ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

Kharge, Congress cannot tolerate PM's popularity: B.Y. Vijayendra

ಬೆಂಗಳೂರು: ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ತಿಳಿಸಿದ್ದಾರೆ.

ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಉಗ್ರವಾದಿ ಎಂದು ಹೇಳಿದ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಏರ್ಪಡಿಸಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಖರ್ಗೆಯವರು ಮತ್ತು ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ತಿಳಿಸಿದರು. ವಿಶ್ವದ 25ಕ್ಕೂ ಹೆಚ್ಚು ರಾಷ್ಟ್ರಗಳು ಮೋದಿಜೀ ಅವರಿಗೆ ತಮ್ಮ ದೇಶದ ಅತ್ಯುನ್ನತ ಗೌರವ ನೀಡಿವೆ ಎಂದು ಗಮನ ಸೆಳೆದರು. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಕಾಲದಲ್ಲಿ ಸಂಬಳ ಕೊಡುತ್ತಿಲ್ಲ ಎಂದು ಟೀಕಿಸಿದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಯಾವ ಕಡೆ ಸಾಗುತ್ತಿದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರ ದೇಶವಿರೋಧಿ ಹೇಳಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಿದೇಶದಲ್ಲೂ ದೇಶವಿರೋಧಿ ಹೇಳಿಕೆ ನೀಡುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಟೀಕಿಸಿದರು.

ಖರ್ಗೆ ಮತ್ತು ರಾಹುಲ್ ಗಾಂಧಿಯವರು ಭಾರತ ವಿರೋಧಿಗಳು ಎಂದು ಆಕ್ಷೇಪಿಸಿದರು. ಇವರು ವಿದೇಶಿ ಏಜೆಂಟರಂತೆ ನಡೆದುಕೊಳ್ಳುತ್ತಿದ್ದಾರೆ. ಇವರಿಬ್ಬರು ಜಾರ್ಜ್ ಸೊರೊಸ್ ಏಜೆಂಟರು ಎಂದು ಟೀಕಿಸಿದರು. ಅವರ ಮಾನಸಿಕತೆಗೆ ತಕ್ಕಂತೆ ಇವರು ಭಾರತದಲ್ಲಿ ಕುಣಿಯುತ್ತಿದ್ದಾರೆ ಎಂದು ಖಂಡಿಸಿದರು.

ದೇಶಕ್ಕೆ ಅವಮಾನ- ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಖರ್ಗೆಯವರ ಮಾತು ಅಕ್ಷಮ್ಯ ಅಪರಾಧ ಮತ್ತು ದೇಶಕ್ಕೆ ಮಾಡಿದ ಅವಮಾನ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷದವರು ಕುಕ್ಕರ್ ಬ್ಲಾಸ್ಟ್ ಆರೋಪಿಯನ್ನು ಬ್ರದರ್ಸ್ ಎಂದು ಕರೆದಿದ್ದಾರೆ ಎಂದು ಆಕ್ಷೇಪಿಸಿದರು.

ವಿಧಾನಸೌಧದಲ್ಲಿ ಖರ್ಗೆಯವರ ಬಲಗೈ ಬಂಟ, ರಾಜ್ಯಸಭಾ ಸದಸ್ಯ ಪಾಕಿಸ್ತಾನ ಜಿಂದಾಬಾದ್ ಎಂದಿದ್ದರು. ಇದನ್ನು ಖರ್ಗೆಯವರು ಖಂಡಿಸಿರಲಿಲ್ಲ ಎಂದು ದೂರಿದರು. ಮುಂಬೈಯಲ್ಲಿ ಹೊಟೇಲ್ ಮೇಲೆ ಭಯೋತ್ಪಾದಕರ ದಾಳಿ ಆದಾಗ ಕಾಂಗ್ರೆಸ್ಸಿನವರು ಕೈಕಟ್ಟಿ ಕೂತಿದ್ದರು ಎಂದು ಗಮನ ಸೆಳೆದರು.

ವರಿಷ್ಠರು ಈ ಮಾತು ಹೇಳಿಸಿದರೇ?: ಛಲವಾದಿ ನಾರಾಯಣಸ್ವಾಮಿ

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಖರ್ಗೆಯವರು ಈ ಮಾತನಾಡಿದರೇ ಅಥವಾ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಖರ್ಗೆಯವರಿಂದ ಈ ಮಾತನ್ನು ಹೇಳಿಸಿದರೇ ಎಂದು ಪ್ರಶ್ನಿಸಿದರು.

ಬಿಜೆಪಿ, ಆರೆಸ್ಸೆಸ್ ಅನ್ನು ಅವರು ವಿಷಸರ್ಪಕ್ಕೆ ಹೋಲಿಸಿ ಕೊಲ್ಲಲು ಪ್ರಚೋದಿಸುವ ಹೇಳಿಕೆ ನೀಡಿದ್ದರು. ಪ್ರಧಾನಿಯವರು ಭಯೋತ್ಪಾದಕರು ಎಂಬ ಹೇಳಿಕೆ ನಿಮ್ಮ ಮುತ್ಸದ್ಧಿತನವೇ ಎಂದು ಕೇಳಿದರು.

ಸೋನಿಯಾರನ್ನು ಮೆಚ್ಚಿಸಲು ಹೊರಟಿದ್ದಾರಾ?: ಗೋವಿಂದ ಕಾರಜೋಳ

ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಖರ್ಗೆ ಮತ್ತು ಅವರ ಮಗ, ಸೋನಿಯಾ ಗಾಂಧಿಯವರನ್ನು ಮೆಚ್ಚಿಸಲು ಹೀಗೆ ಮಾತನಾಡುತ್ತಿದ್ದಾರಾ ಎಂದು ಕೇಳಿದರು. ಹಿಂದೆ ವಿಷಸರ್ಪಕ್ಕೆ ಹೋಲಿಸಿದ್ದರು ಎಂದು ಖಂಡಿಸಿದರು.

ಪ್ರಧಾನಿಯವರನ್ನು ಹೀಗೆ ಹೋಲಿಸಿ ಮಾತನಾಡಿದ್ದರಿಂದ ಕಾಂಗ್ರೆಸ್ಸಿಗೆ 140 ಕೋಟಿ ಜನರ ಶಾಪ ತಟ್ಟಲಿದೆ. ಅದರಿಂದ ಕಾಂಗ್ರೆಸ್ ನಶಿಸಿ ಹೋಗಲಿದೆ ಎಂದು ನುಡಿದರು.
ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು

ರಾಜಕೀಯ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು

[ccc_my_favorite_select_button post_id="121263"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!