ದೊಡ್ಡಬಳ್ಳಾಪುರ; ಬಸವ ಜಯಂತಿ ಆಚರಣೆ

Basava Jayanti celebration

ದೊಡ್ಡಬಳ್ಳಾಪುರ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿ (Basava Jayanti celebration) ಕಾರ್ಯುಕ್ರಮವನ್ನು ಆಚರಿಸಲಾಯಿತು.

ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ತಹಸೀಲ್ದಾರ್‌ ಮಲ್ಲಪ್ಪ.ಕೆ.ಯರಗೋಳ ಮಾತನಾಡಿ, 12 ನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ತಮ್ಮ ವಚನಗಳ ಮೂಲಕ ಬಸವಣ್ಣನವರು. ಸಮಾಜದಲ್ಲಿ ಸುಧಾರಣೆಗಳನ್ನು ತಂದರು.

ಮಹಾ ಮಾನವತವಾದಿಯಾದ ಬಸವಣ್ಣನವರ ಚಿಂತನೆಗಳು ಉತ್ತಮ ಸಮಾಜಕ್ಕೆ ಅಡಿಪಾಯವಾಗಿವೆ. ಬಸವಣ್ಣನವರ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ ಮೊದಲಾದ ಹಿತನುಡಿಗಳು ಸದಾ ಕಾಲಕ್ಕೂ ಪ್ರಸ್ತುತವಾಗಿವೆ. ಬಸವಣ್ಣನವರ ತತ್ವಾದರ್ಶಗಳನ್ನು ಎಲ್ಲರೂ ಅರ್ಥ ಮಾಡಿಕೊಂಡರೆ ಇಂದು ಯಾವುದೇ ಸಂಘರ್ಷಗಳು, ಸಮಾಜ ಘಾತಕ ಕೃತ್ಯಗಳು ಸಂಭವಿಸುವುದಿಲ್ಲ. ಅವರ ತತ್ವ, ಆದರ್ಶಗಳು, ಚಿಂತನೆಗಳು ನಮಗೆಲ್ಲಾ ಮಾದರಿಯಾಗಬೇಕಿದೆ ಎಂದರು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಾದ ಸೋಮರುದ್ರ ಶರ್ಮ, ಬಿ.ವಿ.ಬಸವರಾಜು, ಶಿವಾನಂದಪ್ಪ, ಆರ್.ಎಸ್‌.ಮಂಜುನಾಥ್‌, ಕೆ.ಎಚ್‌.ಪಾರ್ವತಮ್ಮ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯಿತ ಸಂಘದ ತಾಲೂಕು ಅಧ್ಯಕ್ಷ ಎಸ್.ಜಿ.ಸೋಮರುದ್ರಶರ್ಮ, ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಸುಜಯ್‌ ಕುಮಾರ್‌.ಎಂ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಷಾದ್ರಿ, ಇನ್ಸ್ಪೆಕ್ಟರ್‌ ಅಮರೇಶ್‌ ಗೌಡ, ನಗರಸಭೆ ಎಇಇ ಈರಣ್ಣ, ಸೇರಿದಂತೆ ವೀರಶೈವ ಲಿಂಗಾಯಿತ ಸಮುದಾಯದ ಮುಖಂಡರು, ವಿವಿಧ ಸಂಘಟನೆಗಳು ಕಾರ್ಯಕರ್ತರು, ತಾಲೂಕು ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.

ತೂಬಗೆರೆಯಲ್ಲಿ ಬಸವ ಜಯಂತಿ ಆಚರಣೆ

ದೊಡ್ಡಬಳ್ಳಾಪುರ; ಬಸವ ಜಯಂತಿ ಆಚರಣೆ

ತೂಬಗೆರೆ: ಜಗಜ್ಯೋತಿ ಬಸವಣ್ಣ ಜಾತ್ಯತೀತ ನಾಯಕ. 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪನೆ ಮಾಡುವುದರ ಮೂಲಕ ಎಲ್ಲಾ ವರ್ಗದ ಜನರಿಗೆ ಸಮಾನ ಅವಕಾಶ ನೀಡಿದ ಮಹಾನಾಯಕ ಬಸವಣ್ಣ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ತೂಬಗೆರೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಸವಣ್ಣನವರ ತತ್ವ-ಆದರ್ಶಗಳನ್ನು ಪ್ರತಿಯೊಂದು ಸಮಾಜ ಪಾಲನೆ ಮಾಡುತ್ತಿರುವುದರಿಂದಲೇ ನಮ್ಮ ದೇಶ ಜಾತ್ಯತೀತ ಪಥದಲ್ಲಿ ಹೆಮ್ಮರವಾಗಿ ಬೆಳೆದಿದೆ,” ಎಂದರು.

ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ, “ಶಿವನ ವಾಹನ ನಂದಿ ಹುಟ್ಟಿದ ದಿನವೇ ಬಸವ ಜಯಂತಿ, ಆದ್ದರಿಂದ ಈ ದಿನ ಹಸು-ಎತ್ತುಗಳನ್ನು ಪೂಜಿಸಿ ವಿಶೇಷ ಭಕ್ಷಗಳನ್ನು ನೀಡುವುದರ ಮೂಲಕ ಆಚರಿಸಬೇಕು ಎಂದು ಬಸವ ತತ್ವ ವಿರೋಧಿಗಳು ಜನಸಾಮಾನ್ಯರಲ್ಲಿ ಮೌಢ್ಯ ಬಿತ್ತಿದ್ದಾರೆ. ಬಸವಣ್ಣನವರ ವಿಚಾರಧಾರೆಗಳು ತಲುಪಬಾರದು ಎಂಬ ವ್ಯವಸ್ಥಿತ ಹುನ್ನಾರ ಈ ಮೌಢ್ಯದ ಹಿಂದಿದೆ.

ನಿಜವಾದ ಬಸವ ಜಯಂತಿ ಎಂದರೆ ತಮ್ಮ ಮನೆಯ ಹಸುಗಳು, ಎತ್ತುಗಳನ್ನು ಪೂಜಿಸುವುದರ ಜೊತೆಗೆ, ಮನುಷ್ಯ ಮನುಷ್ಯರ ನಡುವೆ ವರ್ಣ, ಜಾತಿ, ಲಿಂಗ ಭೇದ ಬೇರೂರಿದ್ದ ಕಾಲದಲ್ಲಿ ಸಮಾನತೆ, ಸಹೋದರತೆ ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವದ ಮೂಲಕ ಅನುಷ್ಠಾನಗೊಳಿಸಲು ಮುಂದಾದ ಮಹಾ ಮಾನವತಾವಾದಿ ಬಸವಣ್ಣ ಮತ್ತು ಅವರ ವಿಚಾರಧಾರೆಗಳನ್ನು ನೆನೆಯುವ ದಿನವಾಗಬೇಕು. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಮೌಢ್ಯ ತೊಲಗಿಸಿ ವೈಚಾರಿಕತೆ ಬೆಳೆಸಿಕೊಂಡು ಇತರರಲ್ಲಿ ಅದನ್ನು ಮೂಡಿಸುವುದೇ ಬಸವಣ್ಣನವರಿಗೆ ನಾವು ಸಲ್ಲಿಸಬಹುದಾದ ದೊಡ್ಡ ಗೌರವ,” ಎಂದು ಅಭಿಪ್ರಾಯಪಟ್ಟರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ವಿಶೇಷ ಮಂಟಪದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಪ್ರಸಾದ ವಿತರಣೆ ಮಾಡಲಾಯಿತು.

ವಾದ್ಯಮೇಳದೊಂದಿಗೆ ಆರತಿ ಹಿಡಿದ ಮಹಿಳೆಯರು ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರ ಸ್ವಾಮಿಗೆ ಆರತಿ ಸಲ್ಲಿಸಿದರು. ನೂರಾರು ಭಕ್ತರು ಬಸವೇಶ್ವರ ದೇವಾಲಯದಲ್ಲಿ ಬಸವಮೂರ್ತಿಗೆ ವಿಶೇಷ ಅಲಂಕಾರಗಳೊಂದಿಗೆ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು. ಆಗಮಿಸಿದ ಭಕ್ತರಿಗೆ ಪಾನಕ ಹಾಗೂ ಕೋಸಂಬರಿ ವಿತರಿಸಲಾಯಿತು.

ವಿಶೇಷ ಪೂಜಾ ಕಾರ್ಯಕ್ರಮಗಳ ಬಳಿಕ ಸಂಜೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಯಿತು. ವೀರಗಾಸೆ ಸೇರಿದಂತೆ ವಿವಿಧ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ್, ತಾಲೂಕು ಸೊಸೈಟಿ ನಿರ್ದೇಶಕ ಪುರುಷೋತ್ತಮ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಎಚ್.ಎ., ಜೆಡಿಎಸ್ ಹೋಬಳಿ ಅಧ್ಯಕ್ಷ ಜಗನ್ನಾಥ್, ಬಿಜೆಪಿ ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಮುಖಂಡರಾದ ಬಚ್ಚಹಳ್ಳಿ ನಾಗರಾಜು, ಮುದ್ದಣ್ಣ, ನಾಗೇನಹಳ್ಳಿ ನಾಗರಾಜು, ಹಳ್ಳಿ ರೈತ ಅಂಬರೀಶ್, ಸ್ಥಳೀಯ ಮುಖಂಡರಾದ ವೆಂಕಟೇಶ್ ಟಿ.ವಿ., ಮುನಿಕೃಷ್ಣಪ್ಪ, ಕನಕದಾಸ, ಸುಬ್ರಹ್ಮಣ್ಯ, ಗಂಗರಾಜು, ಶ್ರೀಧರ, ನಿವೃತ್ತ ದೈಹಿಕ ಶಿಕ್ಷಕ ವಿಶ್ವನಾಥ್ ಗೌಡರ್, ಎಸ್ ಎಲ್ ಆರ್ ಎಸ್ ಶಾಲೆ ಮುಖ್ಯ ಶಿಕ್ಷಕ ನಾಗರಾಜು, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಸದಾನಂದಯ್ಯ, ಚಂದ್ರು, ಉದಯ ಆರಾಧ್ಯ ಉಪಸ್ಥಿತರಿದ್ದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!