ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದ ಇನ್ಸ್‌ಪೆಕ್ಟರ್ ಹರೀಶ್ (Inspector Harish) ಅವರ ತಂದೆ ಎಂ. ರಾಮಪ್ಪ ಅವರು ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಬಿಎಂಟಿಸಿ ಬಸ್ ನಿರ್ವಾಹಕರಾಗಿ ಕಾರ್ಯನಿರ್ವಹಸಿದ್ದ ರಾಮಪ್ಪ ಅವರು, ಮಡದಿ, ಇನ್ಸ್‌ಪೆಕ್ಟರ್ ಹರೀಶ್ ಅವರು ಸೇರಿದಂತೆ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಮೃತ ಅಂತಿಮ ದರ್ಶನಕ್ಕೆ ಬೆಂಗಳೂರಿನ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಅಂತ್ಯಕ್ರಿಯೆ ಸ್ವಗ್ರಾಮ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಸ್ದೇನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
2022ರಲ್ಲಿ ನಡೆದಿದ್ದ ಕೊಲೆ ಮತ್ತು ಡಕಾಯಿತಿ ಪ್ರಕರಣ ಒಂದರ ಹಿನ್ನೆಲೆಯಲ್ಲಿ ತನಿಖಾ ಕಾರ್ಯದಲ್ಲಿ ನಿರತರಾಗಿದ್ದ ಹರೀಶ್ ಅವರಿಗೆ, ಇಂದು ಸಂಜೆ ತಂದೆ ಅಗಲಿಕೆಯ ಆಘಾತಕಾರಿ ಮಾಹಿತಿ ತಿಳಿದು ಬಂದಿದೆ ಎನ್ನಲಾಗಿದೆ.
