
ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

ಹೌದು ನಿನ್ನೆಯಷ್ಟೇ ಎಸ್.ನಾಗೇನಹಳ್ಳಿ ಗ್ರಾಮದ ಬೊಮ್ಮರಾಜುರವರ ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿರುವ ದುಷ್ಕರ್ಮಿಗಳು, ಮನೆಯಲ್ಲಿದ್ದ ಬೀರುಗಳನ್ನು ಒಡೆದು, ಚಿನ್ನಾಭರಣ ಮತ್ತು ಹಣ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ನಾಗೇನಹಳ್ಳಿಯಲ್ಲಿ ನಡೆದಿದೆ.

ಬೊಮ್ಮರಾಜು ಅವರ ಕೆಲಸದ ನಿಮಿತ್ತ ಹಾಗೂ ಮೆನೆಯವರು ತೋಟದ ಕೆಲಸಕ್ಕೆ ಹೋಗಿರುವಾಗ, ಮನೆಯ ಬಾಗಿಲಿನ ಬೀಗ ಮುರಿದು ಒಳ ನುಗ್ಗಿ, ಬೀರುವಿನಲ್ಲಿದ್ದ ಚಿನ್ನಾಭರಣಗಳು ಹಾಗೂ 1.39 ಲಕ್ಷ ರೂ ನಗದು ದೋಚಿ ಪರಾರಿಯಾಗಿದ್ದಾರೆ.
ಆಲಹಳ್ಳಿ ಮನೆ ಬೀಗ ಮುರಿದು ಕಳವು..!
ಮತ್ತೊಂದು ಪ್ರಕರಣದಲ್ಲಿ ಇಂದು ಆಲಹಳ್ಳಿಯ ಆಶಾ ನಾಗೇಶ್ ಎನ್ನುವವರು ಜಮೀನಿಗೆ ತೆರಳಿದ್ದ ವೇಳೆ ಮನೆ ಬೀಗ ಮುರಿದು, ಮನೆ ನುಗ್ಗಿರುವ ದುಷ್ಕರ್ಮಿಗಳು, ಒಡವೆ, ನಗದು ದೋಚಿ ಪರಾರಿಯಾಗಿದ್ದಾರೆ.
ಈ ವೇಳೆ ಸುಮಾರು ಒಂದೂವರೆ ಲಕ್ಷ ಮೌಲ್ಯದ, ಚಿನ್ನ, ಬೆಳ್ಳಿ ಹಾಗೂ ನಗದನ್ನು ದೋಚಿದ್ದಾರೆ.
ಚಿನ್ನದ ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು
ಇನ್ನೊಂದು ಪ್ರಕರಣದಲ್ಲಿ ವಾಕಿಂಗ್ ಗೆಂದು ತೆರಳಿದ್ದ ಮಹಿಳೆಯ ಹಿಂಬಾಲಿಸಿದ ದುಷ್ಕರ್ಮಿ, ಸುಮಾರು 69 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಸಿದು ಪರಾರಿಯಾಗಿರುವ ಘಟನೆ ತಾಲೂಕಿನ ಕೊನಘಟ್ಟದಲ್ಲಿ ಇಂದು ಮುಂಜಾನೆ ನಡೆದಿದೆ.
ಕೊನಘಟ್ಟ ಗ್ರಾಮದ ಗಾಯತ್ರಿ ಎನ್ನುವ ಮಹಿಳೆ ವಾಕಿಂಗ್‌ಗೆಂದು ಇಂದು ಬೆಳಗ್ಗೆ ತೆರಳುಚ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿ, ಮಾಂಗಲ್ಯ ಸರ ಕಸಿದು, ಮತ್ತೋರ್ವ ತಂದಿದ್ದ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
