ದೊಡ್ಡಬಳ್ಳಾಪುರ: ಬೆಸ್ಕಾಂ ನಗರ ಉಪವಿಭಾಗದ ವ್ಯಾಪ್ತಿಯಲ್ಲಿ ಏಪ್ರಿಲ್ ತಿಂಗಳಲ್ಲಿ ವಿವಿಧ ವಿದ್ಯುತ್ (Power) ಉಪ-ಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಫೀಡರ್ಗಳ ನಿರ್ವಹಣಾ ಕಾರ್ಯ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಏಪ್ರಿಲ್ 19, ಏಪ್ರಿಲ್ 21, ಏಪ್ರಿಲ್ 23 ಹಾಗೂ ಏಪ್ರಿಲ್ 26 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಪೂರೈಕೆ ವ್ಯತ್ಯಯವಾಗುವ ಪ್ರದೇಶಗಳ ವಿವರ ಈ ಪಟ್ಟಿಯಲ್ಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ನಗರ ಉಪವಿಭಾಗದ ಕಾರ್ಯನಿರ್ವಾಯಕ ಎಂಜಿನಿಯರ್ ವಿನಯ್ ಕುಮಾರ್ ತಿಳಿಸಿದ್ದಾರೆ.
ಏಪ್ರಿಲ್ 19 ರಂದು ಗಜಲ್ ಸಂಭ್ರಮ ವಾಚನ ಮತ್ತು ಗಾಯನ
ದೊಡ್ಡಬಳ್ಳಾಪುರ: ಡಾ.ಡಿ.ಆರ್.ನಾಗರಾಜ್ ಬಳಗ ಹಾಗೂ ಬೆಂಗಳೂರಿನ ಕರ್ನಾಟಕ ಗಜಲ್ ಅಕಾಡಮಿ ಸಹಯೋಗದಲ್ಲಿ ಗಜಲ್ ಸಂಭ್ರಮ ವಾಚನ ಮತ್ತು ಗಾಯನ ಕಾರ್ಯಕ್ರಮ ಏಪ್ರಿಲ್ 19 ರಂದು ಬೆಳಿಗ್ಗೆ 10.30ಕ್ಕೆ ನಗರದ ಹೊರವಲಯದ ನಂದಿ ಮೋರಿ ಸಮೀಪದ ಮುದ್ದನಾಯಕನಪಾಳ್ಯದ ಕಲಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಡಾ.ಡಿ.ಆರ್.ನಾಗರಾಜ್ ಬಳಗದ ಪ್ರಕಾಶ್ ಮಂಟೇದ ವಹಿಸಲಿದ್ದಾರೆ.
ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಕರ್ನಾಟಕ ಗಜಲ್ ಅಕಾಡಮಿ ಅಧ್ಯಕ್ಷ ರಂಗಸ್ವಾಮಿ ಸಿದ್ದಯ್ಯ ಭಾಗವಹಿಸಲಿದ್ದಾರೆ.
