ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

Yediyurappa celebrates 5 decades of political journey

ಕೆ.ಎಂ. ಸಂತೋಷ್. ಆರೂಢಿ: ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ ವ್ಯವಸ್ಥೆಗಳನ್ನು ಪ್ರಾರಂಭಿಸಲು ಭೂಮಿಪೂಜೆ ನಡೆಯಲಿದೆ.

ಭೂಮಿಪೂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 50 ವರ್ಷಗಳ ಕಾಲ ರಾಜ್ಯವನ್ನು ಸುತ್ತಿದ್ದಾರೆ. ರೈತರ ಪರವಾಗಿ ಹೋರಾಡಿ, ದೀನದಲಿತರಿಗೆ ನ್ಯಾಯ ಒದಗಿಸಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ಅವರ ಜೀವನ ಮತ್ತು ಸಮಾಜಸೇವೆ ಕುರಿತು ಅವರ ಅಭಿಮಾನೋತ್ಸವ ಆಚರಿಸಲು ಬಿಜೆಪಿ ತೀರ್ಮಾನಿಸಿದೆ.

ಈ ಅಭಿಮಾನೋತ್ಸವವು ಚಿತ್ರದುರ್ಗದಲ್ಲಿ ನಡೆಯಲಿದೆ. ಮೇ 9 ರಂದು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ದೇಶದ ಗೃಹಮಂತ್ರಿ ಅಮಿತ್ ಶಾ ನೆರವೇರಿಸಿ ಯಡಿಯೂರಪ್ಪ ಅವರನ್ನು ಸನ್ಮಾನಿಸಲಿದ್ದಾರೆ.

ಅಭಿಮಾನೋತ್ಸವದ ಹಿಂದಿನ ದಿನ ಅಂದರೆ 8ರಂದು ಸಂಜೆ 6 ಗಂಟೆಗೆ ಯಡಿಯೂರಪ್ಪನವರ ಪುರಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ.

ನಾಡಿನ ಎಲ್ಲಾ ಮಠಾಧೀಶರು, ಮಾಜಿ ಮುಖ್ಯಮಂತ್ರಿಗಳು, ಸಚಿವರು ಮತ್ತು ಗಣ್ಯಮಾನ್ಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ.

ಯಡಿಯೂರಪ್ಪ ಅವರನ್ನು ಬಲ್ಲ ಸಾಹಿತಿಗಳು, ಒಡನಾಡಿಗಳು, ಕಲಾವಿದರು ಸೇರಿ ಸಮಾಜದ ಎಲ್ಲ ರಂಗದವರು ಭಾಗವಹಿಸುತ್ತಾರೆ ಎನ್ನಲಾಗಿದೆ. ಅಲ್ಲದೇ ಸಾರ್ವಜನಿಕರು, ರೈತಾಪಿ ವರ್ಗದವರು ಭಾಗವಹಿಸಲಿದ್ದಾರೆ.

ರಾಜ್ಯದ ಮೂಲೆಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಜನರ ನಿರೀಕ್ಷೆ

ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸಂಭ್ರಮಾಚರಣೆ ಮೂಲಕ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡಿಗೆ ಯಡಿಯೂರಪ್ಪ ಅವರ ಕೊಡುಗೆಯನ್ನು ಎಲ್ಲ ವರ್ಗದವರೂ ಪ್ರಶಂಸಿಸುತ್ತಾರೆ. ಇದಕ್ಕಾಗಿ ಅರ್ಥಪೂರ್ಣ, ಭವ್ಯ ಕಾರ್ಯಕ್ರಮ ಬಿಜೆಪಿ ನಡೆಸುತ್ತಿದೆ. ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿಗಳು ಬರುವ ಸಾಧ್ಯತೆಯಿದೆ.

ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜನರನ್ನು ಕರೆತರುವ ಹಿನ್ನೆಲೆಯಲ್ಲಿ, ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ನಿರೀಕ್ಷಿಸಲಾಗಿದೆ.

SSLC ರಿಸಲ್ಟ್: ದೊಡ್ಡಬಳ್ಳಾಪುರದ ನಳಂದ ಪ್ರೌಢಶಾಲೆಗೆ ಶೇ.100 ಫಲಿತಾಂಶ

SSLC: 100% results for Nalanda High School in Doddaballapur
SSLC: 100% results for Nalanda High School in Doddaballapur

ದೊಡ್ಡಬಳ್ಳಾಪುರ: ಇಂದು ಪ್ರಕಟವಾದ 2025-26ನೇ ಸಾಲಿನ ಎಸ್ಎಸ್ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ನಳಂದ ಪ್ರೌಢಶಾಲೆ ಶೇ.100% ರಷ್ಟು ಫಲಿತಾಂಶ ಪಡೆದಿದೆ.

2025- 26ನೇ ಸಾಲಿನಲ್ಲಿ 211 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ನಳಂದ ಪ್ರೌಢಶಾಲೆ ತಂದಿದ್ದಾರೆ.

ನಳಂದ ಪ್ರೌಢ ಶಾಲೆಯ ವಿದ್ಯಾರ್ಥಿ ಚಂದ್ರ ಆರ್ 625ಕ್ಕೆ 619 (ರಾಜ್ಯಕ್ಕೆ ಏಳನೇ ರ್‍ಯಾಂಕ್‌), ದೀಕ್ಷಾ ಆರ್ 625ಕ್ಕೆ 616 (ರಾಜ್ಯಕ್ಕೆ ಒಂಬತ್ತನೇ ರ್‍ಯಾಂಕ್‌) ಮತ್ತು ರಮ್ಯಾ ಕೆ 625ಕ್ಕೆ 615 (ರಾಜ್ಯಕ್ಕೆ ಹತ್ತನೇ ರ್‍ಯಾಂಕ್‌) ಅಂಕಗಳನ್ನು ಪಡೆಯುವ ಮೂಲಕ ಅತ್ಯುತ್ತಮ ಫಲಿತಾಂಶವನ್ನು ಪಡೆದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕರಾದ ಸುನೀತಾ ಪಿ ಅವರು ತಿಳಿಸಿದ್ದಾರೆ.

ಫಲಿತಾಂಶದ ಬಳಿಕ ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿರುವ ಅವರು, ವಿದ್ಯಾರ್ಥಿಗಳೆಲ್ಲರೂ ಅತ್ಯಂತ ಕಠಿಣ ಪರಿಶ್ರಮದಿಂದ ಅಧ್ಯಯನಶೀಲರಾಗಿದ್ದು, ಈ ಫಲಿತಾಂಶವನ್ನು ಪಡೆಯಲು ಸಾಧ್ಯವಾಗಿದೆ ಎಂದರು.

ಈ ವರ್ಷ ಉತ್ತಮ ಫಲಿತಾಂಶ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು, ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶಿಕ್ಷಕರನ್ನು ಹಾಗೂ ಉತ್ತಮವಾಗಿ ಸಹಕರಿಸಿದ ಎಲ್ಲಾ ಪೋಷಕರನ್ನು ಶಾಲಾ ಕಾರ್ಯದರ್ಶಿ ಅನುರಾಧಾ ಕೆಆರ್ ರವರು ಅಭಿನಂದಿಸಿ ವಿದ್ಯಾರ್ಥಿಗಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ.

ಈ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಚಂದ್ರ ಆರ್, ಶಾಲೆಯಲ್ಲಿರುವ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣ, ಶಿಸ್ತು, ಸಮಯ ಪಾಲನೆ ಮತ್ತು ಅಧ್ಯಯನಶೀಲತೆಯೇ ನಮ್ಮ ಸಾಧನೆಗೆ ಕಾರಣವೆಂದು ತಿಳಿಸಿ, ಶಿಕ್ಷಕರ 24X7 ಪರಿಶ್ರಮ ನಮ್ಮನ್ನು ಇಲ್ಲಿಯವರೆಗೆ ಕರೆತಂದಿದೆ ಎಂದರು.

ಅತ್ಯುತ್ತಮ ಫಲಿತಾಂಶ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ಮತ್ತು ಗುರು ವೃಂದದವರು ಶುಭವನ್ನು ಕೋರಿದ್ದಾರೆ.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!