ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

Complaint against Prime Minister Modi

ನವದೆಹಲಿ: ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಟೀಕಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ಮೋದಿ ಅವರ ವಿಡಿಯೋ ವೈರಲ್ ಆಗುವ ಮೂಲಕ ಟ್ರೋಲ್ ಮಾಡಲಾಗುತ್ತಿದೆ.

ಪ್ರಧಾನಿ ಮೋದಿ ಅವರ ಭಾಷಣದಲ್ಲಿ ಅವರು ಕಾಂಗ್ರೆಸ್‌ನ ಹೆಸರನ್ನು ಪದೇ ಪದೇ ಹೇಳುತ್ತಿರುವುದನ್ನು ಮಾತ್ರವೇ ಕತ್ತರಿಸಿ ಪೋಣಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಅದರಲ್ಲಿ ಪ್ರಧಾನಿ ಮೋದಿ ತಮ್ಮ 60 ಸೆಕೆಂಡುಗಳ ಭಾಷಣದಲ್ಲಿ ಎಷ್ಟು ಬಾರಿ ಕಾಂಗ್ರೆಸ್‌ ಹೆಸರನ್ನು ಹೇಳಿದ್ದಾರೆ ಎಂದು ಬರೆಯಲಾಗಿದೆ. ಇದು ಎಲ್ಲೆಡೆ ವೈರಲ್ ಆಗುತ್ತಿದ್ದು ವಿರೋಧ ಪಕ್ಷಗಳಿಂದ ಭಾರೀ ಟೀಕೆಗೆ ಗ್ರಾಸವಾಗಿದೆ.

ಮಹಿಳಾ ಮೀಸಲಾತಿ ಸಂಬಂಧ ಪ್ರಧಾನಿ ಮೋದಿ ಅವರ ಭಾಷಣದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಾ ಆಕ್ರೋಶ ಹೊರಹಾಕಿದ್ದರು. ಪ್ರಧಾನಿಯವರ ಇಡೀ ಭಾಷಣ ರಾಜಕೀಯ ಪ್ರೇರಿತವಾಗಿತ್ತೇ ಹೊರತು, ಮಹಿಳೆಯರ ಸಬಲೀಕರಣದ ಬಗ್ಗೆ ಅವರಿಗೆ ನಿಜವಾದ ಕಾಳಜಿ ಇಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆಯ ವೈಫಲ್ಯದ ಬಗ್ಗೆ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬರೋಬ್ಬರಿ 59 ಬಾರಿ ಟೀಕಿಸಿದ್ದಾರೆ. ಆದರೆ, ದೇಶದ ಮಹಿಳೆಯರ ಹಕ್ಕುಗಳು ಮತ್ತು ಅವರ ಪ್ರಗತಿಯ ಬಗ್ಗೆ ಕೇವಲ ಬೆರಳೆಣಿಕೆಯಷ್ಟು ಬಾರಿ ಮಾತ್ರ ಉಲ್ಲೇಖಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದು ಬಿಜೆಪಿಯ ನಿಜವಾದ ಮುಖವನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ ನೀಡಬೇಕಾದ ಹಕ್ಕುಗಳ ಬಗ್ಗೆ ಮಾತನಾಡುವ ಬದಲು ಪ್ರತಿಪಕ್ಷಗಳನ್ನು ಗುರಿಪಡಿಸುವುದರಲ್ಲೇ ಪ್ರಧಾನಿ ಹೆಚ್ಚಿನ ಸಮಯ ಕಳೆದಿದ್ದಾರೆ. ಮಹಿಳಾ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ದಶಕಗಳಿಂದಲೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಾ ಬಂದಿದೆ. ಆದರೆ ಬಿಜೆಪಿ ಸರ್ಕಾರವು ಕೇವಲ ಪ್ರಚಾರಕ್ಕಾಗಿ ಮತ್ತು ರಾಜಕೀಯ ಲಾಭಕ್ಕಾಗಿ ಈ ವಿಷಯವನ್ನು ಬಳಸಿಕೊಳ್ಳುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

ಒಟ್ಟಾರೆಯಾಗಿ, ಮಹಿಳಾ ಬಿಲ್‌ ವಿಚಾರದಲ್ಲಿ ಸರ್ಕಾರದ ನಡವಳಿಕೆಯು ಮಹಿಳೆಯರಿಗೆ ಮಾಡುವ ದ್ರೋಹವಾಗಿದ್ದು, ಪ್ರಧಾನಿಯವರ ಭಾಷಣವು ಕೇವಲ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿದಂತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ವಿರುದ್ದ ದೂರು

ತಿರುವನಂತಪುರಂ: ಚುನಾವಣೆ ನೀತಿಸಂಹಿತೆ ಜಾರಿಯ ನಡುವೆಯೂ ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ಶನಿವಾರ ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ ಪಕ್ಷಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರತ್ಯೇಕ ದೂರು ನೀಡಿವೆ.

ಕೇರಳದ ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಅನಿಲ್ ಅಕ್ಕರ ಮತ್ತು ಸಿಪಿಎಂ ರಾಜ್ಯಸಭಾ ಸದಸ್ಯ ಪಿ. ಸಂತೋಷ್ ಕುಮಾ‌ರ್ ದೂರು ನೀಡಿದ್ದಾರೆ. ಕೇಂದ್ರದ ಮಹಿಳಾ ಮೀಸಲು ವಿಧೇಯಕಕ್ಕೆ ಸಂಸತ್ತಿನಲ್ಲಿ ಸೋಲಾಗಿರುವುದನ್ನು ಖಂಡಿಸಿ ಪ್ರತಿಪಕ್ಷಗಳ ವಿರುದ್ಧ ದೂರದರ್ಶನ ಭಾಷಣದಲ್ಲಿ ಮೋದಿ ಹರಿಹಾಯ್ದಿದ್ದರು.

ತಮಿಳುನಾಡು, ಬಂಗಾಳ ಚುನಾವಣೆ ನಡೆಯುತ್ತಿರುವಾಗ, ತಮ್ಮ ಪಕ್ಷದ ಪರ ಭಾಷಣಕ್ಕಾಗಿ ಸರಕಾರಿ ಸ್ವಾಮ್ಯದ ದೂರದರ್ಶನವನ್ನು ಮೋದಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಧಿಕಾರದಲ್ಲಿರುವ ಪಕ್ಷವು ಸರಕಾರಿ ಮಾಧ್ಯಮಗಳನ್ನು ರಾಜಕೀಯ ಪ್ರಚಾರಕ್ಕಾಗಿ ಬಳಸುವಂತಿಲ್ಲ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!