SSLC ಫಲಿತಾಂಶ; ಜಿಲ್ಲೆಗೆ ಹೊಸಕೋಟೆ ಪ್ರಥಮ.. ದೊಡ್ಡಬಳ್ಳಾಪುರಕ್ಕೆ ಎಷ್ಟನೇ ಸ್ಥಾನ ಗೊತ್ತೆ..?

SSLC Exam-1 results to be announced tomorrow (Apr. 23)

ದೊಡ್ಡಬಳ್ಳಾಪುರ: ಇಂದು ಪ್ರಕಟವಾದ 2025-26ನೇ ಸಾಲಿನ ಎಸ್ಎಸ್ಎಲ್‌ಸಿ (SSLC) ಪರೀಕ್ಷೆ -1ರ ಫಲಿತಾಂಶ ದೊಡ್ಡಬಳ್ಳಾಪುರ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 3553 ವಿದ್ಯಾರ್ಥಿಗಳು 2025-26 ನೇ ಸಾಲಿನ ಪರೀಕ್ಷೆಗೆ ಹಾಜರಾಗಿದ್ದು, 3416 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.96.14 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ದೊಡ್ಡಬಳ್ಳಾಪುರ ಶೇ. 70.08 ರಷ್ಟು ಫಲಿತಾಂಶ ಪಡೆದು ಕೊನೆಯ ಸ್ಥಾನ ಪಡೆದು, ತೀವ್ರ ಚರ್ಚೆಗೆ ಕಾರಣವಾಗಿತ್ತು.

ಇನ್ನೂ ಇಂದಿನ ಫಲಿತಾಂಶದಲ್ಲಿ ಶೇ.97.23 ರಷ್ಟು ಪಡೆದು ಹೊಸಕೋಟೆ ಪ್ರಥಮ ಸ್ಥಾನ, ಶೇ.95.63 ರಷ್ಟು ಪಡೆದು ದೇವನಹಳ್ಳಿ ತೃತೀಯ ಸ್ಥಾನ, ಹಾಗೂ ಶೇ.92.94 ರಷ್ಟು ಫಲಿತಾಂಶ ಪಡೆದು ನೆಲಮಂಗಲ ಕೊನೆಯ ಸ್ಥಾನ ಪಡೆದಿದೆ.

SSLC ಫಲಿತಾಂಶ; ಜಿಲ್ಲೆಗೆ ಹೊಸಕೋಟೆ ಪ್ರಥಮ.. ದೊಡ್ಡಬಳ್ಳಾಪುರಕ್ಕೆ ಎಷ್ಟನೇ ಸ್ಥಾನ ಗೊತ್ತೆ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 13083 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 12510 ಮಂದಿ ಉತ್ತೀರ್ಣರಾಗುವ ಮೂಲಕ ಶೇ. 95.62 ಫಲಿತಾಂಶ ಪಡೆದು, ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.

ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.

ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.

ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.

ಖಾಸಗಿ ಶಾಲೆಗಳ ಮೇಲುಗೈ

ಇನ್ನೂ ಇಂದು ಪ್ರಕಟವಾದ ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳು ಶೇ.94.35, ಅನುದಾನಿತ ಶಾಲೆಗಳು ಶೇ. 90.14 ಪಡೆದಿದ್ದರೆ, ಅನುದಾನ ರಹಿತ (ಖಾಸಗಿ ಶಾಲೆಗಳು) 98.27 ರಷ್ಟು ಫಲಿತಾಂಶ ಪಡೆದು ಸರ್ಕಾರಿ ಶಾಲೆಗಳಿಗಿಂತ ಮೇಲುಗೈ ಸಾಧಿಸಿವೆ.

SSLC ರಿಸಲ್ಟ್: ದೊಡ್ಡಬಳ್ಳಾಪುರದ ನಳಂದ ಪ್ರೌಢಶಾಲೆಗೆ ಶೇ.100 ಫಲಿತಾಂಶ

SSLC: 100% results for Nalanda High School in Doddaballapur
SSLC: 100% results for Nalanda High School in Doddaballapur

ದೊಡ್ಡಬಳ್ಳಾಪುರ: ಇಂದು ಪ್ರಕಟವಾದ 2025-26ನೇ ಸಾಲಿನ ಎಸ್ಎಸ್ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ನಳಂದ ಪ್ರೌಢಶಾಲೆ ಶೇ.100% ರಷ್ಟು ಫಲಿತಾಂಶ ಪಡೆದಿದೆ.

2025- 26ನೇ ಸಾಲಿನಲ್ಲಿ 211 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ನಳಂದ ಪ್ರೌಢಶಾಲೆ ತಂದಿದ್ದಾರೆ.

ನಳಂದ ಪ್ರೌಢ ಶಾಲೆಯ ವಿದ್ಯಾರ್ಥಿ ಚಂದ್ರ ಆರ್ 625ಕ್ಕೆ 619 (ರಾಜ್ಯಕ್ಕೆ ಏಳನೇ ರ್‍ಯಾಂಕ್‌), ದೀಕ್ಷಾ ಆರ್ 625ಕ್ಕೆ 616 (ರಾಜ್ಯಕ್ಕೆ ಒಂಬತ್ತನೇ ರ್‍ಯಾಂಕ್‌) ಮತ್ತು ರಮ್ಯಾ ಕೆ 625ಕ್ಕೆ 615 (ರಾಜ್ಯಕ್ಕೆ ಹತ್ತನೇ ರ್‍ಯಾಂಕ್‌) ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ಪಡೆದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕರಾದ ಸುನೀತಾ ಪಿ ಅವರು ತಿಳಿಸಿದ್ದಾರೆ.

ಫಲಿತಾಂಶದ ಬಳಿಕ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿರುವ ಅವರು, ವಿದ್ಯಾರ್ಥಿಗಳೆಲ್ಲರೂ ಅತ್ಯಂತ ಕಠಿಣ ಪರಿಶ್ರಮದಿಂದ ಅಧ್ಯಯನಶೀಲರಾಗಿದ್ದು, ಈ ಫಲಿತಾಂಶವನ್ನು ಪಡೆಯಲು ಸಾಧ್ಯವಾಗಿದೆ ಎಂದರು.

ಈ ವರ್ಷ ಉತ್ತಮ ಫಲಿತಾಂಶ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು, ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶಿಕ್ಷಕರನ್ನು ಹಾಗೂ ಉತ್ತಮವಾಗಿ ಸಹಕರಿಸಿದ ಎಲ್ಲಾ ಪೋಷಕರನ್ನು ಶಾಲಾ ಕಾರ್ಯದರ್ಶಿ ಅನುರಾಧಾ ಕೆಆರ್ ರವರು ಅಭಿನಂದಿಸಿ ವಿದ್ಯಾರ್ಥಿಗಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ.

ಈ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಚಂದ್ರ ಆರ್, ಶಾಲೆಯಲ್ಲಿರುವ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣ, ಶಿಸ್ತು, ಸಮಯ ಪಾಲನೆ ಮತ್ತು ಅಧ್ಯಯನಶೀಲತೆಯೇ ನಮ್ಮ ಸಾಧನೆಗೆ ಕಾರಣವೆಂದು ತಿಳಿಸಿ, ಶಿಕ್ಷಕರ 24X7 ಪರಿಶ್ರಮ ನಮ್ಮನ್ನು ಇಲ್ಲಿಯವರೆಗೆ ಕರೆತಂದಿದೆ ಎಂದರು.

ಅತ್ಯುತ್ತಮ ಫಲಿತಾಂಶ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ಮತ್ತು ಗುರು ವೃಂದದವರು ಶುಭವನ್ನು ಕೋರಿದ್ದಾರೆ.

ರಾಜಕೀಯ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು

[ccc_my_favorite_select_button post_id="121263"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!