ದೊಡ್ಡಬಳ್ಳಾಪುರ: ನಗರದ ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.


ಕಾರ್ಯಕ್ರಮದ ಅಂಗವಾಗಿವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ಭವನ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ. ಎಂ. ಹನುಮಂತರಾಯಪ್ಪ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ. ವಿ. ಲಕ್ಷ್ಮೀನಾರಾಯಣ, ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ಅನ್ನಪೂರ್ಣ ಜೆ. ವೈ. ಮಲ್ಲಪ್ಪ ಅವರು ಕಾರ್ಯಕ್ರಮದ ಮಹತ್ವವನ್ನು ವಿವರಿಸಿ ಮಾತನಾಡಿದರು.
ಟ್ರಸ್ಟ್‌ನ ಅಧ್ಯಕ್ಷ ಜೆ. ವೈ. ಸಿದ್ಧಲಿಂಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಶಿಕಲಾ ನಾಗರಾಜು, ಮಾಜಿ ಅಧ್ಯಕ್ಷ ಜೆ. ಎಸ್. ನಾಗಭೂಷಣ, ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತು ನಿರ್ದೇಶಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
