂದೆ ವಿಫಲವಾಗಿರುವುದು ವಿರೋಧ ಪಕ್ಷಗಳ ಪಿತೂರಿ, ನಿರ್ಲಕ್ಷ್ಯ ಹಾಗೂ ಮಹಿಳಾ ವಿರೋಧಿ ನಿಲುವಿನ ಸ್ಪಷ್ಟ ಸಂಕೇತ.

ಮಹಿಳೆಯರ ಹಕ್ಕುಗಳ ಬಗ್ಗೆ ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕರು ದೊಡ್ಡ ಭಾಷಣಗಳನ್ನು ಮಾಡುತ್ತಾರೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಸೋತಿದ್ದಾರೆ. ಈ ಮಸೂದೆಗೆ ಮತ ನೀಡಿಲ್ಲವೆಂದರೆ ಕಾಂಗ್ರೆಸ್‌ನ ಮಹಿಳಾ ಘಟಕವನ್ನು ರದ್ದು ಮಾಡುವುದು ಸೂಕ್ತ. ಮಹಿಳಾ ಮುಖಂಡರು ಶಾಸನಸಭೆಗೆ ಹೋಗಬಹುದೆಂದು ಕನಸು ಕಂಡಿದ್ದರು. ಮಹಿಳೆಯರ ಹಕ್ಕನ್ನು ನಿರ್ಲಕ್ಷಿಸುವ ಕಾಂಗ್ರೆಸ್‌ ಸರ್ಕಾರವನ್ನು ಜನರು ಕ್ಷಮಿಸುವುದಿಲ್ಲ. ಕಾಂಗ್ರೆಸ್‌ಗೆ ಮಹಿಳೆಯರು ಎಂದರೆ ಕೇವಲ ಮತ ನೀಡುವವರಾಗಿದ್ದಾರೆ ಎಂದು ಟೀಕಿಸಿದರು.

60 ವರ್ಷ ಆಡಳಿತ ನಡೆಸಿದ ನೆಹರು, ಇಂದಿರಾಗಾಂಧಿ ಮಹಿಳಾ ಮೀಸಲು ತರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಮಸೂದೆ ತಂದಾಗ ಅದನ್ನು ವಿರೋಧಿಸಿ ಕಾಂಗ್ರೆಸ್‌ನವರು ಮಹಿಳೆಯರಿಗೆ ದ್ರೋಹ ಮಾಡಿದ್ದಾರೆ. ಮಹಿಳಾ ವಿರೋಧಿ ಭಾವನೆ ಕಾಂಗ್ರೆಸ್‌ನ ರಕ್ತದಲ್ಲೇ ಇದೆ.

ಮಹಿಳೆಯರಿಗೆ 2,000 ರೂ. ಹಾಗೂ ಉಚಿತ ಬಸ್‌ ನೀಡಿದರೆ ಸಾಕು, ಅವರಿಗೆ ರಾಜಕೀಯ ಪ್ರಾತಿನಿಧ್ಯ ಬೇಡ ಎಂದು ಕಾಂಗ್ರೆಸ್‌ ಹಾಗೂ ಮಿತ್ರಪಕ್ಷಗಳು ತೀರ್ಮಾನಿಸಿದೆ. ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಹಣ ಕೊಟ್ಟು ಮತ ಪಡೆದರೆ ಸಾಕು ಎಂದು ಅವರು ಅಂದುಕೊಂಡಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಇವರೆಲ್ಲರಿಗೂ ಪಾಠ ಕಲಿಸುತ್ತಾರೆ ಎಂದರು.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ ಬಾಯಿಗೆ ಬಟ್ಟೆ ತುರುಕಿಕೊಂಡಿದ್ದ ಕಾಂಗ್ರೆಸ್‌ನವರು ಈಗ ಮಾತ್ರ ವಿರೋಧಿಸುತ್ತಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಅದನ್ನು ಕೇಂದ್ರ ಸರ್ಕಾರ ಮಾಡಿದೆ. ಮಹಿಳೆಯರು ಇದನ್ನು ವಿರೋಧಿಸಿ ಕಾಂಗ್ರೆಸ್‌ಗೆ ಹಾದಿಬೀದಿಗಳಲ್ಲಿ ಪ್ರಶ್ನೆ ಮಾಡಬೇಕು. ಕಾಂಗ್ರೆಸ್‌ನ್ನು ದೇಶದಿಂದ ಓಡಿಸುವ ಕೆಲಸವನ್ನು ಮಹಿಳೆಯರು ಮಾಡಲಿದ್ದಾರೆ. ಹಿಂದೆ ತ್ರಿವಳಿ ತಲಾಖ್‌ ರದ್ದು ಮಾಡಿದಾಗಲೂ ಕಾಂಗ್ರೆಸ್‌ ವಿರೋಧ ಮಾಡಿತ್ತು. ಮಹಿಳೆಯರ ಪಾಲಿಗೆ ಇದು ಕರಾಳ ದಿನ ಎಂದರು.

ಇದನ್ನು ಚುನಾವಣೆಯ ಲಾಭವಾಗಿ ಬಿಜೆಪಿ ಬಳಸಿಕೊಳ್ಳುತ್ತಿಲ್ಲ. ಮಸೂದೆಯನ್ನು ಬೆಂಬಲಿಸಿ ಅದರ ಕ್ರೆಡಿಟ್‌ ಅನ್ನು ಕಾಂಗ್ರೆಸ್‌ ಪಡೆಯಬಹುದಿತ್ತು. ಇನ್ನು ಮೂರು ವರ್ಷದಲ್ಲೇ ಇದು ಜಾರಿಯಾಗಲಿದೆ. ಆದರೆ ಕಳೆದ 60 ವರ್ಷದಿಂದ ಇದು ಜಾರಿಯಾಗಲೇ ಇಲ್ಲ ಎಂಬುದನ್ನು ಗಮನಿಸಬೇಕು. ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೂ ಸಂಸತ್‌ ಸ್ಥಾನಗಳು ಹೆಚ್ಚಲಿವೆ ಎಂದರು.

ಜಿಬಿಎ ರಚನೆಗೆ ಕಾಂಗ್ರೆಸ್‌ ಸರ್ಕಾರ ಯಾವ ಮಾನದಂಡ ಮಾಡಿದೆ? ಅಲ್ಲಿ ಕೂಡ 2011 ರ ಜನಗಣತಿಯನ್ನೇ ಪರಿಗಣಿಸಲಾಗಿದೆ. ಆದರೆ ಬಿಜೆಪಿ ಅದನ್ನು ಮಾನದಂಡವಾಗಿ ಪರಿಗಣಿಸಿದರೆ ಅದನ್ನು ವಿರೋಧಿಸುತ್ತಾರೆ ಎಂದರು.

ತೆರಿಗೆಗಳ ಹೊರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಬಳಿಕ ಕುತಂತ್ರಿ ಬುದ್ದಿ ತೋರಿಸಿದ್ದಾರೆ. ಗೃಹಬಳಕೆ ವಿದ್ಯುತ್‌ ದರವನ್ನು 65 ಪೈಸೆ ಹೆಚ್ಚಿಸಲಾಗಿದೆ. ಕಳೆದ ಸಲ 25 ಬೆಲೆ ಏರಿಕೆಗಳನ್ನು ಮಾಡಿ ಸುಮಾರು 65,000 ಕೋಟಿ ರೂ. ಹೆಚ್ಚುವರಿ ತೆರಿಗೆ ವಸೂಲಿ ಮಾಡಿದ್ದರು. ಜಿಬಿಎ ಚುನಾವಣೆಗೆ ಮುನ್ನ ಇನ್ನಷ್ಟು ತೆರಿಗೆಗಳ ಹೇರಿಕೆಯಾಗಲಿದೆ.

ನೌಕರರಿಗೆ ಸಂಬಳ ಕೊಡಲು ಕೂಡ ಸರ್ಕಾರದ ಬಳಿ ಹಣವಿಲ್ಲ. ಅನಾಥ ಮಕ್ಕಳಿಗೆ ಪ್ರೋತ್ಸಾಹಧನ, ಗುತ್ತಿಗೆದಾರರ ಬಿಲ್‌, ಅಂಗನವಾಡಿ ಸಹಾಯಕರ ಗೌರವಧನ ಹೆಚ್ಚಳ ಮೊದಲಾದವುಗಳಿಗೆ ಹಣವಿಲ್ಲ. 2,000 ರೂ. ನೀಡಿ 22,000 ರೂ. ವಸೂಲಿ ಮಾಡುತ್ತಾರೆ. ಇದರ ಬಗ್ಗೆ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಲೆಕ್ಕ ಕೊಡುತ್ತೇನೆ ಎಂದರು.

ಜಿಬಿಎ ಚುನಾವಣೆ ಗೆಲ್ಲುವುದಿಲ್ಲವೆಂದು ಕಾಂಗ್ರೆಸ್‌ಗೆ ಗೊತ್ತಾಗಿರುವುದರಿಂದಲೇ ಚುನಾವಣೆ ನಡೆಸುತ್ತಿಲ್ಲ. ಮಾರ್ಗಸೂಚಿ ದರ, ಕಸ ಶುಲ್ಕ, ಪ್ರಮಾಣಪತ್ರಗಳ ಶುಲ್ಕಗಳನ್ನು ಏರಿಸಲಾಗಿದೆ. ಆದ್ದರಿಂದಲೇ ಸೋಲುವ ಭಯ ಅವರಲ್ಲಿದೆ. ಸದ್ಯಕ್ಕಂತೂ ಚುನಾವಣೆ ಮಾಡುವುದಿಲ್ಲ ಎಂದರು.

ಮಾಜಿ ಸಚಿವ ವಿನಯ್‌ ಕುಲಕರ್ಣಿ ಮಾಡಿಸಿದ ಕೊಲೆ ಪ್ರಕರಣದಲ್ಲಿ, ಎಲ್ಲ ಸಾಕ್ಷಿಗಳು ಲಭ್ಯವಾಗಿವೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಲು ಎಲ್ಲ ಶಾಸಕರನ್ನು ಓಲೈಸುವ ಪ್ರಯತ್ನ ಮಾಡುತ್ತಿರುವುದರಿಂದ ಅವರಿಗೆ ಬೆಂಬಲಿಸಿ ಮಾತಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಬಂದ ತೀರ್ಪು ನ್ಯಾಯಸಮ್ಮತವಾಗಿದೆ. ರಾಜಕೀಯದಲ್ಲಿ ಕೊಲೆ ಮಾಡಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಈ ವಿಚಾರದಲ್ಲಿ ಎಲ್ಲ ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು ಎಂದರು.

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ಅವರಿಗೆ ಆಪ್ತರಾಗಿದ್ದ ನಾಗೇಂದ್ರ, ರಾಜಣ್ಣ ಮನೆಗೆ ಹೋಗಿದ್ದಾರೆ. ಈ ಜಮೀರ್‌ ಅಹ್ಮದ್‌ ಅವರ ಸರದಿ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲು ಪ್ಲಾನ್‌ ನಡೆದಿದೆ. ಅಬ್ದುಲ್‌ ಜಬ್ಬಾರ್‌ಗೆ ಈಗಾಗಲೇ ಗೇಟ್‌ಪಾಸ್‌ ಸಿಕ್ಕಿದೆ. ಸಿದ್ದರಾಮಯ್ಯನವರ ತಂಡದವರನ್ನು ಡಿ.ಕೆ.ಶಿವಕುಮಾರ್‌ ಹುಡುಕಿ ಹುಡುಕಿ ಟಾರ್ಗೆಟ್‌ ಮಾಡುತ್ತಿದ್ದಾರೆ.

ಸಿದ್ದರಾಮಯ್ಯನವರನ್ನು ಬೆಂಬಲಿಸಿದರೆ ಉಳಿಗಾಲವಿಲ್ಲ ಎಂಬ ಸಂದೇಶ ನೀಡಲಾಗುತ್ತಿದೆ. ಸಿದ್ದರಾಮಯ್ಯ ತಂಡದವರು ಸಣ್ಣ ಇಲಿಗಳನ್ನು ಹೊಡೆದರೆ, ಡಿ.ಕೆ.ಶಿವಕುಮಾರ್‌ ತಂಡ ದೊಡ್ಡ ಹುಲಿಗಳನ್ನು ಹೊಡೆಯುತ್ತಿದೆ ಎಂದು ವ್ಯಂಗ್ಯವಾಡಿದರು.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!