ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

Cylinder explosion.. Houses completely burnt to ashes

ತಿಪಟೂರು: ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

ತಾಲೂಕಿನ ನೋಣವಿನಕೆರೆಯ ಮಾಟನಹಳ್ಳಿ ಗ್ರಾಮದಲ್ಲಿ ಈ ಅವಘಡ ನಡೆದಿದ್ದು, ಗ್ಯಾಸ್ ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ವೆಂಕಟರಮಣಗೌಡ ಮತ್ತು ಸಣ್ಣತಿಮ್ಮೇಗೌಡಗೆ ಸೇರಿದ ಮನೆಗಳು ಬೆಂಕಿಗೆ ಆಹುತಿಯಾಗಿದ್ದು,15 ಸಾವಿರ ಕೊಬ್ಬರಿ, ಲಕ್ಷಾಂತರ ರೂಪಾಯಿ ನಗದು, ಚಿನ್ನಾಭರಣ ಹಾಗೂ ಆಹಾರ ಧಾನ್ಯಗಳು ಬೆಂಕಿಗಾಹುತಿಯಾಗಿದೆ ಎಂದು ವರದಿಯಾಗಿದೆ.

ಇನ್ನು, ಅಗ್ನಿಶಾಮಕ ದಳದ ಸಿಬ್ಬಂದಿ ವಿಷಯ ತಿಳಿದು ಸ್ಥಳಕ್ಕಾಗಮಿಸುವ ವೇಳೆಗೆ ಎಲ್ಲವೂ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತಂತೆ ನೋಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ. ಕೆ. ಸುಧಾಕರ್ ಮನವಿ

MP Dr. K. Sudhakar appeals to the Center to come to the aid of pink onion growers
MP Dr. K. Sudhakar appeals to the Center to come to the aid of pink onion growers

ನವದೆಹಲಿ: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಪ್ರಮುಖ ಬೆಳೆಯಾದ, ಜಿ.ಐ. (GI) ಟ್ಯಾಗ್ ಹೊಂದಿರುವ ‘ಬೆಂಗಳೂರು ಗುಲಾಬಿ ಈರುಳ್ಳಿ’ ಬೆಳೆಗಾರರು ಎದುರಿಸುತ್ತಿರುವ ತೀವ್ರ ಮಾರುಕಟ್ಟೆ ಬಿಕ್ಕಟ್ಟಿನ ಕುರಿತು ಸಂಸದ ಡಾ. ಕೆ. ಸುಧಾಕರ್ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ಕುಸಿದ ಬೆಲೆ – ಸಂಕಷ್ಟದಲ್ಲಿ ಅನ್ನದಾತ

ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಭೌಗೋಳಿಕ ರಾಜಕೀಯ ಸಂಘರ್ಷಗಳಿಂದಾಗಿ ಪೂರೈಕೆ ಸರಪಳಿಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ರಫ್ತು ಆಧಾರಿತ ಬೆಳೆಯ ಮಾರುಕಟ್ಟೆ ಕುಸಿದಿದೆ. ಹಿಂದೆ ಪ್ರತಿ ಚೀಲಕ್ಕೆ ₹1,200 ರಿಂದ ₹1,500 ಇರುತ್ತಿದ್ದ ಬೆಲೆ ಈಗ ₹100ಕ್ಕಿಂತ ಕೆಳಕ್ಕೆ ಇಳಿದಿರುವುದು ರೈತರನ್ನು ತೀವ್ರ ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. ಮಾರಾಟವಾಗದ ಈರುಳ್ಳಿ ರಾಶಿಗಳು ಮಳೆಯಿಂದ ಕೊಳೆಯುವ ಭೀತಿಯಲ್ಲಿದ್ದು, ಪರಿಸ್ಥಿತಿ ಗಂಭೀರವಾಗಿದೆ.

ಕೇಂದ್ರ ಸಚಿವರಿಗೆ ಪತ್ರ

ಈ ಬಿಕ್ಕಟ್ಟನ್ನು ಪರಿಹರಿಸಲು ಡಾ. ಸುಧಾಕರ್ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ರೈತರು ಅನಿವಾರ್ಯವಾಗಿ ಸಂಕಷ್ಟದ ಮಾರಾಟಕ್ಕೆ (Distress Sale) ಮುಂದಾಗುವುದನ್ನು ತಪ್ಪಿಸಲು ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಅಥವಾ ನೇರ ಖರೀದಿ ಪ್ರಕ್ರಿಯೆ ಆರಂಭಿಸಬೇಕೆಂದು ಅವರು ಕೋರಿದ್ದಾರೆ.

ಅಲ್ಲದೆ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕ ಮನವಿ ಸಲ್ಲಿಸಿರುವ ಅವರು, ಪರ್ಯಾಯ ರಫ್ತು ಮಾರುಕಟ್ಟೆಗಳನ್ನು ಹುಡುಕುವುದು, ರಫ್ತು ಉತ್ತೇಜಕ ಸೌಲಭ್ಯ ನೀಡುವುದು ಹಾಗೂ ಅಗತ್ಯವಿರುವ ಲಾಜಿಸ್ಟಿಕ್ಸ್ ನೆರವು ನೀಡುವ ಮೂಲಕ ಈ ಬೆಳೆಯ ಆರ್ಥಿಕ ಲಾಭದಾಯಕತೆಯನ್ನು ಕಾಪಾಡಬೇಕೆಂದು ವಿನಂತಿಸಿದ್ದಾರೆ.

ದೀರ್ಘಕಾಲೀನ ಪರಿಹಾರಕ್ಕೆ ಆಗ್ರಹ

ಕೇವಲ ತಾತ್ಕಾಲಿಕ ಕ್ರಮಗಳಷ್ಟೇ ಅಲ್ಲದೆ, ಪ್ರಧಾನ ಮಂತ್ರಿ ಕಿಸಾನ್ ಸಂಪದ ಯೋಜನೆಯಡಿ (PMKSY) ಈ ಭಾಗದಲ್ಲಿ ಈರುಳ್ಳಿ ನಿರ್ಜಲೀಕರಣ (Dehydration) ಮತ್ತು ಉಪ್ಪಿನಕಾಯಿ ತಯಾರಿಕಾ ಘಟಕಗಳಂತಹ ಸಂಸ್ಕರಣಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು. ಇದರಿಂದ ರೈತರು ಕೇವಲ ಹಸಿ ಈರುಳ್ಳಿಯ ರಫ್ತಿನ ಮೇಲೆ ಅವಲಂಬಿತವಾಗುವುದು ತಪ್ಪುತ್ತದೆ ಎಂದು ಸುಧಾಕರ್ ಸಲಹೆ ನೀಡಿದ್ದಾರೆ.

ನಮ್ಮ ಅನ್ನದಾತರ ಶ್ರಮಕ್ಕೆ ನ್ಯಾಯ ಸಿಗಬೇಕು ಮತ್ತು ಅವರ ಜೀವನೋಪಾಯಕ್ಕೆ ಧಕ್ಕೆಯಾಗಬಾರದು. ಕೇಂದ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿ, ಕೂಡಲೇ ಬೆಳೆಗಾರರ ರಕ್ಷಣೆಗೆ ಧಾವಿಸಲಿದೆ ಎಂಬ ವಿಶ್ವಾಸವನ್ನು ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಸಂಸತ್ ಆವರಣದಲ್ಲಿ ಬಸವ ಜಯಂತಿ: ಜಗಜ್ಯೋತಿ ಬಸವೇಶ್ವರರಿಗೆ ಪುಷ್ಪ ನಮನ ಅರ್ಪಿಸಿದ ಹೆಚ್.ಡಿ. ಕುಮಾರಸ್ವಾಮಿ

ಸಂಸತ್ ಆವರಣದಲ್ಲಿ ಬಸವ ಜಯಂತಿ: ಜಗಜ್ಯೋತಿ ಬಸವೇಶ್ವರರಿಗೆ ಪುಷ್ಪ ನಮನ ಅರ್ಪಿಸಿದ ಹೆಚ್.ಡಿ.

ಜಗಜ್ಯೋತಿ ಬಸವಣ್ಣನವರ ಸಂದೇಶಗಳು ಇಂದಿಗೂ ಎಂದಿಗೂ ಎಂದೆಂದಿಗೂ ನಮಗೆಲ್ಲರಿಗೂ ಅನುಕರಣೆಯ ಮತ್ತು ಪ್ರೇರಣದಾಯಕವೇ ಆಗಿವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಹೇಳಿದರು.

[ccc_my_favorite_select_button post_id="121164"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!