ದೊಡ್ಡಬಳ್ಳಾಪುರ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ, ಏ.24 ಸಂಜೆ 5.00 ಗಂಟೆಯ ಒಳಗೆ ಸಲ್ಲಿಸಲು ತಿಳಿಸಿದೆ.

ಆಕ್ಷೇಪಣೆಗಳನ್ನು ಆನ್‌ಲೈನ್ ಮೂಲಕ ಹಾಗೂ ಖುದ್ದಾಗಿ/ಅಂಚೆಯ ಮೂಲಕ ಈ ಕೆಳಕಂಡ ವಿಳಾಸಕ್ಕೆ ಸಲ್ಲಿಸತಕ್ಕದ್ದು, ಅಂಚೆಯ ಮೂಲಕ ಸಲ್ಲಿಸಿದಾಗಲೂ, ಆಯೋಗವು ನಮೂದಿಸಿದ ದಿನಾಂಕದೊಳಗೆ ಸಲ್ಲಿಸತಕ್ಕದ್ದು.
ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಂಚೆ ಇಲಾಖೆಯ ವಿಳಂಬಕ್ಕೆ ಆಯೋಗವು ಜವಾಬ್ದಾರರಾಗಿರುವುದಿಲ್ಲ ಎಂದು ಈ ಮೂಲಕ ತಿಳಿಸಿದೆ.

ಆನ್ ಲೈನ್ ಮೂಲಕ ಸಲ್ಲಿಸಲು: https://rdpr.karnataka.gov.in/rdc/public/ ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು ಎಂಬ ಶೀರ್ಷಿಕೆಯನ್ನು CLICK ಮಾಡಿ ತಮ್ಮ ಆಕ್ಷೇಪಣೆಗಳನ್ನು ಆನ್‌ಲೈನ್ ನಲ್ಲಿ ಸಲ್ಲಿಸಬಹುದು.
ಅಥವ ಖುದ್ದಾಗಿ/ಅಂಚೆ ಮೂಲಕ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು-560001 ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
