ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

We have joined hands with NDA as an ally. We have not merged our ideology: Nikhil Kumaraswamy

ಚಿಕ್ಕಮಗಳೂರು: ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡಿ ಅವರು, ಬಿಜೆಪಿ ಜೆಡಿಎಸ್ ಜತೆ ಮೈತ್ರಿ ಆಗಿರುವುದಕ್ಕೆ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಅವರು ; ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ಆದರೆ ನಮ್ಮ ಸಿದ್ದಾಂತವನ್ನ ಯಾರ ಜೊತೆಗೆ ಮರ್ಜ್ ಮಾಡಿಲ್ಲ. ನಮ್ಮದು ಬೇರೆ ರಾಜಕೀಯ ಪಕ್ಷವಾಗಿದೆ ಎಂದು ಹೇಳಿದರು.

ಜೆಡಿಎಸ್ ಧರ್ಮ ,ಜಾತಿ‌, ಸಮುದಾಯದ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ

ಜೆಡಿಎಸ್ ಸರ್ವ ಜನಾಂಗದ ಶಾಂತಿಯ ತೋಟದ ಬಗ್ಗೆ ಪರಿಕಲ್ಪನೆ ಇಟ್ಟಿರುವುದನ್ನ ನೋಡಿದ್ದೀರಾ. ಯಾವುದೇ ಧರ್ಮ ,ಜಾತಿ‌, ಸಮುದಾಯದ ಆಧಾರದ ಮೇಲೆ ರಾಜಕಾರಣ ಮಾಡಿಕೊಂಡು ಬಂದಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡುವ ಕೆಲಸವನ್ನು ಪಕ್ಷ ಮಾಡಿದೆ ಇದನ್ನ ಮುಂದುವರಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಆನೆ ದಾಳಿಗೆ ಶೀಘ್ರದಲ್ಲಿಯೇ ಶಾಶ್ವತ ಪರಿಹಾರ

ಆನೆ ದಾಳಿಯಿಂದ ಆಗುತ್ತಿರುವ ತೀವ್ರ ಹಾನಿ ಮತ್ತು ಪ್ರಾಣಾಪಾಯದ ಬಗ್ಗೆ ಕುಮಾರಣ್ಣ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಶಾಶ್ವತ ಪರಿಹಾರಕ್ಕಾಗಿ ಚರ್ಚಿಸಿದ್ದಾರೆ.ತ್ವರಿತವಾಗಿ ಕ್ರಮ ಕೈಗೊಳ್ಳಲು ಚರ್ಚಿಸುತ್ತಿದ್ದಾರೆ ಎಂದು ನಿಖಿಲ್ ಅವರು ಹೇಳಿದರು.

ಜಮೀರ್ ಅಹಮದ್ ಖಾನ್ ಜೆಡಿಎಸ್ ಬರುವ ವಿಚಾರ; ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ

ಸಚಿವ ಜಮೀರ್ ಅಹಮದ್ ಖಾನ್ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಪ್ರಕ್ರಿಯಿಸಿದ ಅವರು, ಪಕ್ಷವನ್ನ ಯಾವ ಸಂದರ್ಭದಲ್ಲಿ ಯಾವ ರೀತಿ ಬಿಟ್ಟು ಹೋದ್ರು, ಹೋಗುವಾಗ ಸಾರ್ವಜನಿಕ ವಲಯದಲ್ಲಿ ಯಾವ ಯಾವ ರೀತಿ ಚರ್ಚೆ ಮಾಡಿದ್ದಾರೆ, ಎಲ್ಲವನ್ನು ಪರಿಗಣಿಸಿ ಅಲ್ಲಿಂದ ಪಕ್ಷದ ವರಿಷ್ಠರು ಯಾರನ್ನ ಕರೆಸುಕೊಳ್ಳಬೇಕು ಯಾರನ್ನು ದೂರ ಇಡಬೇಕು ಅನ್ನುವುದನ್ನು ತೀರ್ಮಾನಿಸುತ್ತಾರೆ ಎಂದು ಅವರು.

ಜಿಲ್ಲೆಯ ಪ್ರತಿ ಕ್ಷೇತ್ರ , ಪ್ರತಿ ತಾಲೂಕುಗಳಿಗೂ ತೆರಳಿ ಸಂಘಟನೆ ಮಾಡುತ್ತೇನೆ

ಚಿಕ್ಕಮಗಳೂರು ಜಿಲ್ಲೆಯ ಪ್ರತಿ ಕ್ಷೇತ್ರ , ಪ್ರತಿ ತಾಲೂಕುಗಳಿಗೂ ತೆರಳಿ ಸಂಘಟನೆ ಮಾಡುತ್ತೇನೆ. ಕಡೂರು ಕ್ಷೇತ್ರದಲ್ಲಿ ನಿರಂತರವಾಗಿ ಜೆಡಿಎಸ್ ಗೆಲುವಾಗಿದೆ. ನಮ್ಮ ಪಕ್ಷಕ್ಕೆ ಜಿಲ್ಲೆಯಲ್ಲಿ ಒಂದು ಬಲವಿದೆ. ಪಕ್ಷಕ್ಕೆ ಹೊಸ ವೇಗ ನೀಡಬೇಕು ಎಂದು ಹೋರಾಟ ಮಾಡುತ್ತಿದ್ದೇವೆ ಎಂದು ನಿಖಿಲ್ ಅವರು ತಿಳಿಸಿದರು.

ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ವೋಟ್ ಬ್ಯಾಂಕ್ ಆಗಿ ಮಾತ್ರ ಉಪಯೋಗಿಸಿಕೊಳ್ಳುತ್ತಿದೆ

ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ಕಡೆಗಣನೆ ವಿಚಾರಕ್ಕೆ ಮಾತನಾಡಿದ ಅವರು,ಕಾಂಗ್ರೆಸ್ ನಲ್ಲಿ ಅಹಿಂದಾ ನಾಯಕರ ರಾಜಕೀಯ ಭವಿಷ್ಯ ಎಲ್ಲಿಗೆ ಹೋಗುತ್ತೆ ಎಂಬ ಆತಂಕ ನನಗಿದೆ. ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ವೋಟ್ ಬ್ಯಾಂಕ್ ಆಗಿ ಮಾತ್ರ ಉಪಯೋಗಿಸಿಕೊಳ್ಳುತ್ತಿದೆ. ಅಲ್ಪಸಂಖ್ಯಾತರನ್ನ ಕಾಂಗ್ರೆಸ್
ಯಾವತ್ತೂ ಬೆಳೆಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!